• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ತುಳು ಲಿಪಿ ಯೂನಿಕೋಡ್ ನಕಾಶೆ ಸೇರ್ಪಡೆಗೆ ಕ್ರಮ: ಸಚಿವ ಅರವಿಂದ ಲಿಂಬಾವಳಿ ಹೇಳಿಕೆ

Tulunadu News Posted On July 21, 2021
0


0
Shares
  • Share On Facebook
  • Tweet It

ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿಯು ಬಹು ಕಾಳಜಿಯಿಂದ ಇತಿಹಾಸದ ದಾಖಲೆಗಳನ್ನು ಆಧರಿಸಿ ರೂಪಿಸಿದ ತುಳು ಲಿಪಿಯನ್ನು ಸೂಕ್ತವಾಗಿ ಯುನಿಕೋಡ್‌ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಅಕಾಡೆಮಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.
ಈ ಕ್ರಮದಿಂದಾಗಿ ತುಳು ಲಿಪಿಯು ಯುನಿಕೋಡ್‌ ನಕಾಶೆಯಲ್ಲಿ ಅಧಿಕೃತವಾಗಿ ಸೇರ್ಪಡೆಯಾಗುವ ಕಾರ್ಯವು ವೇಗ ಪಡೆಯಲಿದೆ ಎಂದು ಹೇಳಿರುವ ಅವರು, ಸುಮಾರು ಹತ್ತು ವರ್ಷಗಳಿಂದ ತುಳು ಲಿಪಿಯನ್ನು ರೂಪಿಸುವ ಬಗ್ಗೆ ಹಲವು ಚರ್ಚೆಗಳು ನಡೆದಿದ್ದವು. ಅಂತಿಮವಾಗಿ ತುಳು ಭಾಷಾ ಮತ್ತು ಲಿಪಿ ತಜ್ಞರು ಸರ್ವಾನುಮತಿಯಿಂದ ರೂಪಿಸಿದ ತುಳು ಲಿಪಿ ಪಟ್ಟಿಯನ್ನು ಅಕಾಡೆಮಿಯು ಅಂಗೀಕರಿಸಿ ಯುನಿಕೋಡ್‌ ನಕಾಶೆಗೆ ಸೇರಿಸಲು ಅನುಮೋದನೆ ನೀಡಲಾಗಿದೆ ಎಂದು ಅವರು ತಿಳಿಸಿದರು.
ಈ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ತುಳು ಲಿಪಿ ಪಟ್ಟಿಯನ್ನು ಪರಾಮರ್ಶಿಸಿ ಅನುಮೋದಿಸಲು ಮೈಸೂರಿನಲ್ಲಿರುವ ಕೇಂದ್ರ ಸರ್ಕಾರದ ಭಾರತೀಯ ಭಾಷಾ ಸಂಸ್ಥಾನಕ್ಕೆ ಕರ್ನಾಟಕ ಸರ್ಕಾರದಿಂದ ಕೋರಲಾಗಿತ್ತು.
ಭಾಭಾ ಸಂಸ್ಥಾನವು ಇದಕ್ಕಾಗಿ ಭಾಷಾ ತಜ್ಞರ ಸಮಿತಿಯನ್ನು ರಚಿಸಿ, ಚರ್ಚಿಸಿ ಲಿಪಿ ಪಟ್ಟಿಯನ್ನು ಅನುಮೋದಿಸಿ, ಯುನಿಕೋಡ್‌ ಕನ್ಸಾರ್ಶಿಯಂಗೆ ಸಲ್ಲಿಸಲು ಶಿಫಾರಸು ಮಾಡಿತು. ಅದರಂತೆ ಈಗ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ತುಳು ಅಕಾಡೆಮಿಗೆ ಪತ್ರ ಬರೆಯಲಾಗಿದೆ ಎಂದು ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.
ಅಲ್ಲದೇ ಯುನಿಕೋಡ್‌ ನಕಾಶೆಗೆ ಸೇರಿಸಲು ಅಗತ್ಯವಿರುವ ಇನ್ನಿತರೆ ತಾಂತ್ರಿಕ ಅಂಶಗಳ ಬಗ್ಗೆಯೂ ಗಮನ ಕೊಡುವಂತೆ ತಿಳಿಸಲಾಗಿದೆ ಎಂದು ಅವರು ತಿಳಿಸಿದರು.
ಇನ್ನು ತುಳು ಲಿಪಿಯನ್ನು ಯುನಿಕೋಡ್‌ ನಕಾಶೆಗೆ ತಕ್ಕಂತೆ ರೂಪಿಸುವಲ್ಲಿ ಶ್ರಮವಹಿಸಿದ ಎಲ್ಲ ತಜ್ಞರಿಗೂ ಸಚಿವ ಅರವಿಂದ ಲಿಂಬಾವಳಿ ಅಭಿನಂದನೆ ಸಲ್ಲಿಸಿದ್ದಾರೆ.
ಡಿಜಿಟಲ್‌ ವೇದಿಕೆಗಳಲ್ಲಿ, ಮುದ್ರಿತ ಸಾಹಿತ್ಯದಲ್ಲಿ, ಪ್ರಚಾರ ಸಾಹಿತ್ಯದಲ್ಲಿ – ಹೀಗೆ ತುಳು ಲಿಪಿಯು ಹೆಚ್ಚು ಹೆಚ್ಚು ಬಳಕೆಗೆ ಬಂದರೆ ಲಿಪಿಯನ್ನು ರೂಪಿಸಿದ್ದಕ್ಕೆ ನ್ಯಾಯ ಒದಗಿಸಿದಂತಾಗುತ್ತದೆ ಎಂದಿರುವ ಅವರು
ಕರ್ನಾಟಕದ ಇತಿಹಾಸದಲ್ಲಿ ಒಂಬತ್ತು ಶತಮಾನಗಳ ಅತಿದೀರ್ಘವಾದ ಆಡಳಿತವನ್ನು ನಡೆಸಿದ ಖ್ಯಾತಿಯನ್ನು ಹೊಂದಿದ ತುಳು ಸಂಸ್ಕೃತಿಯ ಪ್ರತೀಕವಾದ ತುಳು ಲಿಪಿಯು ಯುನಿಕೋಡ್‌ಗೆ ಸೇರುತ್ತಿರುವುದಕ್ಕೆ ಲಕ್ಷಾಂತರ ತುಳು ಭಾಷಿಗರು ತೋರಿದ ಸಂಭ್ರಮದಲ್ಲಿ ಭಾಗಿಯಾಗಲು ನನಗೂ ಹರ್ಷವಾಗುತ್ತಿದೆ ಎಂದು ತಮ್ಮ ಸಂತಸವನ್ನು ಹಂಚಿಕೊಂಡಿದ್ದಾರೆ.
ಕನ್ನಡ ನಾಡಿನ ಉಳಿದೆಲ್ಲ ಭಾಷೆಗಳಂತೆಯೇ ತುಳು ಭಾಷೆ, ಸಂಸ್ಕೃತಿಯ ಉಳಿವು, ಬೆಳವಣಿಗೆಗಾಗಿ ನಮ್ಮ ಸರ್ಕಾರದ ಪ್ರಯತ್ನವು ನಿರಂತರವಾಗಿ ನಡೆಯುತ್ತದೆ ಎಂದು ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
Tulunadu News May 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!

  • Privacy Policy
  • Contact
© Tulunadu Infomedia.

Press enter/return to begin your search