ಹಿಂದೂ ವಿದ್ಯಾರ್ಥಿಗಳು ಹೋಳಿ ಆಚರಿಸಿದಕ್ಕೆ ಹಲ್ಲೆ ನಡೆಸಿದ ಕೇರಳದ ಫಾರೂಕ್ ಕಾಲೇಜು ಸಿಬ್ಬಂದಿ
ಕೊಜ್ಜಿಕೋಡ್: ಕೇರಳದಲ್ಲಿ ಹಿಂದೂಗಳ ಮೇಲೆ, ಆಚರಣೆ ಮೇಲೆ ನಡೆಯುತ್ತಿರುವ ದೌರ್ಜನ್ಯ, ದಬ್ಬಾಳಿಕೆ ಮುಂದುವರಿದಿದ್ದು, ಇದೀಗ ಹೋಳಿ ಹಬ್ಬ ಆಚರಿಸಿದ್ದಾರೆ ಎಂದು ವಿದ್ಯಾರ್ಥಿಗಳಿಬ್ಬರನ್ನು ಕಾಲೇಜಿನ ಉಪನ್ಯಾಸಕರು ಮತ್ತು ಇತರೆ ಸಿಬ್ಬಂದಿಯೇ ಹಲ್ಲೆ ನಡೆಸಿದ್ದಾರೆ. ಹಿಂದೂಗಳ ಆಚರಣೆಗೆ ಧಕ್ಕೆ ತಂದಿದ್ದಾರೆ.
ಕೇರಳದ ಕಾಲಿಕಟ್ ನ ಫಾರೂಕ್ ಕಾಲೇಜಿನ ಆವರಣದಲ್ಲಿ ಹೋಳಿ ಹಬ್ಬದ ನಿಮಿತ್ತ ಬಣ್ಣದಾಟ ಆಡುತ್ತಿದ್ದ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಲಾಗಿದೆ. ಫಾರೂಕ್ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಬಣ್ಣವಾಡುತ್ತಿರುವುದನ್ನೇ ನೆಪವಾಗಿಟ್ಟುಕೊಂಡು ಕಬ್ಬಿಣ್ಣದ ರಾಡ್ ಮತ್ತು ಪೈಪ್ ಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಲಾಗಿದೆ. ದಾಳಿಯಲ್ಲಿ ವಿದ್ಯಾರ್ಥಿಗಳಿಗೆ ತೀವ್ರ ಗಾಯಗಳಾಗಿವೆ.
ಗಾಯಗೊಂಡಿರುವ ವಿದ್ಯಾರ್ಥಿಗಳನ್ನು ಕೊಜ್ಜಿಕೋಡ್ ಮೆಡಿಕಲ್ ಕಾಲೇಜಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಒಬ್ಬ ವಿದ್ಯಾರ್ಥಿ ಕಣ್ಣಿಗೆ ಗಂಭೀರ ಗಾಯವಾಗಿದ್ದು, ಮೂವರು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ ಎನ್ನಲಾಗಿದೆ.
ಕಾಲೇಜಿನಲ್ಲಿ ಉಪನ್ಯಾಸಕರು ಹೋಳಿ ಹಬ್ಬ ಬ್ಯಾನ್ ಮಾಡುವಂತೆ ಇತರೆ ವಿದ್ಯಾರ್ಥಿಗಳಿಗೆ ಪ್ರಚೋಧನೆ ನೀಡಿದ್ದಾರೆ. ಅಲ್ಲದೇ ನಮ್ಮ ಮೇಲೆ ಹೋಳಿ ಏಕೆ ಆಚರಿಸುತ್ತೀರಿ ಎಂದು ಹಲ್ಲೆ ಮಾಡಿದ್ದಾರೆ ಎಂದು ಗಾಯಗೊಂಡಿರುವ ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ವಸತಿ ನಿಲಯದ ಸಿಬ್ಬಂದಿ ವಸತಿ ನಿಲಯದಲ್ಲಿ ಮೊದಲು ದಾಳಿ ನಡೆಸಿದ್ದಾರೆ, ನಂತರ ಬಸ್ ಸ್ಟ್ಯಾಂಡ್ ನಲ್ಲಿ ಕಾಲೇಜಿನ ಉಪನ್ಯಾಸಕರು ದಾಳಿ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
Leave A Reply