ಗುತ್ತಿಹಳ್ಳಿ ಗ್ರಾಮದಲ್ಲಿ 3 ಕಾಡಾನೆಗಳ ಕಾಟಕ್ಕೆ ಬೇಸತ್ತ ಗ್ರಾಮಸ್ಥರು
ಚಿಕ್ಕಮಗಳೂರು: ಕಾಡಾನೆ ದಾಳಿಯಿಂದ ಬಾಳೆ, ಕಾಫಿ, ಮೆಣಸು, ಭತ್ತ ನಾಶವಾಗಿರುವ ಘಟನೆ ಮೂಡಿಗೆರೆ ತಾಲೂಕಿನ ಗುತ್ತಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಗುತ್ತಿಹಳ್ಳಿ, ಮೂಲರಹಳ್ಳಿ, ಬೈರಾಪುರ ಸುತ್ತಮುತ್ತ ಕಾಡಾನೆ ಹಾವಳಿ ಹೆಚ್ಚಾಗಿದ್ದು, ಮೂಲರಹಳ್ಳಿ ರಘು ಹಾಗೂ ನಾಲ್ಕೈದು ಜನರ ತೋಟದ ಬೆಳೆ ನಾಶವಾಗಿದೆ.
ಇದೀಗ ಸ್ಥಳಕ್ಕೆ ಬಾರದ ಅರಣ್ಯಾಧಿಕಾರಗಳ ವಿರುದ್ಧ ಸ್ಥಳೀಯರು ಆಕ್ರೋಶವ್ಯಕ್ತಪಡಿಸಿದ್ದಾರೆ. ಕಳೆದೊಂದು ತಿಂಗಳಿನಿಂದ ಮೂರು ಕಾಡಾನೆಗಳು ಬೀಡುಬಿಟ್ಟಿದ್ದು, ಕಾಡಾನೆ ಕಾಟಕ್ಕೆ ಗ್ರಾಮಸ್ಥರು ಬೇಸತ್ತಿ ಹೋಗಿದ್ದಾರೆ. ಕಳೆದೆರೆಡು ತಿಂಗಳ ಹಿಂದೆ ಚನ್ನಪಟ್ಟಣ ತಾಲೂಕಿನ ಬಿ.ವಿ.ಹಳ್ಳಿ ಗ್ರಾಮದಲ್ಲಿ ಕಾಡಾನೆಗಳು ರೈತರ ಬೆಳೆಗಳನ್ನು ನಾಶ ಮಾಡಿದ್ದವು.
ಒಂದು ವಾರಗಳ ಕಾಲ ಕಾಡಾನೆಗಳು ಸತತವಾಗಿ ದಾಳಿ ನಡೆಸಿದ್ದು, ರೈತರ ಭತ್ತ, ರಾಗಿ, ಮಾವು ಬೆಳೆಗಳನ್ನು ನಾಶಪಡಿಸಿದ್ದವು. ಪಕ್ಕದ ತೆಂಗಿನಕಲ್ಲು ಅರಣ್ಯ ಪ್ರದೇಶದಿಂದ ಆನೆಗಳು ಬಂದಿರಬಹುದು ಎಂದು ಶಂಕಿಸಲಾಗಿದ್ದು, ಅರಣ್ಯ ಪ್ರದೇಶದಲ್ಲಿ ಬೀಡುಬಿಟ್ಟು ರಾತ್ರಿ ವೇಳೆ ರೈತರ ಬೆಳೆಗಳ ಮೇಲೆ ದಾಳಿ ನಡೆಸುತ್ತಿವೆ ಎಂದು ರೈತರು ಆರೋಪಿಸಿದ್ದರು.
Leave A Reply