ಮೋದಿ ಕಾಶ್ಮೀರ ಭೇಟಿಗೆ ಬೆದರಿಕೆ: ಕಾಶ್ಮೀರ ಪೊಲೀಸರ ಮೂರು ಗನ್ ದೋಚಿದ ಉಗ್ರರು
ಜಮ್ಮು: ಪ್ರಧಾನಿ ನರೇಂದ್ರ ಮೋದಿ ನಾಳೆ (ಮೇ.19ರಂದು) ನಾನಾ ಅಭಿವೃದ್ಧಿ ಕಾಮಗಾರಿಗಳ ಚಾಲನೆಗೆ ಕಾಶ್ಮೀರಕ್ಕೆ ಭೇಟಿ ನೀಡುವ ಮುಂಚೆಯೇ ಭಯೋತ್ಪಾದಕರು ನಿರಂತರವಾಗಿ ಒಂದಲ್ಲ ಒಂದು ರೀತಿಯ ಸಂಚು ಕುತಂತ್ರ ರೂಪಿಸುತ್ತಿವೆ.ಇದೀಗ ಭಯೋತ್ಪಾದಕರು ಜಮ್ಮು ಕಾಶ್ಮೀರದ ಪೊಲೀಸರ ಮೇಲೆ ದಾಳಿ ನಡೆಸಿ, ಗನ್ ಗಳನ್ನು ದೋಚಿಕೊಂಡು ಹೋಗಿದ್ದಾರೆ. ಅಲ್ಲದೇ ದೋಚಿಕೊಂಡು ಹೋಗಿರುವ ಗನ್ ಗಳ ಚಿತ್ರಗಳನ್ನು ಸೆರೆ ಹಿಡಿದು ಅವುಗಳ ಮೇಲೆ ಹಮ್ಜಾ ಹಿಜ್ಬಿ ಎಂದು ಬರೆದು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡಿ, ನೇರವಾಗಿ ಎಚ್ಚರಿಕೆಯನ್ನು ನೀಡಿದ್ದಾರೆ.
ಈ ಕುರಿತು ಇಬ್ಬರು ಕಾಶ್ಮೀರ ಪೊಲೀಸರನ್ನು ವಿಚಾರಣೆ ನಡೆಸಲಾಗಿದ್ದು, ಗುರುವಾರ ಸಾಯಂಕಾಲ ಶ್ರೀನಗರ ಹೊಟೇಲ್ ಒಂದರ ಬಳಿ ದಾಳಿ ನಡೆಸಿದ ಭಯೋತ್ಪಾದಕರ ಗುಂಪು ನಮ್ಮಲ್ಲಿದ್ದ ರೈಫಲ್ ಗಳನ್ನು ಕಿತ್ತುಕೊಂಡು ಹೋಗಿದ್ದಾರೆ ಎಂದು ತಿಳಿಸಿದ್ದಾರೆ. ಈ ಕುರಿತು ಪೊಲೀಸರು ವರದಿ ಸಲ್ಲಿಸಿದ್ದು, ಭಯೋತ್ಪಾದಕರ ಗುಂಪು ನಮ್ಮ ಮೇಲೆ ದಾಳಿ ನಡೆಸಿ, ರೈಫಲ್ ಗಳನ್ನು ದೋಚಿಕೊಂಡು ಹೋಗಿದೆ ಎಂದು ತಿಳಿಸಿದ್ದಾರೆ.
ಮೇ.19ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಮುನ್ನಾ ದಿನವೇ ಇತಂಹ ಘಟನೆ ನಡೆದಿರುವುದು ತೀವ್ರ ಆತಂಕ ಮೂಡಿಸಿದೆ. ಅಲ್ಲದೇ ಪಾಕಿಸ್ತಾನ ಗಡಿ ನಿಯಮ ಉಲ್ಲಂಘಿಸಿ ದಾಳಿ ನಡೆಸಿದೆ. ಈ ವೇಳೆ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.
ಬ್ಯಾಂಕ್ ಮೇಲೂ ದಾಳಿ: ಜಮ್ಮು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಕ್ಯಾಮ್ ಪ್ರದೇಶದಲ್ಲಿ ಬ್ಯಾಂಕ್ ಮೇಲೆ ಶುಕ್ರವಾರ ದಾಳಿ ನಡೆಸಿರುವ ಭಯೋತ್ಪಾದಕರು ಹಣವನ್ನು ದೋಚಿಕೊಂಡು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
Leave A Reply