• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಇಚ್ಚಲ್ಲಂಪಾಡಿಯಲ್ಲಿ ರೇಬಿಸ್ ಹರಡುವ ಆತಂಕ, ಚುಚ್ಚು ಮದ್ದು ಹಾಕಿಸಿಕೊಳ್ಳಲು ಮುಗಿಬಿದ್ದ ಜನ

Tulunadu News Posted On September 4, 2018
0


0
Shares
  • Share On Facebook
  • Tweet It

ಮಂಗಳೂರು: ರೇಬಿಸ್ ರೋಗ ಹರಡುವ ಭಯದಿಂದ ಊರಿಗೆ ಊರೆ ಆಂಟಿ ರೇಬಿಸ್ ಚುಚ್ಚು ಮದ್ದು ಪಡೆಯಲು ಮುಗಿಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಹೌದು, ರೇಬಿಸ್ ವೈರಾಣುವಿನಿಂದ ಮೃತಪಟ್ಟ ಯುವಕನ ಅಂತ್ಯಸಂಸ್ಕಾರಕ್ಕೆ ಹೋಗಿದ್ದ ಇಡೀ ಊರಿನ ಜನ ಆಂಟಿ ರೇಬಿಸ್ ಚುಚ್ಚುಮದ್ದು ಪಡೆದುಕೊಳ್ಳಬೇಕಾದ ಸ್ಥಿತಿ ನಿರ್ಮಾಣಗೊಂಡಿರುವ ಪ್ರಸಂಗ ಪುತ್ತೂರು ತಾಲೂಕಿನ ಇಚ್ಚಲ್ಲಂಪಾಡಿ ಎಂಬಲ್ಲಿ ಬೆಳಕಿಗೆ ಬಂದಿದೆ.

ಆಶಿತ್ ಎನ್ನುವ ಯುವಕ ಆಗಸ್ಟ್ 22 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ. ಆತನ ಮೃತದೇಹವನ್ನು ಮನೆಯವರಿಗೆ ನೀಡುವ ಸಂದರ್ಭದಲ್ಲಿ ಸಾವು ರೇಬಿಸ್ ವೈರಾಣುವಿನಿಂದ ಸಂಭವಿಸಿದೆ ಎನ್ನುವ ಕಾರಣ ನೀಡಿದ್ದರು.ಪ್ಲಾಸಿಟ್ ಪ್ಯಾಕ್ ಮಾಡಿದ ಮೃತದೇಹವನ್ನು ಯಾವುದೇ ಕಾರಣಕ್ಕೂ ತೆರೆಯಬಾರದು ಎನ್ನುವ ಸೂಚನೆಯನ್ನೂ ನೀಡಿದ್ದರು. ಆದರೆ ಮನೆ ಮಂದಿ ಅದನ್ನು ನಿರ್ಲಕ್ಷಿಸಿ ಸಂಪ್ರದಾಯದಂತೆ ಅಂತ್ಯಸಂಸ್ಕಾರವನ್ನು ನಿರ್ವಹಿಸಿದ್ದರು. ಈ ಸಂದರ್ಭದಲ್ಲಿ ಪ್ಯಾಕ್ ಮಾಡಿದ್ದ ಮೃತದೇಹವನ್ನು ಬಿಚ್ಚಲಾಗಿದ್ದು, ಮೃತದೇಹದಿಂದ ರಕ್ತ ಸೇರಿದಂತೆ ದ್ರವ ರೂಪದ ವಸ್ತು ಮನೆ ಹಾಗು ಅಂಗಳದಲ್ಲಿ ಚೆಲ್ಲಿತ್ತು. ಅಂತ್ಯ ಸಂಸ್ಕಾರ ಸಂದರ್ಭದಲ್ಲಿ ಮೃತ ಯುವಕನ ಸಂಬಂಧಿಕರು ಹಾಗೂ ಊರವರು ಭಾಗಿಯಾಗಿದ್ದರು.

ಸಾವು ರೇಬೀಸ್ ರೋಗದಿಂದ ಸಂಭವಿಸಿದೆ ಎನ್ನುವ ವಿಚಾರವೀಗ ಊರವರ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಇದೀಗ ಊರಿಗೆ ಊರೇ ಬೆಚ್ಚಿ ಬಿದ್ದಿದೆ. ರೇಬಿಸ್ ರೋಗ ಹರಡುವ ಆತಂಕ ಊರಲ್ಲೆಲ್ಲಾ ಹಬ್ಬಿದೆ. ಇದೀಗ ಅಂತ್ಯಸಂಸ್ಕಾರದಲ್ಲಿ ಭಾಗಿಯಾದ 67 ಮಂದಿ ನೆಲ್ಯಾಡಿ ಸರಕಾರಿ ಆರೋಗ್ಯ ಕೇಂದ್ರದಲ್ಲಿ ಆಂಟಿ ರೇಬೀಸ್ ಚುಚ್ಚುಮದ್ದನ್ನು ಪಡೆದಿದ್ದಾರೆ. ಇನ್ನು ಕೆಲವು ಮಂದಿ ಖಾಸಗಿ ಚಿಕಿತ್ಸಾಲಯದಲ್ಲೂ ಇಂಜೆಕ್ಷನ್ ಪಡೆದಿದ್ದಾರೆ ಎನ್ನಲಾಗಿದೆ.

ಅಂತ್ಯಸಂಸ್ಕಾರದ ವೇಳೆ ಮೃತದೇಹದಿಂದ ರಕ್ತ ಹಾಗೂ ಎಂಜಲು ಚೆಲ್ಲಿದ್ದಲ್ಲಿ ಇದರಿಂದ ರೇಬೀಸ್ ವೈರಾಣು ಹರಡುವ ಸಾಧ್ಯತೆಯಿದೆ ಎನ್ನುವ ಅಭಿಪ್ರಾಯವನ್ನು ನೆಲ್ಯಾಡಿ ಸರಕಾರಿ ಆರೋಗ್ಯ ಕೇಂದ್ರದ ವೈದ್ಯರು ಸ್ಪಷ್ಟಪಡಿಸಿದ್ದಾರೆ. ಈ ನಡುವೆ ಚುಚ್ಚುಮದ್ದಿಗಾಗಿ ಸರಕಾರಿ ಆಸ್ಪತ್ರೆಗೆ ಬರುವ ಬಿಪಿಎಲ್ ಕುಟುಂಬಗಳಿಂದಲೂ 100 ರೂಪಾಯಿ ವಸೂಲಿ ಮಾಡಲಾಗುತ್ತಿದೆ ಎನ್ನುವ ಆರೋಪವೂ ಕೇಳಿ ಬಂದಿದೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search