• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿಶ್ವದ ಎಲ್ಲೆ ಹಿಂದೂಗಳು ಸಂಕಷ್ಟದಲ್ಲಿದ್ದರೂ ಭಾರತದಲ್ಲಿ ಆಶ್ರಯ: ಭಾಗವತ್ ಜೀ

TNN Correspondent Posted On April 14, 2018
0


0
Shares
  • Share On Facebook
  • Tweet It

ಅಗರ್ತಲಾ: ವಿಶ್ವದೆಲ್ಲೆಡೆ ವ್ಯಾಪಿಸಿರುವ ಹಿಂದೂಗಳಿಗೆ ತಾವಿರುವ ರಾಷ್ಟ್ರದಲ್ಲಿ ತೊಂದರೆ, ಹಿಂಸೆ, ಕಿರುಕುಳ ನೀಡುವುದು ಸೇರಿ ಯಾವುದೇ ಸಮಸ್ಯೆಗಳಿದ್ದರೇ ಭಾರತದಲ್ಲಿ ಬಂದು ಆಶ್ರಯ ಪಡೆಯಬಹುದು. ಭಾರತ ಹಿಂದೂಗಳ ರಕ್ಷಣೆಗೆ ಸದಾ ಸಿದ್ಧವಾಗಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಂಸಂಘಚಾಲಕ ಮೋಹನ್ ಭಾಗವತ್ ಜೀ ಹೇಳಿದ್ದಾರೆ.

ತ್ರಿಪುರಾದ ಅಗರ್ತಲಾದ ವಿವೇಕಾನಂದ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೊಮ್ಮಾತ್ ರ್ಯಾಲಿಯಲ್ಲಿ ಮಾತನಾಡಿದ ಅವರ ಈ ಹೇಳಿಕೆ ತೀವ್ರ ಮಹತ್ವ ಪಡೆದುಕೊಂಡಿದ್ದು, ಇಡೀ ವಿಶ್ವವೇ ಭಾರತವನ್ನು ಎಚ್ಚರಿಕೆಯ ಕಣ್ಣಿನಿಂದ ನೋಡುವಂತಾಗಿದೆ.

ಭಾರತ ಹಿಂದೂಗಳ ಪುಣ್ಯಭೂಮಿ. ಅವರಿಗೆ ಆಶ್ರಯವನ್ನು ಭಾರತ ನೀಡಬೇಕು. ವಿಶ್ವದ ಯಾವುದೇ ಮೂಲೆಯಲ್ಲೂ ಹಿಂದೂಗಳು ಸಂಕಷ್ಟಕ್ಕೀಡಾದರೇ ಅವರು ಭಾರತದಲ್ಲಿ ಆಶ್ರಯ ಪಡೆಯಬೇಕು. ಹಿಂದೂಗಳು ಸಂಘಟಿತರಾಗಿ ಹೋರಾಡಬೇಕು ಎಂದು ಕರೆ ನೀಡಿದ್ದಾರೆ.

ಹಿಂದುತ್ವವು ಹಿಂದೂ ಧರ್ಮಕ್ಕಿಂತ ಭಿನ್ನವಾಗಿದ್ದು, ಪಶ್ಚಿಮದ ಜನರು ಭಾರತದ ಹಿಂದೂ ಧರ್ಮ ಹಾಗೂ ಸಿದ್ಧಾಂತದ ಬಗ್ಗೆ ಆಸಕ್ತಿ ಹೊಂದಿವೆ. ಪಶ್ವಿಮ ಜಗತ್ತು ಶಾಪ ಮುಕ್ತವಾಗಲು ಬಯಸಿದೆ. ಆದ್ದರಿಂದ ಅವರ ನಿರೀಕ್ಷೆಗಳನ್ನು ಈಡೇರಿಸಬೇಕು ಎಂದು ತಿಳಿಸಿದ್ದಾರೆ.

ಹಿಂದೂಗಳು ದುಷ್ಟಶಕ್ತಿಗಳ ವಿರುದ್ಧವಾಗಿ ಸಂಘಟಿತರಾಗಬೇಕು. ಅಪಘಾನಿಸ್ತಾನದಿಂದ ಬರ್ಮಾದವರೆಗೂ ಹಿಂದೂಗಳಿಗೆ ಅನುಯಾಯಿಗಳಿದ್ದರು. ಹಿಂದೂಗಳನ್ನು ಮತಾಂತರ ನಡೆಸುತ್ತಿದೆ. ಆದರೆ ಹಿಂದೂಗಳಿಂದ ಇತರ ಮತಗಳಿಗೆ ಬೆದರಿಕೆ ಒಡ್ಡಿಲ್ಲ ಎಂದು ಹೇಳಿದ್ದಾರೆ.

ಪಾಕಿಸ್ತಾನ, ಬಾಂಗ್ಲಾದೇಶ, ಬರ್ಮಾ  ಸೇರಿ ನಾನಾ ದೇಶಗಳಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ಹಲ್ಲೆ ನಡೆಯುತ್ತಿರುವುದು, ಸಾಮೂಹಿಕ ಒತ್ತಾಯದ ಮತಾಂತರ, ಹಿಂದೂ ಮಹಿಳೆಯರ ಮೇಲೆ ದೌರ್ಜನ್ಯ ನಿರಂತರವಾಗಿ ನಡೆಯುತ್ತಿರುವ ವೇಳೆಯಲ್ಲೇ ಭಾಗವತ್ ಜೀ ಈ ಹೇಳಿಕೆ ಗಮನ ಸೆಳೆದಿದೆ. ವಿಶ್ವದ ನಾನಾ ಕಡೆ ಸಂಕಷ್ಟದಲ್ಲಿರುವ ಹಿಂದೂಗಳನ್ನು ಒಗ್ಗೂಡಿಸುವ ಮತ್ತು ಹಿಂದೂ ಗಳ ತಾಕತ್ತು ತೋರಿಸುವ ಬೇಡಿಕೆಗೆ ಈ ಹೇಳಿಕೆ ತೀವ್ರ ಮಹತ್ವ ಪಡೆದಿದೆ.

0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ

  • Privacy Policy
  • Contact
© Tulunadu Infomedia.

Press enter/return to begin your search