ಕೆಐಎಡಿಬಿ ವಂಚನೆ : ಸಚಿವ ಯು.ಟಿ.ಖಾದರ್‌ಗೆ ಮುತ್ತಿಗೆ
ಸುರತ್ಕಲ್ : ಎಂಆರ್‌ಪಿಎಲ್ ಯೋಜನಾ ವಿಸ್ತರಣೆಯಲ್ಲಿ ಕೆಐಎಡಿಬಿ ಅಕ್ರಮ ನಡೆಸಿದೆ ಎಂದು ಸಚಿವ ಯು.ಟಿ.ಖಾದರ್ ಕಾರಿಗೆ ಮುತ್ತಿಗೆ ಹಾಕಲಾಗಿದೆ. ವ್ಯವಸಾಯ ಮಾಡುವಷ್ಟು ಭೂಮಿ ಫಲವತ್ತಾಗಿದ್ದರೂ ಅದನ್ನು ಒಣ ಭೂಮಿ ಎಂದು ಎಂಆರ್‌ಪಿಎಲ್ ಸಲ್ಲಿಸಿದ ಸುಳ್ಳು ಅರ್ಜಿಯನ್ನು ಒಪ್ಪಿಕೊಂಡು ರೈತರನ್ನು ವಂಚಿಸಲಾಗಿದೆ ಎಂಬುದು ಆರೋಪ. ಎಂಆರ್‌ಪಿಎಲ್ ಯೋಜನಾ ವಿಸ್ತರಣೆಗೆ ಸಂಬಂಧಿಸಿದಂತೆ ಕುತ್ತೆತ್ತೂರು, ಪೆರ್ಮುದೆ ಮತ್ತು ಇತರ ಗ್ರಾಮಗಳ ಕೃಷಿ ಭೂಮಿಯನ್ನು ಸ್ವಾಧೀನಕ್ಕೆ ಪಡೆದುಕೊಳ್ಳುವ ಪ್ರಕ್ರಿಯೆಯಲ್ಲಿ ಕೆಐಎಡಿಬಿ ಅಧಿಕಾರಿಗಳು ಅಕ್ರಮ ನಡೆಸಿದ್ದಾರೆ ಎಂದು ಆರೋಪಿಸಲಾಗುತ್ತಿದೆ.
ಕೆಐಎಡಿಬಿಯ ಈ ಅಕ್ರಮವನ್ನು ಪ್ರತಿಭಟಿಸಿ ವಿಶೇಷ ಭೂಸ್ವಾಧೀನಾಧಿಕಾರಿಯ ಮೇಲೆ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ತರು ಆಗ್ರಹಿಸಿದ್ದಾರೆ. ವಸತಿ ಮತ್ತು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಕಾರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರರು ಸ್ವಾಧೀನತೆಯ ಪ್ರಕ್ರಿಯೆಯಲ್ಲಿ ಮೇಲ್ನೋಟಕ್ಕೆ ಅಕ್ರಮ ಕಂಡು ಬಂದಿದ್ದು, ತನಿಖೆ ನಡೆಸುತ್ತೇವೆ ಎಂದು ಆಶ್ವಾಸನೆಯನ್ನು ನೀಡಿದ್ದಾರೆ. ಅಕ್ರಮದ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಪೂರಕ ದಾಖಲೆಗಳನ್ನು ಸಲ್ಲಿಸಿದ್ದರು ಯಾವುದೇ ತನಿಖೆ ನಡೆಸಿಲ್ಲ ಎಂದು ಗ್ರಾಮಸ್ಥರು ದೂರಿದರು.
ತನಿಖೆ ನಡೆಸಲು ಜಿಲ್ಲಾಡಳಿತವು ನಿರಾಸಕ್ತಿಯನ್ನು ತೋರಿಸುತ್ತಿದೆ. ಭ್ರಷ್ಟ ಕೆಐಎಡಿಬಿ ಅಧಿಕಾರಿಗಳ ಪರವಾಗಿ ನಿಲುವು ತಳಿದಂತೆ ಕಂಡು ಬರುತ್ತಿದೆ. ಈ ರೀತಿಯ ಕಾನೂನು ಬದ್ಧ ಹೋರಾಟಕ್ಕೆ ಮಾನ್ಯತೆ ಸಿಗದೇ ಇದ್ದರೆ ನಾವು ಯಾವ ರೀತಿ ಪ್ರತಿಭಟನೆಯನ್ನು ಮಾಡಬೇಕು? ಎಂದು ಗ್ರಾಮಸ್ಥರು ಪ್ರಶ್ನಿಸಿದ್ದಾರೆ.
ಪೆರ್ಮುದೆ, ಕುತ್ತೆತ್ತೂರು ಮತ್ತಿತರ ಗ್ರಾಮಗಳ ಭೂಮಿಯು ಮೂರು ಬೆಳೆ ಬೆಳೆಯುವಷ್ಟು ಫಲವತ್ತಾಗಿದ್ದರೂ ಅದನ್ನು ಒಣ ಭೂಮಿ ಎಂದು ಎಂಆರ್‌ಪಿಎಲ್ ಸಲ್ಲಿಸಿದ ಸುಳ್ಳು ಅರ್ಜಿಯನ್ನು ಒಪ್ಪಿಕೊಂಡು ರೈತರನ್ನು ವಂಚಿಸಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇದು ಕೃಷಿಯೋಗ್ಯ ಭೂಮಿ ಎಂಬುದಕ್ಕೆ ಇಲ್ಲಿ ನಡೆಯುತ್ತಿದ್ದ ಕೃಷಿಯೇ ಸಾಕ್ಷಿಯಾಗಿದೆ. ಮಾಲಿನ್ಯ ನಿಯಂತ್ರಣ ಮಂಡಳಿಯ ಅನುಮತಿ ಪಡೆಯಬೇಕೆಂಬ ನಿಯಮವನ್ನು ಉಲ್ಲಂಘಿಸಲಾಗಿದೆ. ರೈತರಿಗೆ ವಂಚಿಸಿ ಅವರ ಕೊರಳಿಗೆ ಉರುಳು ಹಾಕಲು ಸಿದ್ದರಾದವರ ಪರವಾಗಿ ವರ್ತಿಸುವ ಜನಪ್ರತಿನಿಧಿಗಳು ರಾಜೀನಾಮೆ ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದರು.
Leave A Reply