• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಶಿವಭಾಗ್ ಹೋಟೆಲ್ ಮೇಲೆ ಕಲ್ಲು ತೂರಾಟ: ಕಾಂಗ್ರೆಸ್‌ ಮುಖಂಡನ ಬಂಧನ

Tulunadu News Posted On September 13, 2018
0


0
Shares
  • Share On Facebook
  • Tweet It

ಮಂಗಳೂರು: ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ ಕರೆ ನೀಡಿದ್ದ ಭಾರತ್ ಬಂದ್ ಸಂದರ್ಭದಲ್ಲಿ ಮಂಗಳೂರಿನಲ್ಲಿ ಹೋಟೆಲ್ ಮೇಲೆ ಕಲ್ಲು ತೂರಾಟ ನಡೆಸಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕಾಟಿಪಳ್ಳ 3ನೇ ಬ್ಲಾಕ್ ನಿವಾಸಿ ಅಮರ್ ಸೋನ್ಸ್ (28) ಎಂದು ಗುರುತಿಸಲಾಗಿದೆ.

ಬಂದ್ ಸಂದರ್ಭದಲ್ಲಿ ಅಮರ್ ಸೋನ್ಸ್ ಮತ್ತು ಆತನ ಸಹಚರ ಬೈಕ್ ನಲ್ಲಿ ಬಂದು ನಗರದ ಶಿವಭಾಗ್ ನಲ್ಲಿರುವ ಶಿವಭಾಗ್ ಹೊಟೇಲ್‌ಗೆ ಕಲ್ಲು ತೂರಾಟ ನಡೆಸಿದ್ದ. ಈ ಘಟನೆಯ ಕುರಿತು ನಗರದ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಹೋಟೆಲ್ ಮೇಲೆ ಕಲ್ಲು ತೂರಾಟ ನಡೆಸಿದ ಕೃತ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕೃತ್ಯದಲ್ಲಿ ಭಾಗಿಯಾಗಿದ್ದ ಇನ್ನೊಬ್ಬನಿಗೆ ಶೋಧ ಮುಂದುವರಿದಿದೆ. ಬಂಧಿತ ಆರೋಪಿ ಅಮರ್ ಸೋನ್ಸ್ ಯುವ ಕಾಂಗ್ರೆಸ್ ಮುಖಂಡನಾಗಿದ್ದು. ದಕ್ಷಿಣ ಕನ್ನಡ ಜಿಲ್ಲಾ ಯುವಕಾಂಗ್ರೆಸ್ ನಾಯಕ ಮಿಥುನ್ ರೈ ಆಪ್ತ ಎಂದು ಹೇಳಲಾಗಿದೆ. ಅಮರ್ ಸೋನ್ಸ್ ಬಂಧನ ದಕ್ಷಿಣ ಕನ್ನಡ ಕಾಂಗ್ರೆಸ್‌ ನಾಯಕರಿಗೆ ಮುಜುಗರ ತಂದಿದೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search