ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರವಾನಿಗೆ ಇಲ್ಲದ ನಾಡಕೋವಿಯನ್ನು ತಂದಿದ್ದ ವ್ಯಕ್ತಿ ಅರೆಸ್ಟ್!
Posted On December 2, 2021
![](https://tulunadunews.com/wp-content/uploads/2021/12/naada-kovi-tnn.jpg)
ಇಲ್ಲಿನ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪರವಾನಿಗೆ ಇಲ್ಲದ ನಾಡಕೋವಿಯನ್ನು ತಂದಿದ್ದ ವ್ಯಕ್ತಿಯನ್ನು ಬಜಪೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಬಂಧಿತ ವ್ಯಕ್ತಿಯನ್ನು ಬ್ರಹ್ಮಾವರ ಹಾವಂಜೆಯ ರೊನಾಲ್ಡ್ ಡಿ ಸೋಜಾ (24) ಎಂದು ಗುರುತಿಸಲಾಗಿದೆ.ಇವರು ಮಂಗಳವಾರದಂದು ಸಂಜೆ ಏರ್ ಇಂಡಿಯಾ ವಿಮಾನದಲ್ಲಿ ಕುವೈತ್ ನಿಂದ ಬರುತ್ತಿರುವ ತನ್ನ ಸಂಬಂಧಿಕರೋರ್ವರನ್ನು ಕರೆದುಕೊಂಡು ಬರಲೆಂದು ಮಂಗಳೂರಿನ ಏರ್ ಪೋರ್ಟ್ ಗೆ ಬಂದಿದ್ದು, ಪಾರ್ಕಿಂಗ್ ಪ್ರದೇಶದಲ್ಲಿ ಕಾರನ್ನು ನಿಲ್ಲಿಸಿದ್ದು, ಈ ವೇಳೆ ವಿಮಾನ ನಿಲ್ದಾಣದ ಸಿಐಎಸ್‌ಎಫ್ ಸಿಬ್ಬಂದಿ ಪರಿಶೀಲನೆ ನಡೆಸಿದಾಗ ಕಾರಿನಲ್ಲಿ ಪರವಾನಿಗೆ ಇಲ್ಲದ ಎರಡು ನಾಡಕೋವಿಗಳು ಪತ್ತೆಯಾಗಿದೆ. ಈ ಬಗ್ಗೆ ಬಜ್ಪೆ ಪೊಲೀಸರು ಪ್ರಕರಣ ದಾಖಲಿಸಿ, ವ್ಯಕ್ತಿಯನ್ನು ಬಂಧಿಸಿ ನ್ಯಾಯಾಂಗ ಬಂಧನ ವಿಧಿಸಿದೆ
- Advertisement -
Trending Now
ರಾಜ್ಯ ಸರಕಾರ 350 ಕೋಟಿ ಬಾಕಿ ಹಿನ್ನಲೆ; ದಯಾಮರಣ ನೀಡಲು ಮನವಿ!
January 14, 2025
Leave A Reply