ಜಮ್ಮು-ಕಾಶ್ಮೀರದಲ್ಲಿ ಪಾಕಿಸ್ತಾನದ ಶಂಕಿತ ಉಗ್ರನ ಶವ ಪತ್ತೆ, ಪಾಕ್ ನಿಜಬಣ್ಣಕ್ಕಿದು ನಿದರ್ಶನ!
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಪಾಕಿಸ್ತಾನ ಉಪಟಳಕ್ಕೆ ದಶಕದ ಉದಾಹರಣೆಯಿದ್ದು, ಈಗ ಮತ್ತೊಮ್ಮೆ ಇದಕ್ಕೆ ನಿದರ್ಶನ ಸಿಕ್ಕಿದೆ.
ಬಂಡಿಪೋರಾ ಜಿಲ್ಲೆಯ ಹಜಿನ್ ಪ್ರದೇಶದಲ್ಲಿ ಮಂಗಳವಾರ ಬೆಳಗ್ಗೆ ಪಾಕಿಸ್ತಾನದ ಶಂಕಿತ ಉಗ್ರನ ಶವ ಪತ್ತೆಯಾಗಿದ್ದು, ಬೆಳಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಗಾಯಗೊಂಡ ಉಗ್ರ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ತೀವ್ರ ಗಾಯಗೊಂಡ ಆತ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.
ಬೆಳಗ್ಗೆಯೇ ನಡೆದ ಗುಂಡಿನ ಚಕಮಕಿಯಲ್ಲಿ ಉಗ್ರನ ಹತ್ಯೆ ಮಾಡಲಾಗಿದೆ. ಜಮ್ಮು-ಕಾಶ್ಮೀರ ಪೊಲೀಸರು, ಸೇನೆ ಹಾಗೂ ಸಿಆರ್ ಪಿಎಫ್ ಯೋಧರು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಉಗ್ರನನ್ನು ಹತ್ಯೆಗೈಯ್ಯಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಎಸ್.ಪಿ. ವೇದ್ ಮಾಹಿತಿ ನೀಡಿದ್ದಾರೆ.
ಗುಂಡಿನ ದಾಳಿಯಲ್ಲಿ ಮೃತಪಟ್ಟ ಪಾಕಿಸ್ತಾನಿ ಉಗ್ರ, ಲಷ್ಕರೆ ತಯ್ಯಬಾ ಉಗ್ರ ಸಂಘಟನೆಯ ಸದಸ್ಯ ಎಂದು ಶಂಕಿಸಲಾಗಿದೆ. ಆತನ ಹೆಸರು ಸೇರಿ ಹಲವು ವಿವರಗಳ ಕುರಿತು ಮಾಹಿತಿ ಲಭ್ಯವಾಗಿಲ್ಲ ಎಂದು ವೇದ್ ತಿಳಿಸಿದ್ದಾರೆ.
ಪ್ರಸಕ್ತ ವರ್ಷದಲ್ಲಿ ಪಾಕಿಸ್ತಾನ ಜಮ್ಮು-ಕಾಶ್ಮೀರದಲ್ಲಿ ಸುಮಾರು 50ಕ್ಕೂ ಬಾರಿ ಕದನ ವಿರಾಮ ಉಲ್ಲಂಘಿಸುವ ಜತೆಗೆ ಹಲವು ಬಾರಿ ಉಗ್ರರನ್ನು ಛೂ ಬಿಡುತ್ತಿದೆ. ಇದಕ್ಕೆ ಪ್ರತಿಯಾಗಿ ಭಾರತೀಯ ಸೈನಿಕರು ಸಹ ಪ್ರತ್ಯುತ್ತರ ನೀಡುತ್ತಿದ್ದಾರೆ.
Leave A Reply