ಕಾಂಜರ ಕಟ್ಟೆ ಬಸ್ಸು ನಿಲ್ದಾಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ
ಮಂಗಳೂರು; ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಾಂಜರ ಕಟ್ಟೆ ಬಸ್ಸು ತಂಗುದಾಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲ್ಲೂಕಿನ ವೇಣೂರು ಗ್ರಾಮದ ಗೋಳಿಯಂಗಡಿ ಬಳಿಯ ಬಾಡಿಗೆ ಮನೆ ನಿವಾಸಿ ವಜೀರ್ ಖಾನ್ ಎಂಬವರ ಮಗ ಇಮ್ರಾನ್ @ ಇಮ್ರಾನ್ (೨೯) ಎಂದು ಗುರುತಿಸಲಾಗಿದೆ.
ಬಂಧಿತ ಆರೋಪಿಯಿಂದ ಅಂದಾಜು ೧,೬೦೦ ರೂಪಾಯಿ ಮೌಲ್ಯದ ೭೫ ಗ್ರಾಂ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಾರ್ಯಚರಣೆಯಲ್ಲಿ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಾದ ನಾಗೇಶ್ ಕದ್ರಿಯವರ ಮಾರ್ಗದರ್ಶನದಂತೆ, ವೇಣೂರು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ನಾಗಾರಾಜ್ ಅವರ ನೇತೃತ್ವದಲ್ಲಿ ಠಾಣಾ ಸಿಬ್ಬಂದಿಗಳಾದ ಎಎಸ್‌ಐ ಶೈಲೇಶ್, ಹರೀಶ್ ನಾಯ್ಕ್, ವಿಜಯ ಕುಮಾರ್ ರೈ, ರೋಹಿತ್ ಕುಮಾರ್, ಕೃಷ್ಣ ನಾಯ್ಕ್ ಅವರು ಭಾಗವಹಿಸಿದ್ದರು. ಈ ಬಗ್ಗೆ ವೇಣೂರು ಪೊಲೀಸ್ ಠಾಣಾ ಅಕ್ರ ೮೧/೨೦೧೮ ಕಲಂ: ೮ ಸಿ ಜೊತೆಗೆ ೨೦(ಬಿ) ಎನ್ ಡಿ ಪಿ ಎಸ್ ಕಾಯ್ದೆ ಯಂತೆ ಪ್ರಕರಣ ದಾಖಲಿಸಿಲಾಗಿದೆ.
Leave A Reply