• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಅಕ್ರಮ ಮರಳುಗಾರಿಕೆಗೆ ಸಚಿವರ ಬೆಂಬಲ.!

Tulunadu News Posted On November 17, 2018
0


0
Shares
  • Share On Facebook
  • Tweet It

ಮಂಗಳೂರು-ಅಕ್ರಮ ಮರಳುಗಾರಿಕೆ ವೇಳೆ ದಾಳಿ ನಡೆಸಿ ಪೊಲೀಸರು ವಶಕ್ಕೆ ಪಡೆದ ಲಾರಿಗಳನ್ನು ಅದರ ಮಾಲಕರಿಗೆ ವಾಪಾಸ್ ಕೊಡಿಸುವ ಸಂಬಂಧ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಿರುವುದಾಗಿ ದ‌.ಕ ಜಿಲ್ಲಾ ಉಸ್ತುವಾರಿ ಸಚಿವ ಯು‌.ಟಿ.ಖಾದರ್ ಮಾಹಿತಿ ನೀಡಿದ್ದಾರೆ. ಆದ್ರೆ ಖಾದರ್ ಸಾಹೇಬರ ಈ ನಡೆ ಎಷ್ಟರ ಮಟ್ಟಿಗೆ ಸರಿ ಎಂಬ ಮಾತು ಕೇಳಿ ಬಂದಿದ್ದು, ಖಾದರ್ ಮರಳು ದಂಧೆಕೋರರ ಬೆಂಬಲಕ್ಕೆ ನಿಂತ್ರಾ ಎನ್ನುವ ಆರೋಪ ಕೇಳಿ ಬಂದಿದೆ. ಇಂದು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಖಾದರ್, ಮರಳು ದಂಧೆಗೆ ಪೊಲೀಸರು ಮತ್ತು ಅಧಿಕಾರಿಗಳು ದಾಳಿ ನಡೆಸಿ ಅಲ್ಲಿನ ವಸ್ತುಗಳನ್ನು ವಶಕ್ಕೆ ಪಡೆಯುತ್ತಾರೆ.‌ ಇವುಗಳಲ್ಲಿ ಅನೇಕ ಲಾರಿಗಳಿದ್ದು, ಜಿಲ್ಲೆಯ ಪೊಲೀಸ್ ಠಾಣೆಗಳ ಮುಂಭಾಗ ಸಾಲಾಗಿ ನಿಂತಿದೆ. ಇದರಿಂದ ಲಾರಿಗಳಿಗೆ ತುಕ್ಕು ಹಿಡಿದಿದ್ದು, ಸುಖಾಸುಮ್ನನೆ ಹಾಳಾಗುತ್ತಿದೆ. ಹೀಗಾಗಿ ಆ ಲಾರಿಗಳನ್ನು ಮಾಲೀಕರಿಗೆ ಬಿಡಿಸಿ ಕೊಡಲು ಜಿಲ್ಲಾಧಿಕಾರಿ ಜೊತೆ ಚರ್ಚಿಸಿದ್ದೇನೆ. ಒಂದು ಸಭೆ ಕರೆದು ಲಾರಿಗಳನ್ನು ರಿಲೀಸ್ ಮಾಡೋ ಬಗ್ಗೆ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ ಎಂದರು. ಆದ್ರೆ ಖಾದರ್ ಸಾಹೇಬರ ಈ ನಡೆ ಎಷ್ಟರ ಮಟ್ಟಿಗೆ ಸರಿ ಎನ್ನುವ ಮಾತು ಕೇಳಿ ಬಂದಿದೆ. ಇನ್ನು ಇದೇ ವೇಳೆ ಪತ್ರಕರ್ತರು ಖಾದರ್ ಅವರ ನಡೆಯ ಬಗ್ಗೆ ಪ್ರಶ್ನೆ ಮಾಡಿದ್ರು. ಅಕ್ರಮಕ್ಕೆ ಬೆಂಬಲ ಸರಿಯಾ ಅಂತ ಕೇಳಿದ್ರು. ಈ ವೇಳೆ ಸಮಜಾಯಿಷಿ ನೀಡಿದ ಸಚಿವ ಖಾದರ್, ನೀವು ಹೇಳೋದು ಸರಿ. ಹೀಗಾಗಿ ನಾನು ಕೂಡ ಹೆಚ್ಚು ಮಾತನಾಡಲ್ಲ. ಆದ್ರೆ ಮಾನವೀಯತೆ ದೃಷ್ಟಿಯಿಂದ ಡಿಸಿಯವರಿಗೆ ಹೇಳಿದೆ ಅಷ್ಟೇ. ಅನೇಕರು ಸಾಲ ಮಾಡಿ ಲಾರಿ ಖರೀದಿಸಿರುತ್ತಾರೆ. ಆದ್ರೆ ಈ ರೀತಿ ಆದಾಗ ಮನೆ ನೋಡಿಕೊಳ್ಳೋದು ಕಷ್ಟ. ಹೀಗಾಗಿ ಇದನ್ನು ಮಾನವೀಯತೆ ‌ದೃಷ್ಟಿಯಿಂದ ಕಾನೂನು ವ್ಯಾಪ್ತಿಯಲ್ಲಿ ಸರಿ ಪಡಿಸಲು ಹೇಳಿದ್ದೇನೆ ಎಂದರು. ಅದರೆ ಈ ರೀತಿ ಅಕ್ರಮ ಲಾರಿಗಳ ಪರ ಸಚಿವರೇ ಬ್ಯಾಟ್ ಬೀಸಿರೋದು ಸರಿಯಲ್ಲ ಎಂಬ ಮಾತುಗಳು ಕೇಳಿ ಬಂದಿದೆ.

0
Shares
  • Share On Facebook
  • Tweet It




Trending Now
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
  • Popular Posts

    • 1
      ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • 2
      ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • 3
      ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search