ಕರಾವಳಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸಂಚಲನ, ಕಾಂಗ್ರೆಸ್ ಮೌನ
ಮಂಗಳೂರು: ಚುನಾವಣೆ ಚಾಣಕ್ಯ, ಬಿಜೆಪಿಯ ವಿಜಯಯಾತ್ರೆಯನ್ನು ರಾಷ್ಟ್ರದ್ಯಂತ ಯಶಸ್ವಿಯಾಗಿ ಮುನ್ನಡೆಸಿಕೊಂಡು ಬರುತ್ತಿರುವ ಅಮಿತ್ ಶಾ ಇಂದು ಬೆಳಗ್ಗೆಯಿಂದ ಕರಾವಳಿಯಾದ್ಯಂತ ಭರ್ಜರಿ ಸಂಚಲನ ನಡೆಸಿದ್ದು, ಇಂದು ಕುಲ್ಕಂದಲ್ಲಿ ನಡೆದ ನವಶಕ್ತಿ ಸಮಾವೇಶದಲ್ಲಿ ರಾಜ್ಯ ಸರ್ಕಾರದ ಹುಳುಕುಗಳನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ರಾಜ್ಯದಲ್ಲಿ ಸಮಾಜವನ್ನು ಒಡೆದು ಮತ ದ್ರುವೀಕರಣ ಮತ್ತು ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ. ಸಮಾಜ ಒಡೆದು ಮತ ಪಡೆಯುತ್ತೇನೆ ಎಂಬ ಬ್ರಹ್ಮೆಯಲ್ಲಿ ಸಿದ್ದರಾಮಯ್ಯ ರಾಜ್ಯದಲ್ಲಿ ಒಡೆದು ಆಳುವ ನೀತಿ ಪ್ರದರ್ಶಿಸುತ್ತಿದ್ದಾರೆ. ಆದರೆ ಸಿದ್ದರಾಮಯ್ಯರ ಒಡೆದು ಆಳುವ ನೀತಿ ರಾಜ್ಯದಲ್ಲಿ ಫಲಿಸುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.
ಕೇಂದ್ರ ಸರ್ಕಾರ 80 ಸಾವಿರ ಕೋಟಿಯ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿದೆ. ಆದರೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತ್ರ ಕೇಂದ್ರ ಸರ್ಕಾರ ಏನು ನೀಡಿದೆ ಎಂದು ತಮ್ಮ ಜವಾಬ್ದಾರಿಯಿಂದ ನುಣಿಚಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಶಾಸಕ ಎನ್.ಎ.ಹ್ಯಾರಿಸ್ ಮಗ ಸಾಮಾನ್ಯ ನಾಗರೀಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದರೂ ಕಠಿಣ ಕ್ರಮ ಕೈಗೊಂಡಿಲ್ಲವೇಕೇ..? ಎಂದು ಪ್ರಶ್ನಿಸಿದರು.
ಅಮಿತ್ ಶಾ ತಂತ್ರ ಅರಿಯಲು ಕಾಂಗ್ರೆಸ್ ಪ್ರಯತ್ನ..?
ಬಿಜೆಪಿ ಅಮಿತ್ ಶಾ ಕರಾವಳಿಯಲ್ಲಿ ಮಿಂಚಿನ ಸಂಚಾರ ಮಾಡುತ್ತಿರುವುದು ಕಾಂಗ್ರೆಸ್ಸಿಗರಲ್ಲಿ ವಿಚಿತ್ರ ಮೌನಕ್ಕೆ ಕಾರಣವಾಗಿದೆ. ಚಾಣಕ್ಯ ಅಮಿತ್ ಶಾ ನಡೆಸುವ ತಂತ್ರಗಳಾವುವು ಎಂಬುದರ ಕುರಿತು ಅರಿಯಲು ಕಾಂಗ್ರೆಸ್ಸಿಗರು ಹರಸಾಹಸ ಪಡುತ್ತಿದ್ದಾರೆ ಎನ್ನಲಾಗಿದೆ.
ರಾತ್ರಿ ಮಂಗಳೂರಿಗೆ ಬಂದಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾಗೆ ಸ್ವಲ್ಪ ಆರೋಗ್ಯ ಸಮಸ್ಯೆ ಕಾಣಿಸಿಕೊಂಡರೂ, ನಂತರ ಸುಧಾರಿಸಿಕೊಂಡು ಬೆಳಗ್ಗೆ ಕುಕ್ಕೆ ಸುಬ್ರಮಣ್ಯ ದೇವಸ್ಥಾನಕ್ಕೆ ಭೇಟಿ ಮಾಡಿ ದೇವರ ದರ್ಶನ ಪಡೆದರು. ನಂತರ ಕುಲ್ಕಂದಲ್ಲಿ ನಡೆದ ನವಶಕ್ತಿ ಸಮಾವೇಶದಲ್ಲಿ ಮಾತನಾಡಿದರು. ವಿಧಾನಸಭೆ ಚುನಾವಣೆ ಹೊತ್ತಿನಲ್ಲೇ ಅಮಿತ್ ಶಾ ಕರಾವಳಿಯಲ್ಲಿ ಮಿಂಚಿನ ಸಂಚಾರ ಮಾಡುತ್ತಿರುವುದು ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಹುರುಪು ತುಂಬುತ್ತಿದ್ದರೇ, ಕಾಂಗ್ರೆಸ್ ನಾಯಕರಲ್ಲಿ ನಡುಕ ಉಂಟಾಗಿದ್ದು, ಶಾ ತಂತ್ರಗಳು ಕುರಿತು ಹದ್ದಿನ ಕಣ್ಣಿಟ್ಟಿದ್ದಾರೆ.
Leave A Reply