• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಶಾಸಕ ವೇದವ್ಯಾಸ ಕಾಮತ್ ವಿನಂತಿ ಮೇರೆಗೆ ನಾಗಾಲ್ಯಾಂಡ್ ರಾಜ್ಯಪಾಲರಿಂದ ಕೊಡಗು ಜಿಲ್ಲೆಗೆ 5 ಲಕ್ಷ ರೂ. ದೇಣಿಗೆ

Tulunadu News Posted On August 22, 2018
0


0
Shares
  • Share On Facebook
  • Tweet It

ಮಂಗಳೂರು : ಮಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ಅವರ ವಿನಂತಿ ಮೇರೆಗೆ ನಾಗಾಲ್ಯಾಂಡ್ ಮತ್ತು ಅರುಣಾಚಲ ಪ್ರದೇಶ ರಾಜ್ಯಪಾಲ ಪಿ.ಬಿ.ಆಚಾರ್ಯ ಅವರು ಪ್ರವಾಹ ಪೀಡಿತ ಕೊಡಗು ಜಿಲ್ಲೆಗೆ 5 ಲಕ್ಷ ರೂ. ದೇಣಿಗೆಯನ್ನು ವೈಯ್ಯಕ್ತಿಕವಾಗಿ ನೀಡಿದ್ದಾರೆ. ವೇದವ್ಯಾಸ ಕಾಮತ್ ಅವರು ನಾಗಾಲ್ಯಾಂಡ್ ಮತ್ತು ಅರುಣಾಚಲ ಪ್ರದೇಶ ರಾಜ್ಯಪಾಲ ಪಿ.ಬಿ.ಆಚಾರ್ಯ ಅವರಿಗೆ ಕೇರಳ ಮತ್ತು ಕೊಡಗಿನ ಪ್ರವಾಹಕ್ಕೆ ದೇಣಿಗೆ ನೀಡುವಂತೆ ಮನವು ಮಾಡಿದ್ದರು.

ಶಾಸಕ ವೇದವ್ಯಾಸ ಕಾಮತ್ ಅವರ ವಿನಂತಿಯ ಮೇರೆಗೆ ರಾಜ್ಯಪಾಲರು ಕೇರಳದ ನೆರೆಪೀಡಿತ ಪ್ರದೇಶಕ್ಕೆ 1 ಕೋಟಿ ರೂಪಾಯಿ ಪರಿಹಾರ ಘೋಷಿಸಲು ರಾಜ್ಯ ಸರಕಾರಕ್ಕೆ ಶಿಫಾರಸು ಮಾಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದಾಗಿರು ಹಾನಿಗೆ ಪರಿಹಾರವಾಗಿ ನಾಗಾಲ್ಯಾಂಡ್ ರಾಜ್ಯ ಸರಕಾರದ ವತಿಯಿಂದ 20 ಲಕ್ಷ ರೂಪಾಯಿಯನ್ನು ಶಾಸಕರ ಮನವಿಯಂತೆ ಬಿಡುಗಡೆ ಮಾಡಲಾಗಿದೆ. ತಮ್ಮ ವಿನಂತಿಯನ್ನು ಪುರಸ್ಕರಿಸಿ ನೆರೆಪೀಡಿತ ಪ್ರದೇಶಕ್ಕೆ ಶೀಘ್ರದಲ್ಲಿ ಹಣ ಬಿಡುಗಡೆ ಮಾಡಲು ಸಹಕರಿಸಿದ ರಾಜ್ಯಪಾಲ ಪಿ.ಬಿ.ಆಚಾರ್ಯ ಅವರಿಗೆ ಶಾಸಕ ಡಿ.ವೇದವ್ಯಾಸ ಕಾಮತ್ ಕೃತಜ್ಞತೆ ಸಲ್ಲಿಸಿದ್ದಾರೆ.

ಸಂಕಷ್ಟದಲ್ಲಿ ಜನರಿಗಾಗಿ ಪಿ.ಬಿ.ಆಚಾರ್ಯ ಅವರ ಮನಸ್ಸು ಯಾವಾಗಲೂ ಮಿಡಿಯುತ್ತದೆ. ಕೇರಳ ಮತ್ತು ಕೊಡಗು ಜನರು ಆದಷ್ಟು ಬೇಗ ಸಹಜ ಜೀವನಕ್ಕೆ ಮರಳಲಿ ಎಂದು ಪಿ.ಬಿ.ಆಚಾರ್ಯ ಅವರು ಹಾರೈಸಿದ್ದಾರೆ ಎಂದು ಶಾಸಕರು ಹೇಳಿದ್ದಾರೆ. ಬಿಜೆಪಿ ಸಂಸದರು, ಶಾಸಕರ ಒಂದು ತಿಂಗಳ ವೇತನ : ‘ಕೊಡಗು ಜಿಲ್ಲೆಯ ಪ್ರವಾಹ ಪೀಡಿತ ಸಂತ್ರಸ್ಥರ ನಿಧಿಗೆ ಬಿಜೆಪಿಯ ಎಲ್ಲಾ ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸದರ ಒಂದು ತಿಂಗಳ ವೇತನ ನೀಡಲಾಗುತ್ತದೆ’ ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search