• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಎನ್ ಸಿಸಿ ಬಗ್ಗೆ ಏನೂ ಗೊತ್ತಿಲ್ಲ ಎಂದ ರಾಹುಲ್ ಗಾಂಧಿಗೆ ಎನ್ ಸಿಸಿ ಸದಸ್ಯೆಯೊಬ್ಬರು ಏನು ಹೇಳಿದ್ದಾರೆ ಗೊತ್ತಾ?

TNN Correspondent Posted On March 26, 2018
0


0
Shares
  • Share On Facebook
  • Tweet It

ಮುಂಬೈ: ಈ ರಾಹುಲ್ ಗಾಂಧಿ ಎಲ್ಲಿಗೇ ಹೋದರೂ ಒಂದೋ ಮೋದಿ ಮೋದಿ ಎಂದು ಕೂಗುತ್ತಾರೆ. ಇಲ್ಲವೇ, ಕಠಿಣ ಪ್ರಶ್ನೆ ಕೇಳಿ ಪೇಚಿಗೆ ಸಿಲುಕಿಸುತ್ತಾರೆ ಅಥವಾ ರಾಹುಲ್ ಗಾಂಧಿಯೇ ಪೇಚಿಗೆ ಸಿಲುಕುತ್ತಾರೆ. ಎರಡು ದಿನಗಳ ಹಿಂದಷ್ಟೇ ಕರ್ನಾಟಕಕ್ಕೆ ಬಂದಿದ್ದ ರಾಹಲ್ ಗಾಂಧಿಗೆ ಕಠಿಣ ಪ್ರಶ್ನೆಯೊಂದು ಎದುರಾಗಿತ್ತು. ವಿದ್ಯಾರ್ಥಿನಿಯೊಬ್ಬಳು ಎನ್ ಸಿಸಿ ಬಗ್ಗೆ ಕೇಳಿದ ಪ್ರಶ್ನೆಗೆ ತಡಬಡಿಸಿದ ರಾಹುಲ್ ಗಾಂಧಿ, ಕೊನೆಗೆ ನನಗೆ ಎನ್ ಸಿಸಿ ಬಗ್ಗೆ ಏನೂ ಗೊತ್ತಿಲ್ಲ ಎಂದು ಬಿಟ್ಟರು.

ಆದರೆ ರಾಹುಲ್ ಗಾಂಧಿಗೆ ಎನ್ ಸಿಸಿ ಬಗ್ಗೆ ಏನೂ ಗೊತ್ತಿಲ್ಲ ಎಂದಿರುವುದಕ್ಕೆ ಮುಂಬೈನ ಎನ್ ಸಿಸಿ ಸದಸ್ಯೆಯೊಬ್ಬರು ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ರಾಹುಲ್ ಗಾಂಧಿ ಎನ್ ಸಿಸಿ ಬಗ್ಗೆ ತಿಳಿದುಕೊಳ್ಳಲೇಬಕು ಎಂದು ಆಗ್ರಹಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷನಾಗಿ, ರಾಹುಲ್ ಗಾಂಧಿಯರಿಗೇ ಎನ್ ಸಿಸಿ ಬಗ್ಗೆ ಗೊತ್ತಿಲ್ಲ ಎಂಬುದು ಅಚ್ಚರಿಯ ಸಂಗತಿ. 1965 ಹಾಗೂ 1971ರ ಯುದ್ಧದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ ರಾಷ್ಟ್ರೀಯ ಕೆಡೆಟ್ ಕಾರ್ಪ್ ಬಗ್ಗೆಯೇ ಗೊತ್ತಿಲ್ಲ ಎಂದರೆ ಹೇಗೆ. ರಾಹುಲ್ ಗಾಂಧಿ ಎನ್ ಸಿಸಿ ಬಗ್ಗೆ ತಿಳಿಯಬೇಕು ಎಂದು ಸಂಜನಾ ಸಿಂಗ್ ಎಂಬುವವರು ಒತ್ತಾಯಿಸಿದ್ದಾರೆ.

ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುವ ವೇಳೆ, ಎನ್ ಸಿಸಿಯಲ್ಲಿ ಸಿ ಸರ್ಟಿಫಿಕೇಟ್ ಪಡೆದವರಿಗೆ ನೀವು ಯಾವ ಸೌಲಭ್ಯ ನೀಡಲು ಇಷ್ಟಪಡುತ್ತೀರಿ ಎಂದು ರಾಹುಲ್ ಗಾಂಧಿಗೆ ವಿದ್ಯಾರ್ಥಿನಿಯೊಬ್ಬಳು ಪ್ರಶ್ನೆ ಕೇಳಿದ್ದಳು. ಆಗ ರಾಹುಲ್ ಗಾಂಧಿ ನನಗೆ ಎನ್ ಸಿಸಿ ಬಗ್ಗೆ ಏನೂ ಗೊತ್ತಿಲ್ಲ ಎಂದಿದ್ದರು.

ಎನ್ ಸಿಸಿ ಬಗ್ಗೆಯೇ ಗೊತ್ತಿಲ್ಲದ ರಾಹುಲ್ ಗಾಂಧಿ ಮುಂದೊಂದು ದಿನ ಪ್ರಧಾನಿಯಾಗಿ ಹೇಗೆ ದೇಶವನ್ನು ಮುನ್ನಡೆಸಿಯಾರು, ಎನ್ ಸಿಸಿ ಬಗ್ಗೆಯೇ ಗೊತ್ತಿರದವನು ಯಾವ ಸೀಮೆ ರಾಷ್ಟ್ರೀಯ ನಾಯಕ ಎಂಬ ಮಾತುಗಳು ಕೇಳಿಬರುತ್ತಿವೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search