ಯೋಗಿ ರಾಜ್ಯದಲ್ಲಿ ಅಭಿವೃದ್ಧಿಯ ಶಕೆ, ಯುಪಿಯಲ್ಲಿ ತಲೆ ಎತ್ತದಲ್ಲಿದೆ ಭಾರತದ ಅತಿದೊಡ್ಡ ವಿಮಾನ ನಿಲ್ದಾಣ
ಲಖನೌ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೇವಲ ಹಿಂದೂವಾದಿ, ಅಭಿವೃದ್ಧಿ ಅಜೆಂಡಾ ಇಲ್ಲ ಎಂದು ಬೊಗಳೆ ಬಿಡುತ್ತಿದ್ದ ಬುದ್ಧಿಜೀವಿಗಳಿಗೆ ತಕ್ಕ ಉತ್ತರವನ್ನು ಯೋಗಿ ಆದಿತ್ಯನಾಥ್ ತಮ್ಮ ಕಾರ್ಯಗಳ ಮೂಲಕ ನೀಡಿದ್ದಾರೆ. ರಾಜ್ಯದಲ್ಲಿ ಅಪರಾಧ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಡೊಂಡಿದ್ದ ಯೋಗಿ ಆದಿತ್ಯನಾಥ್ ಇದೀಗ ಅಭಿವೃದ್ಧಿಗೆ ಮುನ್ನುಡಿ ಬರೆಯಲಿರುವ, ಭಾರತದಲ್ಲೇ ಇತಿಹಾಸ ಸೃಷ್ಟಿಸುವ ನಿರ್ಧಾರ ಕೈಗೊಂಡಿದ್ದು, ಕೇಂದ್ರ ವಿಮಾನಯಾನ ಸಚಿವಾಲಯದ ಅಧಿಕಾರಿಗಳು ಉತ್ತರಪ್ರದೇಶದಲ್ಲಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಗ್ರೇಟರ್ ನೋಯ್ಡಾದಲ್ಲಿ ಈ ವಿಮಾನದ ನಿಲ್ದಾಣ ನಿರ್ಮಿಸಲು ನಿರ್ಧರಿಸಲಾಗಿದ್ದು, ಕೇಂದ್ರ ಸರ್ಕಾರ ಮತ್ತು ಉತ್ತರ ಪ್ರದೇಶ ಸರ್ಕಾರದ ಸಹಯೋಗದಲ್ಲಿ ನಿರ್ಮಾಣ ಕಾಮಗಾರಿ ಕೈಗೊಳ್ಳಲು ನಿರ್ಧರಿಸಲಾಗಿದೆ. ಈ ವಿಮಾನ ನಿಲ್ದಾಣ ಮುಂದಿನ ಐದು ವರ್ಷದಲ್ಲಿ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ. ಪ್ರಥಮ ಹಂತದಲ್ಲಿ ಒಂದು ಸಾವಿರ ಎಕರೆ ಪ್ರದೇಶದಲ್ಲಿ 2000 ಸಾವಿರ ಕೋಟಿ ವೆಚ್ಚದಲ್ಲಿ ಕಾಮಗಾರಿ ನಡೆಯಲ್ಲಿದ್ದು, ಕ್ಯಾಬಿನೆಟ್ ಒಪ್ಪಿಗೆಯನ್ನು ಸಹ ನೀಡಿದೆ.
ಪ್ರತಿ ವರ್ಷದ 30ರಿಂದ 35 ಮಿಲಿಯನ್ ಜನರ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ವಿಮಾನ ನಿಲ್ದಾಣ ನಿರ್ಮಿಸಲಾಗುತ್ತಿದೆ. ನಾಗರಿಕ ವಿಮಾನಯಾನ ಇಲಾಖೆಯ ಪಶ್ಚಿಮ ಉತ್ತರ ಪ್ರದೇಶದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಮತ್ತು ಆರ್ಥಿಕ ಸಾಮರ್ಥ್ಯವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.
ಉತ್ತರಪ್ರದೇಶದಲ್ಲಿ 2001ರಲ್ಲಿ ಪ್ರಸ್ತುತ ಗೃಹ ಸಚಿವರಾಗಿರುವ ರಾಜನಾಥ್ ಸಿಂಗ್ ಅವರು ಮುಖ್ಯಮಂತ್ರಿಯಾಗಿದ್ದಾಗ ಈ ಯೋಜನೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅಂದು ಬಿಜೆಪಿ ಆರಂಭಿಸಿದ ಯೋಜನೆಗೆ ಇಂದು ಯೋಗಿ ಆದಿತ್ಯನಾಥ್ ಪೂರಕವಾಗಿ ಕೆಲಸ ಮಾಡಿದ್ದು, ವಿಮಾನ ನಿಲ್ದಾಣಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ರಸ್ತೆ ಸೇರಿ ನಾನಾ ಮಾದರಿಯ ಯೋಜನೆಗಳನ್ನು ಆದಿತ್ಯನಾಥ್ ಸರ್ಕಾರ ಕೈಗೊಳ್ಳಲ್ಲಿದೆ. ಈ ಯೋಜನೆಯಿಂದ ಮಥುರಾ, ವೃಂದಾವನ ಮತ್ತು ಆಗ್ರಾ ಪ್ರವಾಸೋದ್ಯಮದ ಅಭಿವೃದ್ಧಿಗೆ ಬಾರಿ ಅನುಕೂಲವಾಗಲಿದೆ.
Leave A Reply