ಮಂಗಳೂರು: ರೌಡಿಶೀಟರ್‌ನಿಂದ ಬಾಲಕಿಗೆ ಲೈಂಗಿಕ ದೌರ್ಜನ್ಯ- ಆರೋಪಿ ತಂದೆ ಸೆರೆ
Posted On December 1, 2021
ಮಂಗಳೂರು: ಒಂದನೇ ತರಗತಿಯ ಬಾಲಕಿ ಮೇಲೆ ರೌಡಿಶೀಟರ್ ತಂದೆಯೇ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
ಬಂಧಿತ ಕದ್ರಿಹಿಲ್ ನ ಪದವು ಶಾಲೆಯ ಬಳಿಯ ರೋಹನ್ ರಾಚ್. ಈತನ ಮೇಲೆ ಕದ್ರಿ ಪೊಲೀಸ್ ಠಾಣೆಯಲ್ಲಿ ಈ ಹಿಂದೆಯೇ ರೌಡಿಶೀಟರ್ ತೆರೆಯಲಾಗಿತ್ತು. ಇದೀಗ ಈತ ಮಗಳಿಗೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈತನ ದೌರ್ಜನ್ಯ ತಡೆಯಲು ಬಂದ ಪತ್ನಿಯ ಮೇಲೂ ಈತ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
ಈತ ಜೊಮ್ಯಾಟೋದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದು, ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -
Trending Now
ಕೆಆರ್ ಎಸ್ ರಸ್ತೆಗೆ ಸಿದ್ಧರಾಮಯ್ಯ ಹೆಸರು ಇಡಲು ಚಿಂತನೆ, ಪರ -ವಿರೋಧ!
December 25, 2024
ರಾಜ್ಯದಲ್ಲಿ ಪ್ರಪ್ರಥಮ ಮೂಳೆ ದಾನ!
December 25, 2024
Leave A Reply