ಐ ಲವ್ ಪಾಕಿಸ್ತಾನ ಎಂದ ಮಣಿ ಶಂಕರ್ ಅಯ್ಯರ್ ವಿರುದ್ಧ ಪ್ರಕರಣ ದಾಖಲು!
ಜೈಪುರ: ಐ ಲವ್ ಪಾಕಿಸ್ತಾನ ಎಂದ ಕಾಂಗ್ರೆಸ್ ಉಚ್ಚಾಟಿತ ನಾಯಕ ಮಣಿಶಂಕರ್ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಲಾಗಿದ್ದು, ಇದರಿಂದ ಮಣಿಶಂಕರ್ ಅಯ್ಯರ್ ಅವರಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.
ರಾಜಸ್ಥಾನದ ಕೋಟಾದ ಬಿಜೆಪಿ ಹಿಂದುಳಿದ ವರ್ಗಗಳ ವಿಭಾಗದ ಮುಖ್ಯಸ್ಥ ಅಶೋಕ್ ಚೌಧರಿ ಅವರು ಕೋಟಾ ಹೆಚ್ಚುವರಿ ಮುಖ್ಯ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಭಾರತೀಯ ದಂಡ ಸಂಹಿತೆ 124 (ಎ), 500 ಮತ್ತು 504ರ ಅನ್ವಯ ಪ್ರಕರಣ ದಾಖಲಿಸಿದ್ದಾರೆ.
ನಾನು ಭಾರತವನ್ನು ಪ್ರೀತಿಸುವ ಕಾರಣಕ್ಕಾಗಿಯೇ ಪಾಕಿಸ್ತಾನವನ್ನೂ ಪ್ರೀತಿಸುತ್ತೇನೆ ಎಂದು ಮಣಿಶಂಕರ್ ಅಯ್ಯರ್ ಪಾಕಿಸ್ತಾನದ ಕರಾಚಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಹೇಳಿಕೆ ನೀಡಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು.
ಅಷ್ಟೇ ಅಲ್ಲ, ಭಾರತ ಹಾಗೂ ಪಾಕಿಸ್ತಾನ ಮಾತುಕತೆಯ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಅದಕ್ಕಾಗಿ ತುಸು ಕಾಲಾವಶಕಾಶ ಬೇಕು. ಸಮಸ್ಯೆ ಇತ್ಯರ್ಥ ಮಾಡಿಕೊಳ್ಳಲು ಇಸ್ಲಾಮಾಬಾದ್ (ಪಾಕಿಸ್ತಾನ ಸರ್ಕಾರ) ಏನೋ ಒಪ್ಪಿದೆ. ಆದರೆ ಭಾರತ ಒಪ್ಪಿಲ್ಲ ಎಂದು ಮಣಿಶಂಕರ್ ಅಯ್ಯರ್ ಪಾಕಿಸ್ತಾನದ ನೆಲದಲ್ಲೇ ಭಾರತಕ್ಕೆ ಮುಜುಗರವಾಗುವ ಹಾಗೆ ಮಾತನಾಡಿದ್ದರು.
ಇದನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ ಈಗ ಮಣಿಶಂಕರ್ ಅಯ್ಯರ್ ಅವರ ವಿರುದ್ಧ ಮಾನನಷ್ಟ ಹಾಗೂ ದೇಶದ್ರೋಹದ ಪ್ರಕರಣ ದಾಖಲಿಸಿದೆ. ಇದೇ ಮಣಿಶಂಕರ್ ಅಯ್ಯರ್ ಹಿಂದೆ ಮೋದಿ ಅವರನ್ನು ನೀಚ, ಚಾಯ್ ವಾಲಾ ಎಂದಿದ್ದರು. ನೀಚ ಎಂದಿದ್ದಕ್ಕೆ ಕಾಂಗ್ರೆಸ್ ಇವರನ್ನು ಪಕ್ಷದಿಂದ ಉಚ್ಚಾಟಿಸಿದೆ.
Leave A Reply