• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಎರಡನೇ ಬಾರಿಯೂ ಪಾಕಿಸ್ಥಾನವನ್ನು ಎಡಮುರಿ ಕಟ್ಟಿದ ಭಾರತ..!!

TNN Correspondent Posted On September 24, 2018


  • Share On Facebook
  • Tweet It

ದುಬೈ: ಆರಂಭಿಕರಾದ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಅವರ ಶತಕಗಳ ನೆರವಿನಿಂದ ಭಾರತ ತಂಡ ಏಷ್ಯಾಕಪ್​ನಲ್ಲಿ ಪಾಕಿಸ್ತಾನ ವಿರುದ್ಧ 9 ವಿಕೆಟ್​ಗಳ ಭಾರೀ ಗೆಲುವು ದಾಖಲಿಸಿದೆ.ಭಾನುವಾರ ನಡೆದ ಸೂಪರ್​-4 ಹಂತದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ತಂಡವನ್ನು 7 ವಿಕೆಟ್​ಗೆ 238 ರನ್‍ಗಳಿಗೆ ನಿಯಂತ್ರಿಸಿದ ಭಾರತ ತಂಡ 39.3 ಓವರ್​ ಗಳಲ್ಲಿ ಕೇವಲ 1 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.ಸ್ಪರ್ಧಾತ್ಮಕ ಮೊತ್ತ ಗುರಿ ಬೆಂಬತ್ತಿದ ಭಾರತ ತಂಡಕ್ಕೆ ರೋಹಿತ್ ಮತ್ತು ಶಿಖರ್ ಧವನ್ ಮೊದಲ ವಿಕೆಟ್​ಗೆ 210 ರನ್​ ಜೊತೆಯಾಟದ ಮೂಲಕ ಭರ್ಜರಿ ಆರಂಭ ಒದಗಿಸಿದರು. ನಂತರ ಬಂದ ಅಂಬಟಿ ರಾಯುಡು ಮತ್ತು ರೋಹಿತ್ ಗೆಲುವಿನ ದಡ ಸೇರಿಸಿದರು.ನಾಯಕ ರೋಹಿತ್119 ಎಸೆತಗಳಲ್ಲಿ 7 ಬೌಂಡರಿ ಮತ್ತು 4 ಸಿಕ್ಸರ್ ಒಳಗೊಂಡ 111 ರನ್ ಬಾರಿಸಿ ಔಟಾಗದೇ ಉಳಿದರು. ಇದು ರೋಹಿತ್​ಗೆ 19ನೇ ಏಕದಿನ ಶತಕವಾಗಿದೆ. ಮತ್ತೊಬ್ಬ ಬ್ಯಾಟ್ಸ್ ಮನ್ ಶಿಖರ್ ಧವನ್ 100 ಎಸೆತಗಳಲ್ಲಿ 16 ಬೌಂಡರಿ ಹಾಗೂ 2 ಸಿಕ್ಸರ್ ಸೇರಿದಂತೆ 114 ರನ್ ಸಿಡಿಸಿ ಔಟಾದರು. ಇದು ಧವನ್​ಗೆ 15ನೇ ಶತಕವಾಗಿದೆ.
ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ ಆರಂಭಿಕ ಆಘಾತಕ್ಕೆ ಒಳಗಾಯಿತು. ಆದರೂ ಮಧ್ಯಮ ಕ್ರಮಾಂಕದಲ್ಲಿ ನಾಯಕ ಸರ್ಫಾರಾಜ್ ಅಹ್ಮದ್ (44) ಮತ್ತು ಶೋಯೆಬ್ ಮಲಿಕ್ (78) 4ನೇ ವಿಕೆಟ್​ಗೆ 107 ರನ್ ಜೊತೆಯಾಟ ನಿಭಾಯಿಸಿ ತಂಡವನ್ನು ಉತ್ತಮ ಮೊತ್ತದತ್ತ ಕೊಂಡೊಯ್ದರು.ಭಾರತದ ಪರ ಉತ್ತಮ ದಾಳಿ ಸಂಘಟಿಸಿದ ಜಸ್ ಪ್ರೀತ್ ಬುಮ್ರಾ, ಯಜುರ್ವೆಂದ್ರ ಚಾಹಲ್ ಮತ್ತು ಕುಲದೀಪ್ ಯಾದವ್ ತಲಾ 2 ವಿಕೆಟ್ ಕಬಳಿಸಿದರು.

ಸಂಕ್ಷಿಪ್ತ ಸ್ಕೋರ್

ಪಾಕಿಸ್ತಾನ 50 ಓವರ್ 7 ವಿಕೆಟ್​ಗೆ 237 (ಮಲಿಕ್ 78, ಸರ್ಫರಾಜ್ 44, ಜಮಾನ್ 31, ಆಸೀಫ್ 30, ಬುಮ್ರಾ 29/2, ಚಾಹಲ್ 46/2, ಕುಲದೀಪ್ 41/2).
ಭಾರತ 39.3 ಓವರ್ 1 ವಿಕೆಟ್ 237 (ರೋಹಿತ್ ಅಜೇಯ 111, ಧವನ್ 114, ರಾಯುಡು ಅಜೇಯ 12).
ಪಂದ್ಯಶ್ರೇಷ್ಠ: ಶಿಖರ್ ಧವನ್

  • Share On Facebook
  • Tweet It


- Advertisement -


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search