• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಆನೇಕಲ್ ನಲ್ಲಿ  ಬಿಜೆಪಿ ಮುಖಂಡನ ಹತ್ಯೆಗೆ ಯತ್ನ, ಎತ್ತ ಸಾಗುತ್ತಿದೆ ಕರ್ನಾಟಕ

TNN Correspondent Posted On March 21, 2018
0


0
Shares
  • Share On Facebook
  • Tweet It

ಆನೇಕಲ್ : ರಾಜಕೀಯ ದ್ವೇಷಕ್ಕೆ ಕೊಲೆ, ಹತ್ಯೆಗಳಾಗುವುದು ಶಾಂತಿಧೂತರ ರಾಜ್ಯ ಕರ್ನಾಟಕದಲ್ಲಿ ನಡೆಯುವುದೇ ಇಲ್ಲ ಎಂಬಂಥ ಸ್ಥಿತಿ ಇತ್ತು. ಆದರೆ ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಕ್ಕೇರಿದ ನಂತರ ರಾಜಕೀಯ ದ್ವೇಷಕ್ಕೆ ಕೊಲೆ, ಸುಲಿಗೆ, ಹತ್ಯೆ, ಬೆದರಿಸುವ ಕಾರ್ಯಗಳು ಹೆಚ್ಚಳವಾಗಿದೆ. ಬಿಜೆಪಿ ಮತ್ತು ಹಿಂದೂಪರ ಕಾರ್ಯಕರ್ತರ ಹತ್ಯೆಗಳು ಕಳೆದ ಐದು ವರ್ಷದಲ್ಲಿ ಅತಿ ಹೆಚ್ಚು ನಡೆದಿವೆ. ಇದೀಗ ಮತ್ತೊಂದು ಘಟನೆ ಆನೇಕಲ್ ನಲ್ಲಿ ನಡೆದಿದೆ.

ಆನೇಕಲ್ ತಾಲೂಕಿನಲ್ಲಿ ಬಿಜೆಪಿ ಮುಖಂಡನ ಹತ್ಯೆಗೆ ದುಷ್ಕರ್ಮಿಗಳು ಯತ್ನಿಸಿದ್ದಾರೆ. ಆನೇಕಲ್ ತಾಲೂಕಿನ ಚಂದಾಪುರ ಕೆರೆ ಏರಿ ಮೇಲೆ ಬಿಜೆಪಿ ಮುಖಂಡನ ಮೇಲೆ ಹತ್ಯೆಗೆ ಯತ್ನ ನಡೆಸಲಾಗಿದೆ. ಬಿಜೆಪಿ ಮುಖಂಡ ಮಂಜುನಾಥ ರೆಡ್ಡಿ ಹಲ್ಲೆಗೆ ಒಳಗಾದವರು. ದುಷ್ಕರ್ಮಿಗಳು ಹಲ್ಲೆ ನಡೆಸಿ ಹತ್ಯೆಗೆ ಯತ್ನಿಸಿದ್ದಾರೆ. ಮಂಜುನಾಥ ರೆಡ್ಡಿ ಕಳೆದ ರಾತ್ರಿ ದ್ವಿಚಕ್ರ ವಾಹನದಲ್ಲಿ ತೆರಳುವಾಗ ದುಷ್ಕರ್ಮಿಗಳ ತಂಡ ಹಲ್ಲೆ ನಡೆಸಿದೆ. ಅದೃಷ್ಟವಶಾತ್ ಮಂಜುನಾಥ ರೆಡ್ಡಿ ಅವರಿಗೆ ಯಾವುದೇ ಹಾನಿಯಾಗಿಲ್ಲ.

ಸೂರ್ಯ ಸಿಟಿ ಪೊಲೀಸ್ ಠಾಣೆಯಲ್ಲಿ ಹಲ್ಲೆ ನಡೆದಿರುವ ಕುರಿತು ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್’ಪಿ ಭೀಮಾಶಂಕರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯರ್ತನನ್ನು ಬ್ಯಾನರ್ ಕಟ್ಟುವ ವೇಳೆಯಲ್ಲೇ ಹಲ್ಲೆ ಮಾಡಲಾಗಿತ್ತು. ಇದೀಗ ಅಂತಹುದ್ದೇ ಘಟನೆ ಮರುಕಳಿಸಿದೆ. ಬಿಜೆಪಿ ಕಾರ್ಯಕರ್ತರು ಆತಂಕದಲ್ಲಿ ತಿರುಗಾಡುವಂತ ಸ್ಥಿತಿ ನಿರ್ಮಾಣವಾಗಿದೆ.

 

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ

  • Privacy Policy
  • Contact
© Tulunadu Infomedia.

Press enter/return to begin your search