ಉಕ್ಕಿನ ಮನುಷ್ಯ ಸರ್ದಾರ್ ಪಟೇಲ್ ರ ಪ್ರತಿಮೆಗೆ ಅವಮಾನ
ಅಹಮದಾಬಾದ್: ದೇಶದ ಪ್ರಥಮ ಉಪ ಪ್ರಧಾನಿ, ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಗೆ ದುಷ್ಕರ್ಮಿಗಳು ಖಾಲಿ ತಂಪು ಪಾನೀಯ ಬಾಟಲಿಗಳನ್ನು ಹಾಕುವ ಮೂಲಕ ಅಪಮಾನ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ರಾಜ್ಯದಲ್ಲೇ ಈ ಘಟನೆ ನಡೆದಿರುವುದು ಮಾತ್ರ ದುರಂತ. ಬಿಜೆಪಿ ಹಿರಿಯ ಮುಖಂಡ ಎಲ್.ಕೆ. ಅಡ್ವಾಣಿ 1992 ರ ಅಕ್ಟೋಬರ್ ನಲ್ಲಿ ಈ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿದ್ದರು.
ಪ್ರತಿಮೆಗೆ ಅವಮಾನ ಮಾಡಿರುವ ಕುರಿತು ಅದಲಾಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ. ಬಾಬರಿ ಮಸೀದಿ ಧ್ವಂಸಗೊಳ್ಳುವ ಎರಡು ತಿಂಗಳ ಮುಂಚೆ ಸರ್ದಾರ್ ಪಟೇಲ್ ಮೂರ್ತಿಯನ್ನು ಅನಾವರಣಗೊಳಿಸಲಾಗಿತ್ತು.
ಗ್ರಂಥಾಲಯದ ಎದುರಿರುವ ಬ್ಯಾಂಕ್‌ನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಆರೋಪಿಗಳ ಪತ್ತೆಗೆ ಬಲೆ ಬೀಸುತ್ತೇವೆ’ ಎಂದು ಅದಾಲಜ್ ಠಾಣೆಯ ಇನ್ಸ್‌ಪೆಕ್ಟರ್ ಜೆ.ಜಿ.ವಘೇಲಾ ತಿಳಿಸಿದ್ದಾರೆ. ಪಟೇಲ್ ಪ್ರತಿಮೆಗೆ ಅವಮಾನ ಮಾಡಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಗ್ರಾಮಸ್ಥರೇ ಪ್ರತಿಮೆಯನ್ನು ಸ್ವಚ್ಛಗೊಳಿಸಿದ್ದಾರೆ. ಗ್ರಂಥಾಲಯದ ವ್ಯವಸ್ಥಾಪಕ ಹಸ್ಮೂಕ್ ಪಟೇಲ್ ಅವರು ಅದಾಲಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಸಿದ್ದಾರೆ.
Leave A Reply