ಮಂಗಳೂರು ವಿವಿ ಸಹಾಯಕ ಪ್ರಾಧ್ಯಾಪಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ
ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಧ್ಯಾಪಕರೊಬ್ಬರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ.
ವಿವಿಯ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಉಮೇಶ್ ನಾಯ್ಕ್ ವಿದ್ಯಾರ್ಥಿಗಳಿಗೆ ಲೈಂಗಿಕ ಮತ್ತು ಮಾನಸಿಕ ದೌರ್ಜನ್ಯ ನೀಡಿದ್ದಾರೆ ಎಂದು ಅರೋಪಿಸಲಾಗಿದೆ. ಡಾ. ಉಮೇಶ್ ನಾಯ್ಕ್ ವಿರುದ್ಧ ವಿದ್ಯಾರ್ಥಿ ಹಾಗು ವಿದ್ಯಾರ್ಥಿನಿಯರು ವಿಶ್ವ ವಿದ್ಯಾನಿಲಯದ ಉಪಕುಲಪತಿ, ರಿಜಿಸ್ಟ್ರಾರ್, ಮತ್ತು ಸ್ಪರ್ಶ್ ಮಹಿಳಾ ಆಯೋಗಕ್ಕೆ ದೂರು ನೀಡಿದ್ದು, ಕಿರುಕುಳ ನೀಡುತ್ತಿರುವ ಪ್ರಾಧ್ಯಾಪಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದಾರೆ. ಲೈಬ್ರರಿ ಮತ್ತು ಲ್ಯಾಬ್ ಗಳಲ್ಲಿ ಡಾ. ಉಮೇಶ್ ನಾಯ್ಕ್ ವಿದ್ಯಾರ್ಥಿನಿಯರ ಮೈ ಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಅದರೆ ಮಂಗಳೂರು ವಿಶ್ವ ವಿದ್ಯಾಲಯ ಮಾತ್ರ ಈ ಘಟನೆಯ ಕುರಿತು ಜಾಣ ಮೌನ ವಹಿಸಿದೆ. ವಿಶ್ವ ವಿದ್ಯಾಲಯದ ಈ ನಿರ್ಲಕ್ಷ ಧೋರಣೆ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ನಡುವೆ ದೂರು ಕೊಟ್ಟಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಡಾ.ಉಮೇಶ್ ನಾಯ್ಕ್ ದೂರವಾಣಿ ಕರೆ ಮಾಡಿ ಅಟ್ರಾಸಿಟಿ ಪ್ರಕರಣ ದಾಖಲಿಸುವ ಬೆದರಿಕೆ ಹಾಕಿದ್ದಾರೆ. ಇದೀಗ ಈ ದೂರವಾಣಿ ಕರೆಗಳ ಆಡಿಯೋ ರೆಕಾರ್ಡ್ ಮಾಧ್ಯಮಗಳಿಗೆ ದೊರೆತಿದೆ. ಈ ಹಿನ್ನೆಲೆಯಲ್ಲಿ ಘಟನೆಯ ಸಮಗ್ರ ತನಿಖೆ ನಡೆಯಬೇಕೆಂಬ ಒತ್ತಾಯ ಕೇಳಿಬರುತ್ತಿದೆ.
Leave A Reply