• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಇತಿಹಾಸ ಬರೆದ ನಿರ್ಮಲಾ ಸೀತಾರಾಮನ್: ಯಾವುದೇ ರಕ್ಷಣಾ ಸಚಿವರು ಭೇಟಿ ನೀಡದ ಸ್ಥಳಕ್ಕೆ ಭೇಟಿ

TNN Correspondent Posted On May 31, 2018
0


0
Shares
  • Share On Facebook
  • Tweet It

ಲುಂಗ್ವಾ(ನಾಗಾಲ್ಯಾಂಡ್):  ದೇಶದ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸದಾ ತಮ್ಮ ನಿರಂತರ ಕಾರ್ಯ ಚಟುವಟಿಕೆಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ನೀಡಿರುವ ಹುದ್ದೆಯನ್ನು ಬಿಡುವಿಲ್ಲದ ಕಾರ್ಯಚಟುವಟಿಕೆಗಳ ಮೂಲಕ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಅದಕ್ಕೆ ಅವರ ಕಾರ್ಯಶೈಲಿಯೇ ಸಾಕ್ಷಿಯಾಗಿದ್ದು, ಮಹತ್ವದ ರಕ್ಷಣಾ ಖಾತೆಯ ಜವಾಬ್ದಾರಿ ಹೊತ್ತುಕೊಂಡು ಸದಾ ರಕ್ಷಣಾ ಪಡೆಗಳೊಡನೆ ಸಂಪರ್ಕದಲ್ಲಿದ್ದು, ಅವರ ನೋವಿಗೆ ಸ್ಪಂದಿಸುವುದು, ಸೂಕ್ತ ಸೌಲಭ್ಯ ಒದಗಿಸುತ್ತಿದ್ದಾರೆ. ಇದೀಗ ನಿರ್ಮಲಾ ಸೀತಾರಾಮನ್ ಮತ್ತೊಂದು ಸಾಧನೆ ಮೆರೆದಿದ್ದು, ಇದುವರೆಗೆ ದೇಶದ ಯಾವುದೇ ರಕ್ಷಣಾ ಸಚಿವರು ಭೇಟಿ ನೀಡದ ಪ್ರದೇಶಕ್ಕೆ ಭೇಟಿ ನೀಡುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.

ಭಾರತ ಮ್ಯಾನ್ಮಾರ್ ಗಡಿಯಲ್ಲಿರುವ ನಾಗಾಲ್ಯಾಂಡ್ ನಲ್ಲಿರುವ ಕಣಿವೆ ಗ್ರಾಮದ ಲುಂಗ್ವಾಕ್ಕೆ ರಕ್ಷಣಾ ಪಡೆಗಳೊಂದಿಗೆ ಭೇಟಿ ನೀಡಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಪ್ರಥಮ ಬಾರಿಗೆ ರಕ್ಷಣಾ ಸಚಿವರೊಬ್ಬರು ಲುಂಗ್ವಾ ಗ್ರಾಮದ ಕಣಿವೆಗೆ ಭೇಟಿ ನೀಡಿರುವ ದಾಖಲೆ ಬರೆದಿದ್ದಾರೆ.ಇದೇ ವೇಳೆ ರಕ್ಷಣಾ ಪಡೆಗಳು, ಮತ್ತು ಗಡಿಯಲ್ಲಿರುವ ಸೈನಿಕರೊಂದಿಗೆ ಮಾತುಕತೆ ನಡೆಸಿದಲ್ಲದೇ, ಗಡಿಯಲ್ಲಿರುವ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ.

ಕಣಿವೆಯಲ್ಲಿರುವ ಲುಂಗ್ವಾ ಗ್ರಾಮದ ಕೋನ್ಯಾಕ್ ಸಮುದಾಯದ ಗ್ರಾಮದ ಪ್ರಮುಖ ಆಂಗ್ ಲೊಂಗ್ವಾ ಅವರ ಮನೆಗೆ ಭೇಟಿ ನೀಡಿ, ಅಲ್ಲಿನ ಜನರೊಂದಿಗೆ ಮಾತುಕತೆ ನಡೆಸಿದ್ದಾರೆ. ಅಲ್ಲದೇ ಬುಡಕಟ್ಟು ಸಮುದಾಯದವರಿಂದ ಸಾಂಪ್ರದಾಯಿಕ ಸನ್ಮಾನ ಸ್ವೀಕರಿಸಿದ್ದಾರೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search