• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಭಾರತದ ವಿರುದ್ಧ ಹೋರಾಟಕ್ಕೆ ಪಾಕಿಸ್ತಾನದ ಮಕ್ಕಳ ಬಳಕೆ: ವಿಶ್ವಸಂಸ್ಥೆ ಆಘಾತಕಾರಿ ವರದಿ

TNN Correspondent Posted On June 29, 2018
0


0
Shares
  • Share On Facebook
  • Tweet It

ನ್ಯೂಯಾರ್ಕ್‌: ಭಾರತದ ವಿರುದ್ಧ ಸದಾ ಹಲ್ಲು ಮಸೆಯುವ ಪಾಕಿಸ್ತಾನ ಮತ್ತು ಪಾಕಿಸ್ತಾನ ಸಾಕಿರುವ ಭಯೋತ್ಪಾದಕ ಸಂಘಟನೆಗಳು ಇದೀಗ, ಭಾರತದ ವಿರುದ್ಧ ರೂಪಿಸಿರುವ ಸಂಚು ಬಯಲಾಗಿದೆ.  ಭಾರತದ ಸೇನೆಯ ವಿರುದ್ಧ ಹೋರಾಡಲು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳಾದ ಜೈಷ್ ಎ ಮೊಹಮ್ಮದ್ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಮಕ್ಕಳನ್ನು ಅಸ್ತ್ರವಾಗಿ ಬಳಸಿಕೊಳ್ಳುತ್ತಿವೆ ಎಂದು ವಿಶ್ವಸಂಸ್ಥೆಯೇ ವರದಿ ಬಿಡುಗಡೆ ಮಾಡಿದೆ.

2017ರಲ್ಲಿ ಜಗತ್ತಿನಾದ್ಯಂತ ಹತ್ತು ಸಾವಿರ ಮಕ್ಕಳನ್ನು ಹತ್ಯೆ ಮಾಡಲಾಗಿದೆ.  ಕಳೆದ ವರ್ಷ 8 ಸಾವಿರಕ್ಕೂ ಹೆಚ್ಚು ಮಕ್ಕಳನ್ನು ಉಗ್ರ ಸಂಘಟನೆಗಳು ನೇಮಿಸಿಕೊಂಡಿದ್ದು, ಅವರನ್ನು ಭಯೋತ್ಪಾದನ ಕೃತ್ಯಗಳಿಗೆ ಬಳಸಿಕೊಳ್ಳಲಾಗಿದೆ ಎಂದು ಮಕ್ಕಳ ಮತ್ತು ಸಶಸ್ತ್ರ ಸಂಘರ್ಷ ಕುರಿತ ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿಗಳ ವಾರ್ಷಿಕ ವರದಿಯಲ್ಲಿ ಈ ಕುರಿತು ಉಲ್ಲೇಖಿಸಿದ್ದು,

ಜಮ್ಮು -ಕಾಶ್ಮೀರದಲ್ಲಿ ಗಲಭೆ ಸೃಷ್ಟಿಸಲು ಹಾಗೂ ಭಾರತೀಯ ಸೇನೆ ವಿರುದ್ಧ ಹೋರಾಡಲು ಎರಡು ಉಗ್ರ ಸಂಘಟನೆಗಳು ಮಕ್ಕಳನ್ನು ನೇಮಿಸಿಕೊಂಡಿವೆ. ಅಲ್ಲದೇ ಸೇನೆ ವಿರುದ್ಧ ಬೇಹುಗಾರಿಕೆ ನಡೆಸಲು ಮಕ್ಕಳನ್ನು ಬಳಸಿಕೊಳ್ಳಲಾಗುತ್ತಿದೆ ಎಂಬ ಆಘಾತಕಾರಿ ಮಾಹಿತಿ ತಿಳಿಸಿದೆ.

ಛತ್ತೀಸ್‌ಗಢ, ಜಾರ್ಖಂಡ್‌ ನಲ್ಲೂ ನಕ್ಸಲರು ಮಕ್ಕಳನ್ನು ನೇಮಿಸಿಕೊಂಡು, ದುಷ್ಕೃತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ಪಾಕಿಸ್ತಾನದಲ್ಲಿ ಶಾಲೆ, ಮದರಸಾಗಳಿಂದ ಮಕ್ಕಳನ್ನು ನೇಮಿಸಿಕೊಳ್ಳಲಾಗುತ್ತಿದೆ. ಕಳೆದ ಜನವರಿಯಲ್ಲಿ ತೆಹ್ರಿಕ್‌-ಇ-ತಾಲಿಬಾನ್‌ ಪಾಕಿಸ್ತಾನ ಸಂಘಟನೆಯು ಬಿಡುಗಡೆ ಮಾಡಿರುವ ವಿಡಿಯೋದಲ್ಲಿ ಬಾಲಕಿಯರು ಸೇರಿ ಮಕ್ಕಳನ್ನು ಆತ್ಮಹತ್ಯಾ ದಾಳಿಗೆ ಪ್ರೇರೇಪಿಸುತ್ತಿರುವುದು ತಿಳಿದು ಬಂದಿದೆ. ಪಾಕಿಸ್ತಾನ ಈ ಕುರಿತು ಕ್ರಮ ಕೈಗೊಳ್ಳಬೇಕು ಎಂದು ವಿಶ್ವಸಂಸ್ಥೆ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್‌ ಸೂಚಿಸಿದ್ದಾರೆ.

0
Shares
  • Share On Facebook
  • Tweet It




Trending Now
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
  • Popular Posts

    • 1
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 2
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 3
      'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • 4
      ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • 5
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್

  • Privacy Policy
  • Contact
© Tulunadu Infomedia.

Press enter/return to begin your search