ಸರ್ಕಾರಿ ಶಾಲೆಯಲ್ಲಿ ಖುರಾನ್ ರೆಕಾರ್ಡ್ ಕೇಳಬೇಕು ಎಂದು ವಿದ್ಯಾರ್ಥಿಗಳಿಗೆ ಒತ್ತಾಯ, ದೀದಿ ಏನು ಮಾಡುತ್ತಿದ್ದೀರಿ?
ಕೋಲ್ಕತ್ತಾ: ಕಮ್ಯುನಿಸ್ಟರ ವಿರುದ್ಧ ಆಜೀವ ಪರ್ಯಂತ ಹೋರಾಡಿ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿಯವರು ಅಧಿಕಾರಕ್ಕೆ ಬಂದಾಗ ಉತ್ತಮ ಆಡಳಿತ ನೀಡುವ ಭರವಸೆ ಮೂಡಿಸಿದ್ದರು. ಆದರೆ ಅಧಿಕಾರ ಮದವೋ ಏನೋ, ರಾಜ್ಯದಲ್ಲಿ ಹಿಂದೂಗಳ ವಿರುದ್ಧ ಯಾವುದೇ ಷಡ್ಯಂತ್ರ ನಡೆದರೂ, ಹಿಂದೂಗಳಿಗೆ ಅನ್ಯಾಯವಾದರೂ ಮಮತಾ ಬ್ಯಾನರ್ಜಿ ಮಾತ್ರ ಏನೂ ಆಗೇ ಇಲ್ಲ ಎಂಬಂತೆ ಇರುತ್ತಾರೆ.
ಇದಕ್ಕೆ ಸಾಕ್ಷಿಯಾಗಿ, ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಯೊಂದರಲ್ಲಿ ಖುರಾನ್ ರೆಕಾರ್ಡ್ ಆಗಿರುವ ಆಡಿಯೋ ಒಂದು ತರಗತಿ ವೇಳೆ ಕೇಳಬೇಕು ಎಂದು ವಿದ್ಯಾರ್ಥಿಗಳನ್ನು ಒತ್ತಾಯಿಸಿರುವ ಕುರಿತ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಕ್ರೋಶ ಸಹ ವ್ಯಕ್ತವಾಗಿದೆ.
ಪಶ್ಚಿಮ ಬಂಗಾಳದ ಬಿರ್ಭುಮ್ ಎಂಬ ಜಿಲ್ಲೆಯ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳಿಗೆ ಖುರ್ರಾನ್ ಆಡಿಯೋ ಕೇಳುವಂತೆ ಒತ್ತಾಯಿಸಿದ್ದು, ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾರಿ ಟೀಕೆಗಳು ಬಂದಿವೆ.
ಇತ್ತೀಚೆಗಷ್ಟೇ ಪಶ್ಚಿಮ ಬಂಗಾಳದಲ್ಲಿ ಧರ್ಮ ಬೋಧನೆ, ಹಿಂದುತ್ವ ಮನಸ್ಥಿತಿ ತುಂಬಲಾಗುತ್ತಿದೆ ಎಂದು ಆರೋಪಿಸಿ ರಾಜ್ಯದಲ್ಲಿ ಆರೆಸ್ಸೆಸ್ ನಡೆಸುತ್ತಿರುವ ಸುಮಾರು 125 ಶಾಲೆಗಳನ್ನು ಮುಚ್ಚಲು ನಿರ್ಧರಿಸಿರುವ ಮಮತಾ ಬ್ಯಾನರ್ಜಿಯವರು ಈಗ ಶಾಲೆಯಲ್ಲೇ ಖುರ್ರಾನ್ ಆಡಿಯೋ ಕೇಳಲು ಒತ್ತಾಯಿಸಿರುವ ಪ್ರಕರಣದ ಕುರಿತು ಏನು ಪ್ರತಿಕ್ರಿಯಿಸುತ್ತಾರೆ? ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುದು ಯಕ್ಷಪ್ರಶ್ನೆಯಾಗಿದೆ. ಆದರೆ ಯಾವಾಗಲೇ ಹಿಂದೂಗಳ ಮೇಲೆ ದೌರ್ಜನ್ಯ ಎಸಗಿದರೂ, ಹಿಂದುತ್ವಕ್ಕೆ ಧಕ್ಕೆ ಬಂದರೂ ಮಮತಾ ಬ್ಯಾನರ್ಜಿಯವರು ದಿವ್ಯ ನಿರ್ಲಕ್ಷ್ಯ ತಾಳುತ್ತಾರೆ ಎಂಬುದೇ ಗಮನಾರ್ಹ.
Leave A Reply