ಬಂಟ್ವಾಳ, ಮೈಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಯುವತಿ ಆತ್ಮಹತ್ಯೆ
Posted On June 25, 2018

ಮಂಗಳೂರು: ಮಾನಸಿಕ ಖಿನ್ನತೆ ಗೆ ಒಳಗಾಗಿದ್ದ ಯುವತಿಯೊಬ್ಬರು ಮೈಗೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ದಡ್ಡಲಕಾಡು ಎಂಬಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಬಂಟ್ವಾಳ ತಾಲೂಕಿನ ದಡ್ಡಲಕಾಡು ನಿವಾಸಿ ಪವಿತ್ರಾ(20) ಎಂದು ಗುರುತಿಸಲಾಗಿದೆ. ಅನಾಥೆಯಾಗಿದ್ದ ಪವಿತ್ರಾ ಅಜ್ಜಿ ಜೊತೆಗೆ ವಾಸ ಮಾಡಿಕೊಂಡಿದ್ದು ಇತ್ತೀಚೆಗೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಇಂದು ಅಡುಗೆ ಕೋಣೆಯಲ್ಲಿ ಮೈಗೆ ಸೀಮೆಎಣ್ಣೆ ಸುರಿದು ಸಾವಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -
Leave A Reply