ನಾಗಪುರದಲ್ಲಿ 600 ಸ್ವಯಂ ಸೇವಕರನ್ನುದ್ದೇಶಿಸಿ ಮಾತಾಡಲಿದ್ದಾರೆ ಪ್ರಣಬ್ ಮುಖರ್ಜಿ: ಆರ್ ಎಸ್ಎಸ್ ಅಧಿಕೃತ ಮಾಹಿತಿ
ದೆಹಲಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸೇವೆ, ಧ್ಯೇಯಕ್ಕೆ ಮೆಚ್ಚದವರೇ ಇಲ್ಲ. ದೇಶದ ಪ್ರಥಮ ಪ್ರಧಾನಿ ಜವಾಹರಲಾಲ್ ನೆಹರು ಅವರಿಂದ ಹಿಡಿದು ಪ್ರಸ್ತುತ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ವರೆಗೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯ ವೈಖರಿಗೆ ಮೆಚ್ಚುವವರೇ ಎಲ್ಲ. ಇದೀಗ ಆರ್ ಎಸ್ ಎಸ್ ವಿರುದ್ಧ ಸದಾ ಮಾತನಾಡುವ ಕಾಂಗ್ರೆಸ್ ನಿಂದಲೇ ರಾಜಕೀಯ ಜೀವನ ಪಡೆದು, ರಾಷ್ಟ್ರಪತಿ ಹುದ್ದೇಗೆ ಏರಿರುವ ಪ್ರಣಬ್ ಮುಖರ್ಜಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಮಾರಂಭವೊಂದರಲ್ಲಿ ಭಾಗವಹಿಸಿ, ಸಂಘದ ಸೇವಕರನ್ನು ಉದ್ದೇಶಿಸಿ ಮಾತನಾಡಲಿರುವ ಸುದ್ದಿಯನ್ನು ಆರ್ ಎಸ್ ಎಸ್ ಖಚಿತ ಪಡಿಸಿದೆ.
ಜೂನ್ .7 ರಂದು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಾಗಪುರದಲ್ಲಿ ನಡೆಯುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶಿಕ್ಷಾ ವರ್ಗದಲ್ಲಿ ಭಾಗವಹಿಸಿ, ಮಾತನಾಡಲಿದ್ದಾರೆ. ನಾವು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ನಾಗಪುರದಲ್ಲಿ ನಡೆಯುವ ಸಂಘ ಶಿಕ್ಷಾ ವರ್ಗದಲ್ಲಿ ಭಾಗವಹಿಸಲು ಆಹ್ವಾನ ನೀಡಿದ್ದೇವು. ಪ್ರಣಬ್ ಮುಖರ್ಜಿ ಅವರು ನಮ್ಮ ಆಹ್ವಾನವನ್ನು ಸ್ವೀಕರಿಸಿದ್ದು, ಸಂಘ ಶಿಕ್ಷಾ ವರ್ಗದಲ್ಲಿ ಭಾಗವಹಿಸಲಿರುವ 600 ಸ್ವಯಂ ಸೇವಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಆರ್ ಎಸ್ ಎಸ್ ಮುಖಂಡ ರಾಕೇಶ ಸಿನ್ಹಾ ತಿಳಿಸಿದ್ದಾರೆ. ಕಳೆದ ಎರಡು ಮೂರು ದಿನಗಳಿಂದ ಪ್ರಣಬ್ ಮುಖರ್ಜಿ ನಾಗಪುರದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಮಾರಂಭದಲ್ಲಿ ಭಾಗವಹಿಸುವ ಕುರಿತು ಸುದ್ದಿ ಹರಿದಾಡುತ್ತಿತ್ತು. ಇದೀಗ ಸಂಘದ ಪ್ರಮುಖರೇ ಅಧಿಕೃತ ಮಾಹಿತಿ ನೀಡುವ ಮೂಲಕ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ಪ್ರಣಬ್ ಮುಖರ್ಜಿ ಅವರು ಮಾಜಿ ಪ್ರಧಾನಿ ದಿ.ಇಂದಿರಾ ಗಾಂಧಿ, ರಾಜೀವ ಗಾಂಧಿ ಅವರನ್ನು ಹತ್ತಿರದಿಂದ ಬಲ್ಲವರಾಗಿದ್ದು, ಅವರ ಜೊತೆ ಆಡಳಿತದಲ್ಲಿ ಸಕ್ರಿಯವಾಗಿದ್ದವರು. ಕಾಂಗ್ರೆಸ್ ನಲ್ಲಿ ಹಲವು ದಶಕಗಳ ಕಾಲ ರಾಷ್ಟ್ರೀಯ ನಾಯಕರಾಗಿದ್ದವರು. ಇದೀಗ ಸದಾ ಆರ್ ಎಸ್ ಎಸ್ ಅನ್ನು ವಿರೋಧಿಸುವ ಕಾಂಗ್ರೆಸ್ ಮುಖಂಡರ ಎದುರೇ ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ವಿಶೇಷ.
Leave A Reply