• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ವಿದೇಶದಲ್ಲಿ ಚಿದಂಬರಂ 20 ಸಾವಿರ ಕೋಟಿ ಅಕ್ರಮ ಆಸ್ತಿ: ಷಾ ಹೊಸ ಬಾಂಬ್

TNN Correspondent Posted On May 14, 2018
0


0
Shares
  • Share On Facebook
  • Tweet It

ದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದವನ್ನೇ ಆಧಾರವಾಗಿಟ್ಟುಕೊಂಡು  ಭ್ರಷ್ಟಾಚಾರದ ಆರೋಪ ಮಾಡುತ್ತಿರುವ ಕಾಂಗ್ರೆಸ್ ಗೆ ಬಿಜೆಪಿ ನಾಯಕರು ಸರಣಿ, ಸರಣಿಯಾಗಿ ತಿರುಗೇಟು ನೀಡುತ್ತಿದ್ದಾರೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ವಿರುದ್ಧ ತಿರುಗಿ ಬಿದ್ದಿದ್ದು, ಟ್ವೀಟರ್ ಮೂಲಕ ಅಮಿತ್ ಷಾ ಹೊಸ ಬಾಂಬ್ ಸಿಡಿಸಿದ್ದಾರೆ. ಕಾಂಗ್ರೆಸ್ ಹಿರಿಯ ಮುಖಂಡ, ಕೇಂದ್ರ ಮಾಜಿ ಹಣಕಾಸು ಸಚಿವರಾಗಿರುವ ಚಿದಂಬರಂ ಅವರು ವಿದೇಶದಲ್ಲಿ 20 ಸಾವಿರ ಕೋಟಿಯ ಅಕ್ರಮ ಆಸ್ತಿ ಹೊಂದಿದ್ದಾರೆ ಎಂದು ಆರೋಪಿಸಿದ್ದಾರೆ.

ಚಿದಂಬರಂ ಪತ್ನಿ ನಳಿನಿ, ಪುತ್ರ ಕಾರ್ತಿ ಹಾಗೂ ಸೊಸೆ ಶ್ರೀನಿಧಿ ವಿರುದ್ಧ ಕಳೆದ ಶುಕ್ರವಾರ ಆದಾಯ ತೆರಿಗೆ ಇಲಾಖೆ ವಿದೇಶದಲ್ಲಿರುವ ಆಸ್ತಿ ಕುರಿತು ರಹಸ್ಯ ಕಾಪಾಡಿಕೊಂಡಿರುವ ಕುರಿತು ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಈ ವೇಳೆಯೇ ಕಾಂಗ್ರೆಸ್ ಬಿಜೆಪಿ ವಿರುದ್ಧ ಭ್ರಷ್ಟಾಚಾರ ಆರೋಪ ಹೊರಿಸಿ, ವಾಕ್ಸಮರ ನಡೆಸಲು ಮುಂದಾಗಿತ್ತು.

ಕಾಂಗ್ರೆಸ್ ನಿರಂತರವಾಗಿ ಬಿಜೆಪಿ ವಿರುದ್ಧ ಭ್ರಷ್ಟಾಚಾರ ಆರೋಪ ನಡೆಸುತ್ತಿರುವ ಕುರಿತು ಟ್ವೀಟರ್ ಮೂಲಕ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ‘ಚಿದಂಬರಂ ಕುಟುಂಬದವರು ವಿದೇಶದಲ್ಲಿ 20 ಸಾವಿರ ಕೋಟಿ ರೂಪಾಯಿ (ಮೂರು ಶತಕೋಟಿ ಡಾಲರ್) ಅಕ್ರಮ ಆಸ್ತಿ ಹೊಂದಿದ್ದಾರೆ. ಕಪ್ಪು ಹಣದ ಕುರಿತು ವಿಶೇಷ ತನಿಖಾ ತಂಡ ರಚಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದ್ದರೂ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಡಾ.ಮನಮೋಹನ ಸಿಂಗ್ ಹಾಗೂ ಆಗ ಹಣಕಾಸು ಸಚಿವರಾಗಿದ್ದ ಪಿ. ಚಿದಂಬರಂ ಅವರು ಹಿಂದೇಟು ಹಾಕಿದ್ದರು. ಏಕೆಂದರೆ ಎಸ್‌ಐಟಿ ರಚನೆ ಮಾಡಿದ್ದರೆ ಅವರ ನಾಯಕರೇ ಸಿಕ್ಕಿ ಬೀಳುತ್ತಿದ್ದರು’ ಎಂದು ಪ್ರತ್ಯುತ್ತರ ನೀಡಿದ್ದಾರೆ.

ಚಿದಂಬರಂ ಕುಟುಂಬದ ವಿರುದ್ಧ ತೆರಿಗೆ ಇಲಾಖೆ ದೋಷಾರೋಪಣೆ ಪಟ್ಟಿ ಸಲ್ಲಿಸಿರುವುದು ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಚಿದಂಬರಂ ಅಕ್ರಮ ಆಸ್ತಿ ಬಗ್ಗೆ ಟ್ವೀಟ್ ಮಾಡಿರುವುದು ಕಾಂಗ್ರೆಸ್ ಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಇನ್ನು ಭಾನುವಾರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿ ನಡೆಸಿ, ಚಿದಂಬರಂ ಮತ್ತು ಕಾಂಗ್ರೆಸ್ ಆರೋಪಕ್ಕೆ ತಕ್ಕ ಉತ್ತರ ನೀಡಿದ್ದರು.

This explains why despite Supreme Court's orders Sonia Gandhi, former PM Dr Manmohan Singh & then FM P Chidambaram dragged their feet on formation of SIT, one of the first decisions taken by Modi govt, to fight Black Money! How could they indict their own selves? #BlackMoneyOfPC

— Amit Shah (@AmitShah) May 13, 2018

Under the Black Money Act, 4 chargesheets have been filed against P Chidambaram and his family for possessing and operating several illegal assets and accounts in foreign countries. IT estimates illegal assets held by UPA's FM to be to the tune of 3 Bn dollars! #BlackMoneyOfPC

— Amit Shah (@AmitShah) May 13, 2018

0
Shares
  • Share On Facebook
  • Tweet It




Trending Now
7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
Tulunadu News July 12, 2025
ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
Tulunadu News July 12, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • 7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!
    • ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕದ್ರಿ ಸಂಚಾರ ಪೊಲೀಸ್ ಕಾನ್‌ಸ್ಟೆಬಲ್ ತಸ್ಲೀಮ್ …!
    • ಬೀದಿನಾಯಿಗಳಿಗೆ ನಿತ್ಯ ಚಿಕನ್, ಮೊಟ್ಟೆ ನೀಡಲು ಬಿಬಿಎಂಪಿ ನಿರ್ಧಾರ!
    • ಜನಸಾಮಾನ್ಯರ ಕೈಗೆಟಕುತ್ತಿಲ್ಲ ತೆಂಗಿನಕಾಯಿ ದರ... ಪುತ್ತೂರಿನಲ್ಲಿ ಹೆಚ್ಚಿದ ಕಳವು!
    • ವಿಎಚ್ ಪಿ ಶರಣ್, ನವೀನ್ ಗೆ ರಿಲೀಫ್: ಅರುಣ್ ಶ್ಯಾಮ್ ವಾದ
    • ಯುಕೆ ಪ್ರಧಾನಿ ಪದದಿಂದ ಇಳಿದ ಬಳಿಕ ಖಾಸಗಿ ಉದ್ಯೋಗಕ್ಕೆ ಮರಳಿದ ರಿಶಿ ಸುನಾಕ್!
  • Popular Posts

    • 1
      7.25 ಕೋಟಿ ವೆಚ್ಚದಲ್ಲಿ ಸೊಳ್ಳೆ ನಿಯಂತ್ರಣಕ್ಕೆ ರಾಜ್ಯ ಸರಕಾರ ಸಜ್ಜು!
    • 2
      ತರಗತಿಯಲ್ಲಿ ಲಾಸ್ಟ್ ಬೆಂಚ್ ಎನ್ನುವುದು ಕೇರಳದಲ್ಲಿ ಇನ್ನು ಇಲ್ಲ!
    • 3
      ಧರ್ಮಸ್ಥಳದಲ್ಲಿ ಗೌಪ್ಯವಾಗಿ ಹೆಣಗಳನ್ನು ವಿಲೇವಾರಿ ಮಾಡುತ್ತಿದ್ದೆ ಎಂದು ಹೇಳಿಕೊಂಡಿರುವ ಮಾಜಿ ಸ್ವಚ್ಚತಾ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರು!
    • 4
      ಗಣೇಶೋತ್ಸವ ಇನ್ನು ಮಹಾರಾಷ್ಟ್ರದ ರಾಜ್ಯ ಹಬ್ಬ ಎಂದು ಸರಕಾರ ಘೋಷಣೆ!
    • 5
      ನಾಯಕರು 75 ಆಗುತ್ತಿದ್ದಂತೆ ಅಧಿಕಾರದಿಂದ ಕೆಳಗಿಳಿದು ಬೇರೆಯವರಿಗೆ ದಾರಿ ಮಾಡಿಕೊಡಲಿ - ಮೋಹನ್ ಭಾಗವತ್!

  • Privacy Policy
  • Contact
© Tulunadu Infomedia.

Press enter/return to begin your search