• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » ಸುದ್ದಿ 

ಬೆಂಗಳೂರು – ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂ ಕುಸಿತ

Tulunadu News Posted On July 22, 2021
0


0
Shares
  • Share On Facebook
  • Tweet It

ಬೆಂಗಳೂರು – ಮಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಭೂ ಕುಸಿತ ಉಂಟಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಲ್‌ ಎಂಬಲ್ಲಿ ನಡೆದ ಭೂ ಕುಸಿತಕ್ಕೆ ರಸ್ತೆಯೇ ಕುಸಿದಿದ್ದು, ವಾಹನ ಸಂಚಾರ ವ್ಯತ್ಯಯವಾಗಿದೆ.ಕಳೆದೊಂದು ವಾರದಿಂದಲೂ ಸಕಲೇಶಪುರ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ ಭೂ ಕುಸಿತ ಉಂಟಾಗುತ್ತಿದ್ದು, ಇದೀಗ ರಾಷ್ಟ್ರೀಯ ಹೆದ್ದಾರಿ ಕುಸಿತವಾಗಿದೆ. ಅರ್ಧ ದಷ್ಟು ರಸ್ತೆ ಕುಸಿದಿದ್ದು, ಉಳಿದಿರುವ ರಸ್ತೆಯೂ ಕುಸಿಯುವ ಭೀತಿಯಲ್ಲಿದೆ. ಭೂ ಕುಸಿತದ ಹಿನ್ನೆಲೆಯಲ್ಲಿ ಬೆಂಗಳೂರು, ಮಂಗಳೂರು, ಹಾಸನ, ಉಡುಪಿ ಜಿಲ್ಲೆಗಳಿಗೆ ಸಂಚರಿಸುವ ವಾಹನ ಸವಾರರಿಗೆ ತೊಡಕಾಗಿದೆ. ರಸ್ತೆ ಕುಸಿದ ಹಿನ್ನೆಲೆಯಲ್ಲಿ ವಾಹನಗಳು ರಸ್ತೆಯ ಇಕ್ಕೆಲಗಳಲ್ಲಿ ಸರತಿ ಸಾಲಿನಲ್ಲಿ ನಿಂತಿವೆ.ಉಳಿದ ಹೆದ್ದಾರಿ ರಸ್ತೆಯೂ ಕುಸಿಯುವ ಆತಂಕ ಎದುರಾಗಿದ್ದು, ಬದಲಿ ಮಾರ್ಗದಲ್ಲಿ ಸಂಚಾರ ಮಾಡುವಂತೆ ಅಧಿಕಾರಿಗಳು ಮನವಿ ಮಾಡುತ್ತಿದ್ದಾರೆ. ಭಾರೀ ಮಳೆಯ ಹಿನ್ನೆಲೆ ಯಲ್ಲಿ ರಸ್ತೆಯ ಕಾಮಗಾರಿಯನ್ನು ಮಾಡುವುದಕ್ಕೂ ಕೂಡ ತಡೆಯಾಗುತ್ತಿದ್ದು, ಸ್ಥಳದಲ್ಲಿ ಪೊಲೀಸರು ಹಾಗೂ ಸ್ಥಳೀಯ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ.

0
Shares
  • Share On Facebook
  • Tweet It




Trending Now
ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
Tulunadu News February 18, 2026
ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
Tulunadu News February 12, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!
    • 'ವಂದೇ ಮಾತರಂ' ಅವಮಾನ ಮಾಡಿದವರಿಗೆ ಕಾದಿದೆ 3 ವರ್ಷಗಳ ಜೈಲು! ಕೇಂದ್ರ ಸರಕಾರದ ನೂತನ ನಿಯಮಾವಳಿ ಬಿಡುಗಡೆ
    • ಪುತ್ತೂರಿನ ಹಿಂದೂ ಸಂಘಟನೆ ಮುಖಂಡ ಅಜಿತ್ ರೈ ಹೊಸಮನೆ ಗಡಿಪಾರು ವಿಚಾರಣೆಗೆ ಹಾಜರಾಗುವಂತೆ ನೋಟೀಸ್
    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
  • Popular Posts

    • 1
      ಮೀಟರ್ ರೀಡಿಂಗಾಗಿ ಬಂದ ನೌಕರರ ಮೇಲೆ ಸಾಕು ನಾಯಿ ದಾಳಿ!
    • 2
      ಕ್ರಿಮಿನಾಲಜಿ ಕಲಿತವಳು ಕ್ರಿಮಿಯ ಬಯೋಲಜಿಗೆ ಮರಳಾದದ್ದೇ ಆಶ್ಚರ್ಯ!
    • 3
      ಹಲವಾರು ಯುವತಿಯರ ಗಂಡ ಮಂಗಳೂರಿನ ಸುಶಾಂತ್ ಪೂಜಾರಿ ಅಂದರ್!

  • Privacy Policy
  • Contact
© Tulunadu Infomedia.

Press enter/return to begin your search