• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಮದೆನಾಡುಗಳಲ್ಲಿ ಸಂಭವಿಸಿದ ಜಲಪ್ರಳಯ; ಎದುರಾಗುತ್ತಿದೆ ಪಶ್ಚಿಮ ಘಟ್ಟದ ತಪ್ಪಲು ಕುಸಿಯುವ ಭೀತಿ!

Tulunadu News Posted On August 22, 2018
0


0
Shares
  • Share On Facebook
  • Tweet It

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗ ಕೊಡಗಿನ ಜೋಡುಪಾಳ ಹಾಗು ಮದೆನಾಡುಗಳಲ್ಲಿ ಸಂಭವಿಸಿದ ಜಲಪ್ರಳಯ ನಂತರ ಸುಳ್ಯ ಗಡಿಭಾಗಗಳಲ್ಲೂ ಗುಡ್ಡಗಳು ಕುಸಿಯುವ ಆತಂಕ ವ್ಯಕ್ತವಾಗುತ್ತಿವೆ . ಪಶ್ಚಿಮ ಘಟ್ಟದ ತಪ್ಪಲು ಕುಸಿಯುವ ಭೀತಿ ಈಗ ಎದುರಾಗುತ್ತಿದೆ.  ಸುಳ್ಯದ ಗಡಿಭಾಗ ಕೂಜುಮಲೆ, ಕಲ್ಮಕಾರು ಅರಣ್ಯದ ಬೆಟ್ಟ ಪ್ರದೇಶದಲ್ಲಿ ಭೂಮಿ ಬಿರುಕು ಬಿಟ್ಟಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಭಾಗದಲ್ಲಿ ನೆಲೆಸಿರುವ ಜನರಲ್ಲಿ ಆತಂಕ ಅರಂಭವಾಗಿದೆ.

ಕೆಲ ದಿನಗಳ ಹಿಂದೆ ಇಲ್ಲಿಗೆ ಸಮೀಪದ ಮಾಯಿಲ ಕೋಟೆ ಎಂಬಲ್ಲಿ ಭೂಮಿ ಅಡಿ ಭಾರೀ ಶಬ್ದ ಕೇಳಿ ಬಂದ ಹಿನ್ನೆಲೆಯಲ್ಲಿ ಸ್ಥಳೀಯ ಜನರು ಭಯದಿಂದ ಮನೆ ತೊರೆದು ಸುರಕ್ಷಿತ ಪ್ರದೇಶಕ್ಕೆ ತೆರಳಿದ್ದರು. ಈಗಾಗಲೇ ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದ ಜನರಲ್ಲಿ ಆತಂಕ ಸೃಷ್ಟಿಯಾಗಿದ್ದು, ಇಲ್ಲಿಯ ಬಾಡಡ್ಕ ಸುಂದರ ಮಲೆಕುಡಿಯರವರ ಮನೆಯ ಹಿಂಬದಿಯ ಗುಡ್ಡ ಸುಮಾರು 1 ಕಿ.ಮೀ. ದೂರ ಬಿರುಕು ಬಿಟ್ಟಿದೆ. ಗುಡ್ಡ ಜರಿದರೆ ಸುಂದರ ಮಲೆಕುಡಿಯರ ಮನೆ ಸಹಿತ ನೂರಾರು ಎಕರೆ ಕೃಷಿ ಜಮೀನು ಸಂಪೂರ್ಣ ನಾಶವಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಈ ನಡುವೆ ಸುಬ್ರಹ್ಮಣ್ಯ ಸಮೀಪದ ಅರಣ್ಯ ಪ್ರದೇಶ ಗುತ್ತಿಗಾರಿನ ದೇವಚಳ್ಳ, ಕರಂಗಲ್ಲು ಬೆಟ್ಟದಿಂದ ಭಾರೀ ಪ್ರಮಾಣದಲ್ಲಿ ನೀರು ಹರಿಯಲಾರಂಭಿಸಿದೆ. ಬೆಟ್ಟದ ಮೇಲಿಂದ ಭಾರೀ ಪ್ರಮಾಣದಲ್ಲಿ ಕಲ್ಲು ಮಣ್ಣು ಹರಿದು ಬರುತ್ತಿದೆ. ಈ ಹಿನ್ನೆಲೆಯಲ್ಲಿ ಬೆಟ್ಟ ಕುಸಿಯುವ ಭೀತಿ ಎದುರಾಗಿದ್ದು, ಬೆಟ್ಟದ ತಪ್ಪಲಿನಲ್ಲಿರುವ ಹತ್ತಾರು ಎಕರೆ ಅಡಿಕೆ, ರಬ್ಬರ್ ತೋಟ ನಾಶವಾಗುವ ಆತಂಕ ಕಾಡಲಾರಂಭಿಸಿದೆ. ಪರಿಣಾಮ ದೇವಚಳ್ಳ, ಕರಂಗಲ್ಲು ಪ್ರದೇಶದಲ್ಲಿ ವಾಸಿಸುವ ಜನರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search