ಉನ್ನತ ಶಿಕ್ಷಣದ ಉತ್ತೇಜನಕ್ಕೆ ಕೇಂದ್ರ ಸರ್ಕಾರದ ಭರ್ಜರಿ ಕೊಡುಗೆ, 1 ಲಕ್ಷ ಕೋಟಿ ಅನುದಾನ ಬಿಡುಗಡೆ
ದೆಹಲಿ: ದೇಶದಲ್ಲಿ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಬೇಕು. ಅನಕ್ಷರಸ್ತರ ಸಂಖ್ಯೆ ಇಳಿಮುಖವಾಗಿ, ಕೌಶಲಯುತ ಯುವ ಪಡೆ ಸಿದ್ಧವಾಗಬೇಕು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಕನಸುಗಳು ಸಾಕಾರವಾಗುತ್ತಿದ್ದು, ಇದೀಗ ಕೇಂದ್ರ ಸರ್ಕಾರ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳನ್ನು ತರಲು ಭರ್ಜರಿ ಅನುದಾನವನ್ನು ನೀಡುವ ಮೂಲಕ ಮಹತ್ತರ ಸಂದೇಶವನ್ನು ನೀಡಿದೆ.
ದೇಶದಲ್ಲಿ ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಹೊಸ ರೂಪ ಕೊಡಲು ನಿರ್ಧರಿಸಿರುವ ಕೇಂದ್ರ ಸರ್ಕಾರ ಒಂದು ಲಕ್ಷ ಕೋಟಿ ರೂಪಾಯಿ ಅನುದಾನ ನೀಡುತ್ತಿದ್ದು, ಮುಂದಿನ ನಾಲ್ಕು ವರ್ಷದಲ್ಲಿ ಹೊಸ ರೂಪ ನೀಡುವ ಗುರಿ ಹೊಂದಲಾಗಿದೆ. ಈ ಯೋಜನೆಗಾಗಿ ಹೈಯರ್ ಎಜುಕೇಷನ್ ಫಂಡಿಗ್ ಎಜೆನ್ಸಿ (ಎಚ್ಇಎಫ್ಎ) ಮೂಲಕ ದೇಶದ ಉನ್ನತ ಶಿಕ್ಷಣದ ಕೇಂದ್ರಗಳಿಗೆ ಸಹಾಯ ಮಾಡಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಮಾನವಸಂಪನ್ಮೂಲ ಸಚಿವ ಪ್ರಕಾಶ ಜಾವಡೆಕರ್ ತಿಳಿಸಿದ್ದಾರೆ.
2022 ರ ಗುರಿಯಾಗಿಟ್ಟುಕೊಂಡು ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳನ್ನು ತರಲು ನಿರ್ಧರಿಸಲಾಗಿದೆ. ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅನುದಾನವನ್ನು ನೀಡಿ, ಸೃಜಶೀಲತೆಗೆ ಒತ್ತು ನೀಡಲು ಈ ಯೋಜನೆ ಪೂರಕವಾಗಬೇಕು. ಸಂಸ್ಥೆಗಳ ಅಭಿವೃದ್ಧಿಗೆ ಹೊಸ ರೂಪ ನೀಡಲು ಇದು ಸಹಾಯಕವಾಗಲಿದೆ ಎಂದು ತಿಳಿಸಿದ್ದಾರೆ.
ನರೇಂದ್ರ ಮೋದಿ ನೇತೃತ್ವದ ನಾಲ್ಕು ವರ್ಷದ ಆಡಳಿತದಲ್ಲಿ ಮಾನವಸಂಪನ್ಮೂಲ ಇಲಾಖೆಯಲ್ಲಿ ಆದ ಮಹತ್ತರ ಬದಲಾವಣೆಗಳ ಕುರಿತು ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಕಾಶ ಜಾವಡೇಕರ್, ನಾಲ್ಕು ವರ್ಷದಲ್ಲಿ ದೇಶದಲ್ಲಿ 1414 ವಿಶ್ವವಿದ್ಯಾಲಯಗಳು, 14 ಐಐಐಟಿ, ಏಳು ಐಐಎಂ, ಏಳು ಐಐಟಿ ಮತ್ತು ಒಂದು ಎನ್ ಐಟಿಯನ್ನು ಸ್ಥಾಪಿಸಲಾಗಿದೆ. ಈ ಮೂಲಕ ದೇಶದ ಉನ್ನತ ಶಿಕ್ಷಣದಲ್ಲಿ ಹೊಸ ಕ್ರಾಂತಿಯನ್ನು ಕೇಂದ್ರ ಸರ್ಕಾರ ನಾಲ್ಕು ವರ್ಷದಲ್ಲಿ ಸೃಷ್ಟಿ ಮಾಡಿದೆ ಎಂದು ತಿಳಿಸಿದ್ದಾರೆ. ಅಲ್ಲದೇ ಪ್ರಧಾನಿ ನರೇಂದ್ರ ಅವರು ಅಧಿಕಾರ ವಹಿಸಿಕೊಂಡ ನಂತರ ಕಳೆದ ನಾಲ್ಕು ವರ್ಷದಲ್ಲಿ 103 ಕೇಂದ್ರಿಯ ವಿದ್ಯಾಲಯ, 62 ನವೋದಯ ವಿದ್ಯಾಲಯಗಳನ್ನು ಹೊಸದಾಗಿ ಆರಂಭಿಸಲಾಗಿದೆ ಎಂದು ತಿಳಿಸಿದರು.
Leave A Reply