• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಅಭಿಪ್ರಾಯ ಸುದ್ದಿ 

ಮಳೆ ಅಬ್ಬರ: ಪುತ್ತೂರಿನಲ್ಲಿ ಗೋಡೆ ಕುಸಿದು ಅಜ್ಜಿ, ಮೊಮ್ಮಗ ಸಾವು!

Tulunadu News Posted On July 7, 2018
0


0
Shares
  • Share On Facebook
  • Tweet It

ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಪುತ್ತೂರಿನಲ್ಲಿ ಮನೆ ಗೋಡೆ ಕುಸಿದು ಬಿದ್ದು ಅಜ್ಜಿ ಮತ್ತು ಮೊಮ್ಮಗ ಬಲಿಯಾಗಿದ್ದಾರೆ. ಶುಕ್ರವಾರ ಮುಂಜಾನೆಯಿಂದ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ತಗ್ಗು ಪ್ರದೇಶಗಳು ಜಲಾವೃತವಾಗಿವೆ.

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಪುತ್ತೂರು, ಸುಳ್ಯ, ಬೆಳ್ತಂಗಡಿ ,ಬಂಟ್ವಾಳ, ಮೂಡಬಿದಿರೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನೀರಿನ ಹರಿವು ಹೆಚ್ಚಳವಾಗಿರುವುದರಿಂದ ನದಿ ನಾಲೆಗಳು ಅಪಾಯ ಮಟ್ಟದಲ್ಲಿ ಉಕ್ಕಿ ಹರಿಯುತ್ತಿವೆ. ಜಿಲ್ಲೆಯ ಮೂಡಬಿದಿರೆ, ಸುಳ್ಯ, ಬೆಳ್ತಂಗಡಿ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಎಲ್ಲೆಡೆ ಧಾರಾಕಾರ ಮಳೆಯಾಗುತ್ತಿರುವುದರಿಂದ ವಾಹನ ಸಂಚಾರ ಕಷ್ಟವಾಗಿದೆ. ಜನರು ಹೊರಗೆ ಓಡಾಡಲು ಪರದಾಡುತ್ತಿದ್ದು, ಇದರಿಂದ ವ್ಯಾಪಾರ ವಹಿವಾಟಿಗೆ ತೊಂದರೆಯಾಗಿದೆ.

ಅಜ್ಜಿ, ಮೊಮ್ಮಗ ಸಾವು: ಮಳೆಯಿಂದ ತೇವಗೊಂಡಿದ್ದ ಗೋಡೆ ಕುಸಿದು ಇಬ್ಬರು ಮೃತಪಟ್ಟ ಘಟನೆ ಪುತ್ತೂರಿನ ಹೆಬ್ಬಾರಬೈಲಿನಲ್ಲಿ ನಡೆದಿದೆ. ಶುಕ್ರವಾರ ಸುರಿದ ವಿಪರೀತ ಮಳೆಯಿಂದ ಹಸಿಯಾಗಿದ್ದ ಗೋಡೆ, ಶುಕ್ರವಾರ ರಾತ್ರಿ ಮನೆಯಲ್ಲಿ ಮಲಗಿದ್ದ ಅಜ್ಜಿ ಮತ್ತು ಮೊಮ್ಮಗನ ಮೇಲೆ ಬಿದ್ದಿದೆ. ಇದರಿಂದ ಪಾರ್ವತಿ (65) ಹಾಗೂ ಅವರ ಮೊಮ್ಮಗ ಧನುಷ್ (11) ಮೃತಪಟ್ಟಿದ್ದಾರೆ. ಪುತ್ತೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪುತ್ತೂರು ಸಹಾಯಕ ಕಮಿಷನರ್ ಎಚ್.ಕೃಷ್ಣಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

https://tulunadunews.com/wp-content/uploads/2018/07/whatsapp-video-2018-07-07-at-08.42.17.mp4
0
Shares
  • Share On Facebook
  • Tweet It




Trending Now
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
  • Popular Posts

    • 1
      ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್

  • Privacy Policy
  • Contact
© Tulunadu Infomedia.

Press enter/return to begin your search