• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಬಯಲಾಯ್ತು ಕೆಂಪು ಉಗ್ರರ ಅಸಲಿ ಮುಖ: ಕೋಟ್ಯಧಿಪತಿ ನಕ್ಸಲ್ ಮುಖಂಡರು

TNN Correspondent Posted On May 8, 2018
0


0
Shares
  • Share On Facebook
  • Tweet It

ದೆಹಲಿ: ದೇಶದಲ್ಲಿ ಬಡವರ ಹೋರಾಡುತ್ತೇವೆ, ಸಂಕಷ್ಟದಲ್ಲಿರುವವರಿಗೆ ನ್ಯಾಯ ಕೊಡಿಸುತ್ತೇವೆ ಎಂದು ಬೊಗಳೆ ಬಿಡುತ್ತಾ ಜನರ ಜೀವನದೊಂದಿಗೆ ಚೆಲ್ಲಾಟವಾಡುತ್ತಿರುವ ನಕ್ಸಲ್ ಮುಖಂಡರ ಅಸಲಿ ಮುಖ ಬಯಲಾಗಿದೆ. ಬಡವರ ಹೆಸರಲ್ಲಿ ಬೇಳೆ ಬೇಯಿಸಿಕೊಳ್ಳುತ್ತಿರುವ  ಬಿಹಾರ ಮತ್ತು ಜಾರ್ಖಂಡ್ ರಾಜ್ಯದ ನಕ್ಸಲ್ ಮುಖಂಡರು, ಮುಗ್ದರ ಮಕ್ಕಳನ್ನು ಹೋರಾಟಕ್ಕಿಳಿಸಿ, ಅವರ ಜೀವ ಪಣಕ್ಕಿಟ್ಟು ತಮ್ಮ ಮಕ್ಕಳನ್ನು ಮಾತ್ರ ಲಕ್ಷಾಂತರ ರೂಪಾಯಿ ನೀಡಿ ಶಾಲೆಗೆ ಕಳುಹಿಸುತ್ತಿರುವ ಅಚ್ಚರಿದಾಯಕ ವಿಷಯ ಹೊರ ಬಿದ್ದಿದೆ.

ಮುಗ್ದ ಜನರನ್ನು ಸರ್ಕಾರದ ವಿರುದ್ಧ ಎತ್ತಿ ಕಟ್ಟಿ, ರಣರಂಗಕ್ಕೆ ದೂಡುವ ನಕ್ಸಲ್ ಮುಖಂಡರು ತಮ್ಮ ಮಕ್ಕಳನ್ನು ನಗರ ಪ್ರದೇಶದಲ್ಲಿ ಲಕ್ಷಾಂತರ ರೂಪಾಯಿ ನೀಡಿ, ಶಾಲೆಗೆ ಕಳುಹಿಸುತ್ತಿರುವ ಜೊತೆಗೆ, ರಿಯಲ್ ಎಸ್ಟೇಟ್ ನಲ್ಲಿ ಕೋಟ್ಯಂತರ ರೂಪಾಯಿ ಬಂಡವಾಳ ಹೂಡಿದ್ದಾರೆ ಎನ್ನುವ ಮಾಹಿತಿ ಕೇಂದ್ರ ಗೃಹ ಸಚಿವಾಲಯದ ತನಿಖೆಯಿಂದ ಬಹಿರಂಗವಾಗಿದೆ.

ಇನ್ನು ಈ ಕುರಿತು ಕೆಂಪು ಉಗ್ರ ಸಂದೀಪ್ ಯಾದವ್ ಎನ್ನುವವನ ಮನೆಯಿಂದ ಈಗಾಗಲೇ ಜಾರಿ ನಿರ್ದೇಶನಾಲಯ 1.45 ಕೋಟಿ ಹಣ, 32 ಎಕರೆ ರಿಯಲ್ ಎಸ್ಟೇಟ್ ವ್ಯವಹಾರ ಮಾಡಿರುವ ದಾಖಲೆಯನ್ನು ವಶಕ್ಕೆ ಪಡೆದಿದೆ. ಅದೇ ರೀತಿ ಎರಡು ಬಸ್, 11 ಕಾರು ಹಾಗೂ 2 ಟ್ರ್ಯಾಕ್ಟರ್ ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ.

ಕೇಂದ್ರದಿಂದ ಕೆಂಪು ಉಗ್ರರಿಗೆ ಭರ್ಜರಿ ಹೊಡೆತ: ಕೇಂದ್ರದಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ನಕ್ಸಲರ ವಿರುದ್ಧ ನಿರಂತರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದು, ಕೆಂಪು ಉಗ್ರರ ಉಪಟಳ ನಿಯಂತ್ರಣಕ್ಕೆ ಬಂದಿದೆ. ನಕ್ಸಲ್ ಪೀಡಿತ ರಾಜ್ಯಗಳಲ್ಲಿ ತನಿಖೆಗೆ ಕೇಂದ್ರ ಸರ್ಕಾರ ಉನ್ನತ ಮಟ್ಟದ ತನಿಖಾ ಸಂಸ್ಥೆಗಳು, ಸೇನೆ, ಪೊಲೀಸ್ ಇಲಾಖೆಯ ಅಧಿಕಾರಿಗಳು ಹೊಂದಿರುವ ತಂಡ ರಚಿಸಿದ್ದು, ನಕ್ಸಲ್ ರಿಗೆ ನುಂಗಲಾರದ ತುತ್ತಾಗಿದೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search