• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ

ಶಬರಿಮಲೆ ತೀರ್ಪಿನ ವಿರುದ್ಧ ಅ.9ರಂದು ಮಂಗಳೂರಿನಲ್ಲಿ ಬೃಹತ್ ಸಭೆ….!

TNN Correspondent Posted On October 6, 2018


  • Share On Facebook
  • Tweet It

ಕದ್ರಿ ಮೈದಾನದಲ್ಲಿ ಸೇರಲಿದ್ದಾರೆ ಸಹಸ್ರಾರು ಮಂದಿ..!!!

ಮಂಗಳೂರು: ಶಬರಿಮಲೆ ಪ್ರವೇಶ ಕುರಿತಂತೆ ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಸುಪ್ರಿಂಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಬೃಹತ್ ಹೋರಾಟ ನಡೆಸಲು ಮಂಗಳೂರಿನ ಅಯ್ಯಪ್ಪ ಸೇವಾ ಸಮಿತಿ ನಿರ್ಧರಿಸಿದೆ.

ಹೋರಾಟದ ಪೂರ್ವಭಾವಿ ಸಭೆ ಶನಿವಾರ ನಗರದ ಸಂಘನಿಕೇತನದಲ್ಲಿ ನಡೆದಿದ್ದು, ಮೊದಲ ಹಂತವಾಗಿ ಅ.೯ರಂದು ಸಂಜೆ ೫ ಗಂಟೆಗೆ ಕದ್ರಿ ಮೈದಾನದಲ್ಲಿ ಸಹಸ್ರಾರು ಸಂಖ್ಯೆಯಲ್ಲಿ ಮಹಿಳೆಯರು ಸೇರಿದಂತೆ ಹಿಂದು ಬಾಂಧವರು ಒಟ್ಟು ಸೇರಿ ಹೋರಾಟದ ರೂಪುರೇಷೆಯ ಸಭೆ ನಡೆಸುವ ತೀರ್ಮಾನ ಕೈಗೊಳ್ಳಲಾಗಿದೆ. ಸಭೆಯ ಬಳಿಕ ಭಜನೆಯ ಮೂಲಕ ಶ್ರೀ ಕ್ಷೇತ್ರ ಕದ್ರಿಗೆ ತೆರಳಿ ಪ್ರಾರ್ಥನೆ ಸಲ್ಲಿಸುವ ನಿರ್ಧಾರಕ್ಕೆ ಸಮಿತಿ ಬಂದಿದೆ. ಸಭೆಯಲ್ಲಿ ಪಾಲ್ಗೊಂಡ ವಿವಿಧೆಡೆಯ ಅಯ್ಯಪ್ಪಸ್ವಾಮಿ ಭಕ್ತರು, ಸಂಘಟನೆಗಳ ಪ್ರಮುಖರು ಹಾಗೂ ಹಿಂದು ಬಾಂಧವರು ತಮ್ಮ ತಮ್ಮ ವ್ಯಾಪ್ತಿಯ ಪುಣ್ಯ ಕ್ಷೇತ್ರಗಳಲ್ಲಿ ಪೂಜೆ ಸಲ್ಲಿಸಿ ಆ ಬಳಿಕ ೫ ಗಂಟೆಗೆ ಸರಿಯಾಗಿ ಕದ್ರಿ ಮೈದಾನದಲ್ಲಿ ಸೇರುವಂತೆ ಸೂಚಿಸಲಾಗಿದೆ. ಪ್ರತಿಯೊಬ್ಬರೂ ತಮ್ಮ ತಮ್ಮ ವ್ಯಾಪ್ತಿಯಿಂದ ಸುಮಾರು ೪೦೦-೫೦೦ ಮಂದಿಯನ್ನು ಕರೆತರುವ ಭರವಸೆ ನೀಡಿದ್ದು ಸಹಸ್ರಾರು ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.

ಮರು ಪರಿಶೀಲನೆಗೆ ಅರ್ಜಿ ಸಲ್ಲಿಸಲೇಬೇಕು..
ಸಭೆಯನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ ಸಹ ಕಾರ್ಯವಾಹ ಪ್ರಕಾಶ್ ಪಿ.ಎಸ್., ಇಡೀ ದೇಶವನ್ನು ಒಗ್ಗೂಡಿಸಿದ ಶಕ್ತಿಯ ಕ್ಷೇತ್ರವೆಂದರೆ ಅದು ಶಬರಿಮಲೆ. ಅತ್ಯಂತ ಶ್ರದ್ಧಾ ಭಕ್ತಿಯಿಂದ ಕೋಟ್ಯಂತರ ಮಂದಿ ಈ ಕ್ಷೇತ್ರಕ್ಕೆ ಬರುತ್ತಿದ್ದಾರೆ. ಆದರೆ ಪರಂಪರೆಯಿಂದ ಬಂದ ಜನತೆಯ ನಂಬಿಕೆಗೆ ಧಕ್ಕೆ ತರುವ  ಕೆಲಸ ಸುಪ್ರಿಂ ಕೋರ್ಟ್ ತೀರ್ಪಿನ ಮೂಲಕ ಆಗಿದೆ. ಕೇರಳ ಸರಕಾರ ತೀರ್ಪಿನ ಮರು ಪರಿಶೀಲನೆಗೆ ಸುಪ್ರಿಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲೇಬೇಕು. ಭಕ್ತರ ಧಾರ್ಮಿಕ ಭಾವನೆಗೆ ಮೊದಲ ಅವಕಾಶ ನೀಡಬೇಕು. ಅಷ್ಟರವರೆಗೆ ಹೋರಾಟ ನಿಲ್ಲಬಾರದು ಎಂದರು.
ಹಿಂದು ಸಮಾಜ ಮಹಿಳಾ ವಿರೋಧಿಯಲ್ಲ, ಶಬರಿಮಲೆಗೆ ಮಹಿಳೆಯರಿಗೆ ನಿಷೇಧವನ್ನೂ ಹೇರಿಲ್ಲ. ೧೦ನೇ ವಯಸ್ಸಿನೊಳಗಿನ ಮತ್ತು ೫೦ ವರ್ಷ ಮೇಲ್ಪಟ್ಟ ಮಹಿಳೆಯರು ಶಬರಿ ಮಲೆಗೆ ಬರಲು ಹಿಂದಿನಿಂದಲೂ ಅವಕಾಶವಿದೆ. ಆದರೆ ಶಬರಿಮಲೆ ಏನೆಂದೇ ಗೊತ್ತಿರದ ಮಂದಿ ಕೋರ್ಟ್ ಮೆಟ್ಟಿಲೇರುವ ಮೂಲಕ ಪರಂಪರೆಗೆ ಪೆಟ್ಟು ನೀಡುವ ಕೆಲಸ ಮಾಡಿದ್ದಾರೆ. ಹಿಂದು ಸಮಾಜವನ್ನು ಮುನ್ನಡೆಸಬೇಕಾದ ಸಂತ ಶ್ರೇಷ್ಟರ ಧಾರ್ಮಿಕ ವಿಚಾರದ ಕುರಿತು ನಿರ್ಧಾರ ತೆಗೆದುಕೊಳ್ಳುವಂತಾಗಬೇಕು ಎಂದವರು ಹೇಳಿದರು.

ಸಂಸದ ನಳಿನ್ ಕುಮಾರ್ ಕಟೀಲ್, ವಿಶ್ವಹಿಂದು ಪರಿಷತ್ ದಕ್ಷಿಣ ಪ್ರಾಂತ ಅಧ್ಯಕ್ಷ ಪ್ರೊ.ಎಂ.ಬಿ.ಪುರಾಣಿಕ್, ಆರೆಸ್ಸೆಸ್ ಮಹಾನಗರ ಸಂಘಚಾಲಕ್ ಸುನಿಲ್ ಆಚಾರ್, ಬಜರಂಗದಳ ಪ್ರಾಂತ ಸಂಚಾಲಕ ಶರ್‌ಪಂಪ್‌ವೆಲ್ ಮತ್ತಿತರರು ಉಪಸ್ಥಿತರಿದ್ದರು.

ಹೀಗಿರಲಿದೆ ಅ.೯ರ ಬೃಹತ್ ಸಭೆ
-ಭಜನೆಗಾಗಿ ತಾಳದೊಂದಿಗೆ ಬರಲಿದ್ದಾರೆ ಭಕ್ತರು
-ಕೇಸರಿ ಶಾಲಿನೊಂದಿಗೆ ಸಹಸ್ರಾರು ಸಂಖ್ಯೆಯಲಿ ಸೇರುವ ನಿರೀಕ್ಷೆ
-ಬೃಹತ್ ಸಬೆಯ ಬಳಿಕ ಭಜನೆಯೊಂದಿಗೆ ಕದ್ರಿಗೆ ತೆರಳಿ ಪೂಜೆ ಸಲ್ಲಿಕೆ
-ರಾಜ್ಯಪಾಲರು, ಕೇಂದ್ರಕ್ಕೆ ಮನವಿ ಸಲ್ಲಿಕೆ
-ಹೋರಾಟಕ್ಕೆ ಹಿರಿಯರನ್ನೊಳಗೊಂಡ ಸೂಕ್ತ ಸಮಿತಿ ರಚನೆ
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ರಾಜೇಶ್ -ಸಂಚಾಲಕರು ಅಯ್ಯಪ್ಪ ಸೇವಾ ಸಮಿತಿ ದಕ . Mobile- 9964142283
  • Share On Facebook
  • Tweet It


- Advertisement -
#sanghnikethanamangalore #rss


Trending Now
ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
Tulunadu News May 5, 2025
ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
Tulunadu News May 5, 2025
Leave A Reply

  • Recent Posts

    • ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!
    • ಕ್ಯಾನ್ಸರ್ ನಿಂದ ಚೇತರಿಸಿಕೊಂಡಿದ್ದ ತಾಯಿಗೆ ಮಗನ ಅಗಲುವಿಕೆಯ ಶಾಕ್!
    • ಬಾಂಗ್ಲಾ ಜೈಲಿನಿಂದ ಇಸ್ಕಾನ್ ಸಂತ ಚಿನ್ಮಯಿ ದಾಸ್ ಬಿಡುಗಡೆ, ಎಲ್ಲೆಡೆ ಹರ್ಷ!
    • ಹತ್ತನೇ ತರಗತಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ, ಉತ್ತರ ಕನ್ನಡ ತೃತೀಯ!
    • ಹಾವೇರಿಯಲ್ಲಿ ಮಾರ್ಗ ಮಧ್ಯ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ!
    • ಪಾಕಿಸ್ತಾನದಲ್ಲಿ ಒಂದು ಲಕ್ಷಕ್ಕೆ ಸಮನಾಗಿರುವ ಒಬ್ಬ ವ್ಯಕ್ತಿಯನ್ನು ಹೊಡೆಯುತ್ತೇನೆ - ಲಾರೆನ್ಸ್ ಬಿಷ್ಣೋಯಿ
  • Popular Posts

    • 1
      ಮೇ 7 ರಂದು ರಾಜ್ಯಗಳಲ್ಲಿ ಅಣಕು ದಾಳಿ ರಕ್ಷಣಾ ಸಿದ್ಧತೆಗೆ ಕೇಂದ್ರ ಸೂಚನೆ!
    • 2
      ಸುಹಾಸ್ ಮೇಲೆ 5 ಕೇಸ್ ಇದ್ದ ಕಾರಣ ಆತನ ಮನೆಗೆ ಹೋಗಿಲ್ಲ - ಗೃಹ ಸಚಿವ
    • 3
      ಮಂಗಳೂರಿನಲ್ಲಿ ನೀಟ್ ಪರೀಕ್ಷೆಗೂ ತಟ್ಟಿತು ಜೈಲ್ ಜಾಮರ್ ಕಾಟ!
    • 4
      ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
    • 5
      ಉಳ್ಳಾಲದ ಕೂಲಿ ಕುಟುಂಬದ ಹೆಣ್ಣುಮಗಳು 10ನೇ ಟಾಪರ್!


  • Privacy Policy
  • Contact
© Tulunadu Infomedia · Tech-enabled by Ananthapuri Technologies

Press enter/return to begin your search