ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದಿದೆ ಎನ್ನಲಾದ ಈ ಅತ್ಯಾಚಾರ ಆರೋಪದ ಬಗ್ಗೆ ಯಾರೂ ಮಾತಾಡಲ್ಲ ಏಕೆ?
ಕೋಲ್ಕತ್ತಾ: ಇತ್ತೀಚೆಗೆ ಉತ್ತರ ಪ್ರದೇಶದ ಉನ್ನಾವೋ ಹಾಗೂ ಜಮ್ಮು-ಕಾಶ್ಮೀರದ ಕಠುವಾ ಎಂಬಲ್ಲಿ ಬಾಲಕಿಯರ ಮೇಲೆ ನಡೆದ ಅತ್ಯಾಚಾರ ಪ್ರಕರಣ ಇಡೀ ದೇಶದ ಗಮನ ಸೆಳೆದಿತ್ತು. ಪ್ರಧಾನಿ ನರೇಂದ್ರ ಮೋದಿ ಅವರೇ ಬಾಯಿಬಿಡಿ ಎಂದು ಮಮತಾ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದ್ದರು.
ಆದರೆ ಈಗ ತಮ್ಮ ತೃಣಮೂಲ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರೇ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಬಿಜೆಪಿ ಅಭ್ಯರ್ಥಿಯ ಸಂಬಂಧಿಯೊಬ್ಬರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಇದಕ್ಕೆ ಮಮತಾ ಬ್ಯಾನರ್ಜಿ ಒಂದೇ ಒಂದು ಮಾತೆತ್ತದೆ ಮೌನವಾಗಿರುವ ಮೂಲಕ ಇಬ್ಬಂದಿತನ ತೋರುತ್ತಿದ್ದಾರೆ.
ಪಶ್ಚಿಮ ಬಂಗಾಳದ ನಾಡಿಯಾ ಎಂಬ ಜಿಲ್ಲೆಯಲ್ಲಿ ನಡೆದಿದೆ ಎನ್ನಲಾದ ಅತ್ಯಾಚಾರಕ್ಕೆ ಸಂಬಂಧಿಸಿದಂತೆ 23 ವರ್ಷದ ಮಹಿಳೆ ಮೇಲೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರೇ ಅತ್ಯಾಚಾರ ಮಾಡಿದ್ದಾರೆ ಎಂದು ಮಹಿಳೆಯ ಅತ್ತೆಯೊಬ್ಬರು ನೀಡಿದ ದೂರಿನ ಅನ್ವಯ ಬಪ್ಪಾ ಶೇಖ್ ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ.
ಒಟ್ಟು ಐದು ಜನರ ವಿರುದ್ಧ ಭಾರತೀಯ ದಂಡ ಸಂಹಿತೆ 448, 376, 427, 379 ಹಾಗೂ 506 ಸೆಕ್ಷನ್ ಅನ್ವಯ ಪ್ರಕರಣ ದಾಖಲಿಸಲಾಗಿದ್ದು, ಉಳಿದ ನಾಲ್ವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಒಟ್ಟಿನಲ್ಲಿ ಬಿಜೆಪಿ ಅಭ್ಯರ್ಥಿಯ ಸಂಬಂಧಿಕರ ಮೇಲೆಯೇ ಟಿಎಂಸಿ ಕಾರ್ಯಕರ್ತರೇ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದ್ದರೂ ಇದುವರೆಗೂ ಯಾವುದೇ ಕ್ರಮ ಕೈಗೊಳ್ಳದಿರುವುದು ಇಬ್ಬಂದಿತನಕ್ಕೆ ಸಾಕ್ಷಿಯಾಗಿದೆ.
Leave A Reply