ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಕಾರಿನ್ ಮೇಲೆ ಪೆಟ್ರೋಲ್ ಬಾಂಬ್ ದಾಳಿ,
ಕೋಯಂಬತ್ತೂರ್: ಕೇರಳ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರು, ಹಿಂದೂಪರ ಸಂಘಟನೆಗಳ ಮುಖಂಡರ ಮೇಲೆ ನಡೆಯುತ್ತಿದ್ದ ಮಾರಣಾಂತಿಕ ದಾಳಿಗಳು ಇದೀಗ ತಮಿಳುನಾಡಿಗೂ ಹರಡಿದೆ. ಬಿಜೆಪಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯ ಕಾರಿನ ಮೇಲೆ ಪೆಟ್ರೋಲ್ ಬಾಂಬ್ ನಿಂದ ದಾಳಿ ಮಾಡಲಾಗಿದೆ.
ದೇಶಾದ್ಯಂತ ಬಿಜೆಪಿ ಭರ್ಜರಿ ಮತ್ತು ಸರಣಿ ವಿಜಯ ಸಾಧಿಸುತ್ತಿರುವುದರಿಂದ ಕಂಗೆಟ್ಟಿರುವ ವಿರೋಧ ಪಕ್ಷಗಳ ಮುಖಂಡರು ಬಿಜೆಪಿಯ ಕಾರ್ಯಕರ್ತರನ್ನು ಗುರಿಯಾಗಿಟ್ಟುಕೊಂಡು ದಾಳಿ ಮುಂದುವರಿಸಿದ್ದಾರೆ. ತಮಿಳುನಾಡಿನ ಕೋಯಂಬತ್ತೂರ್ ಜಿಲ್ಲೆಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕಾರಿನ ಮೇಲೆ ಪೆಟ್ರೋಲ್ ಬಾಂಬ್ ನಿಂದ ದಾಳಿ ನಡೆಸಿದ್ದಾರೆ.
ಈ ಕುರಿತು ಸ್ಥಳ ಪರಿಶೀಲನೆ ನಡೆಸಿರುವ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಇತ್ತೀಚೆಗೆ ಕೋಯಂಬತ್ತೂರ್ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಿರುವ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಬಿಜೆಪಿಯನ್ನು ಚುನಾವಣೆಯಲ್ಲಿ ಎದುರಿಸಲು ಆಗದೇ ಇಂತಹ ಹೀನ ಕೃತ್ಯಗಳನ್ನು ವಿರೋಧಿ ಪಕ್ಷಗಳು ಮಾಡುತ್ತಿವೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ.
Leave A Reply