• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured

ತನಿಖೆ ತಿರುಚಲು ಶೌಚಾಲಯದಲ್ಲಿ ಇಟ್ಟ ಮೊಬೈಲ್ ಗಳ ಅದಲು ಬದಲು: ಜನರ ಸಂಶಯ ನಿವಾರಿಸಿ : ಡಾ.ಭರತ್ ಶೆಟ್ಟಿ ವೈ

Tulunadu News Posted On July 25, 2023
0


0
Shares
  • Share On Facebook
  • Tweet It

ಸತ್ಯಾಸತ್ಯತೆ ಬಯಲು ಮಾಡುವ ಬದಲು
ಟ್ವೀಟ್ ಮಾಡಿದವರ ಮನೆಯ ಮೇಲೆ ಪೊಲೀಸ್ ದಾಳಿ ಖಂಡನಿಯ
ಡಾ. ಭರತ್ ಶೆಟ್ಟಿ ವೈ

ಸುರತ್ಕಲ್: –
ಶೌಚಾಲಯದಲ್ಲಿ ಮೊಬೈಲ್ ಇಟ್ಟವರನ್ನು ಪತ್ತೆ ಮಾಡುವುದನ್ನು ಬಿಟ್ಟು ಪೊಲೀಸ್ ಇಲಾಖೆ ಟ್ವೀಟ್ ಮಾಡಿದ ಬಡಪಾಯಿಯ ಮನೆಯ ಮೇಲೆ ತನಿಖೆಯ ನೆಪದಲ್ಲಿ ದಾಳಿ ಮಾಡಿರುವುದು ಅತಿರೇಕದ ವರ್ತನೆಯಾಗಿದೆ . ಕಾಂಗ್ರೆಸ್ ಸರ್ಕಾರ ಹಿಂದೂ ಸಮುದಾಯದ ಮೇಲೆ ದಾಳಿ ನಡೆಸಲು ರಾಜ್ಯದ ಪೊಲೀಸ್ ಪಡೆಯನ್ನ ಬಳಸಲು ಸಜ್ಜಾಗಿರುವಂತಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ.ಟೀಕಾ ಪ್ರಹಾರ ನಡೆಸಿದ್ದಾರೆ.

ಉಡುಪಿಯ ಕಾಲೇಜು ಒಂದರ ಶೌಚಾಲಯದಲ್ಲಿ ಗುಪ್ತವಾಗಿ ಮೊಬೈಲ್ ಕ್ಯಾಮೆರಾ ಇಟ್ಟು
ಚಿತ್ರೀಕರಣ ಮಾಡಲಾಗಿತ್ತು. ಎಂಬ ಬಗ್ಗೆ ಭಾರಿ ಚರ್ಚೆ ನಡೆಯುತ್ತಿರುವಂತೆ, ಇದೀಗ ಪ್ರಕರಣ ತಿರುಚಲು ಹಾಗೂ ಏನೂ ಆಗಿಲ್ಲವೆಂಬತೆ ಮಾಡಲು ಮೊಬೈಲ್ ಅದಲು ಬದಲು ಮಾಡಲಾಗಿದೆ ಎಂಬ ಸಂಶಯ ಜನರಲ್ಲಿ ಉಂಟಾಗಿದೆ .ಮೊದಲು ಇದಕ್ಕೆ ಉತ್ತರ ನೀಡಿ.
ಉಡುಪಿ ಪೊಲೀಸರು ಘಟನೆ ನಡೆದಿರುವುದಕ್ಕೆ ಸಾಕ್ಷ್ಯ ಇಲ್ಲ ಎಂದು ಹೇಳುತ್ತಿದ್ದಾರೆ.ಹಾಗಾದರೆ ದಿಢೀರ್ ಆಗಿ ವಿದ್ಯಾರ್ಥಿನಿಯರನ್ನು ವಜಾ ಗೊಳಿಸಲು ಕಾರಣ ಏನು, ಬೆಂಕಿಯಿಲ್ಲದೆ ಹೊಗೆಯಾಡಲು ಸಾಧ್ಯವಿಲ್ಲ.ಕೇರಳ ಮೂಲದ ವಿದ್ಯಾರ್ಥಿಗಳಾಗಿರುವುದರಿಂದ ಲವ್ ಜಿಹಾದ್ ಸಹಿತ,ವಿವಿಧ ವಿದ್ವಂಸಕ ಕೃತ್ಯ ಎಸಗಲು
ಇದೊಂದು ಬ್ಲ್ಯಾಕ್ ಮೈಲ್ ಷಡ್ಯಂತ್ರವಾಗಿರುವ ಸಾಧ್ಯತೆಯಿದೆ.

ಈ ಪ್ರಕರಣ ಕುರಿತಂತೆ ರಾಜ್ಯ ಸರ್ಕಾರ ತಕ್ಷಣ ಎಸ್ ಐ ಟಿ ತನಿಖೆಗೆ ಆದೇಶಿಸಿ ಎಂದು ಒತ್ತಾಯಿಸಿದ್ದಾರೆ.

ಪ್ರಕರಣವನ್ನು ಸರಕಾರ ಗಂಭೀರವಾಗಿ ತೆಗೆದುಕೊಳ್ಳುವ ಬದಲು ಉಡಾಫೆಯಾಗಿ ವರ್ತಿಸಿ ಮುಂದೊಂದು ದಿನ ಕಂಟಕಪ್ರಾಯವಾಗಬಹುದು.
ಇದರ ಹಿಂದೆ ನಿಷೇಧಿತ ಸಂಘಟನೆ ಪಿ ಎಫ್ ಐ ಕೈವಾಡ ಇದ್ದರೆ ತನಿಖೆ ನಡೆಸಿ, ಹಿಂದೂ ಸಮುದಾಯದ ಯುವತಿಯರು ಬಲಿಪಶುವಾಗದಂತೆ ರಕ್ಷಣೆಯನ್ನು ನೀಡುವ ಕೆಲಸ ಮೊದಲು ಮಾಡಬೇಕಿದೆ ಎಂದು ಒತ್ತಾಯಿಸಿದ್ದಾರೆ.

ಟ್ವೀಟ್ ಮಾಡಿ ಸರಕಾರ,ತನಿಖಾ ಇಲಾಖೆ ಹಾಗೂ ಸಾರ್ವಜನಿಕ ರನ್ನು ಎಚ್ಚರಿಸುವ ಕೆಲಸ ಮಾಡಿದ ಮಾತ್ರಕ್ಕೆ, ರಾತ್ರಿ ಸಮಯದಲ್ಲಿ ಯುವತಿಯ ಮನೆಗೆ ತೆರಳಿ ತನಿಖೆಯ ನೆಪದಲ್ಲಿ ಕಿರುಕುಳ ನೀಡಿರುವುದು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಾಗದು.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೂಡಲೇ,
ಭಾರತೀಯ ಜನತಾ ಪಕ್ಷಯ ಭದ್ರ ಕೋಟೆಯಾಗಿರುವ ಕರಾವಳಿ ಭಾಗವನ್ನು ಗುರಿಯಾಗಿಸಿ ಇರಿಸಿಕೊಂಡು
ಹಿಂದೂ ಕಾರ್ಯಕರ್ತರ ಗಡಿಪಾರು,
ಸುಳ್ಳು ಕೇಸುಗಳನ್ನು ದಾಖಲಿಸಲು ಪೂರ್ವ ತಯಾರಿ ನಡೆಸಿದೆ.
ಇದರ ಮುಂದುವರಿದ ಭಾಗವಾಗಿ ಟ್ವೀಟ್ ಮಾಡಿದ ರಶ್ಮಿ ಸಮಂತ ಅವರನ್ನು ಕೂಡ ತನಿಖೆ ನೆಪದಲ್ಲಿ ಪ್ರಕರಣ ದಾಖಲಿಸಿ, ಇಡೀ ಪ್ರಕರಣವನ್ನು ತೀರಿಸಲು ಮುಂದಾಗಿರುವಂತಿದೆ.
ಜಿಲ್ಲೆಯಲ್ಲಿ ಹಾಗೂ ಕರಾವಳಿಯಲ್ಲಿ ಸಂಘರ್ಷಮಯ ವಾತಾವರಣಕ್ಕೆ ಸರಕಾರ ಎಡೆ ಮಾಡಿಕೊಡಬಾರದು. ದ್ವೇಷ ರಾಜಕಾರಣದಿಂದ ಕಾನೂನು ಹದೆಗೆಟ್ಟಲ್ಲಿ ರಾಜ್ಯದ ಆಡಳಿತ ರೂಢ ಕಾಂಗ್ರೆಸ್ ಸರ್ಕಾರವೇ ಜವಾಬ್ದಾರಿಯಾಗಲಿದೆ
ಎಂದು ಡಾಕ್ಟರ್ ಭರತ್ ಶೆಟ್ಟಿ ವೈ ಎಚ್ಚರಿಸಿದ್ದಾರೆ.

0
Shares
  • Share On Facebook
  • Tweet It




Trending Now
ಯೋಗಿ ದೇಶದ ನಂ 1 ಸಿಎಂ - ಇಂಡಿಯಾ ಟುಡೇ ಸಮೀಕ್ಷೆ
Tulunadu News August 30, 2025
ಬೀದಿನಾಯಿಗಳಿಗೆ ಇನ್ನು ವಿಧಾನಸೌಧದಲ್ಲೇ ವಸತಿ ಕಲ್ಪಿಸಲು ಯೋಜನೆ!
Tulunadu News August 30, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಯೋಗಿ ದೇಶದ ನಂ 1 ಸಿಎಂ - ಇಂಡಿಯಾ ಟುಡೇ ಸಮೀಕ್ಷೆ
    • ಬೀದಿನಾಯಿಗಳಿಗೆ ಇನ್ನು ವಿಧಾನಸೌಧದಲ್ಲೇ ವಸತಿ ಕಲ್ಪಿಸಲು ಯೋಜನೆ!
    • ಹುಬ್ಬಳ್ಳಿಯ ಈದ್ಗಾ ಮೈದಾನವನ್ನು ರಾಣಿ ಚೆನ್ನಮ್ಮ ಮೈದಾನ ಎಂದು ಪಾಲಿಕೆ ಅಧಿಕೃತ ಘೋಷಣೆ!
    • ಅನುಶ್ರೀ - ರೋಷನ್ ದಾಂಪತ್ಯ ಜೀವನಕ್ಕೆ ನಿಮ್ಮದೂ ಶುಭ ಹಾರೈಕೆ ಇರಲಿ!
    • ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..
    • ತಿಮರೋಡಿ ಮನೆಯಲ್ಲಿತ್ತು ಮಾಸ್ಕ್ ಮ್ಯಾನ್ ಮೊಬೈಲ್, ತಂಗುತ್ತಿದ್ದ ಕೋಣೆಯ ಸಿಸಿಟಿವಿ ಫೂಟೇಜ್ ವಶಕ್ಕೆ!
    • ಧರ್ಮ ಜಾಗೃತಿ ಯಾತ್ರೆ:  ದೇವರ ಅನುಗ್ರಹದಿಂದ ಸತ್ಯದ ಅನಾವರಣ - ಡಾ. ಹೆಗ್ಗಡೆ 
    • ರಾಜ್ಯ ಬೊಕ್ಕಸ ಖಾಲಿ, ಗ್ಯಾರಂಟಿಗೂ ದುಡ್ಡಿಲ್ಲ - ಸಿಎಂ ರೇವಂತ್ ರೆಡ್ಡಿ
    • ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡುವ ಬಗ್ಗೆ ಪರ - ವಿರೋಧ ಚರ್ಚೆ!
    • ತಿಮರೋಡಿ ಮನೆ ಮೇಲೆ ಬೆಳ್ಳಂಬೆಳಗ್ಗೆ SIT ದಾಳಿ.. ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಆಶ್ರಯ ನೀಡಿದ ಆರೋಪ!
  • Popular Posts

    • 1
      ಯೋಗಿ ದೇಶದ ನಂ 1 ಸಿಎಂ - ಇಂಡಿಯಾ ಟುಡೇ ಸಮೀಕ್ಷೆ
    • 2
      ಬೀದಿನಾಯಿಗಳಿಗೆ ಇನ್ನು ವಿಧಾನಸೌಧದಲ್ಲೇ ವಸತಿ ಕಲ್ಪಿಸಲು ಯೋಜನೆ!
    • 3
      ಹುಬ್ಬಳ್ಳಿಯ ಈದ್ಗಾ ಮೈದಾನವನ್ನು ರಾಣಿ ಚೆನ್ನಮ್ಮ ಮೈದಾನ ಎಂದು ಪಾಲಿಕೆ ಅಧಿಕೃತ ಘೋಷಣೆ!
    • 4
      ಅನುಶ್ರೀ - ರೋಷನ್ ದಾಂಪತ್ಯ ಜೀವನಕ್ಕೆ ನಿಮ್ಮದೂ ಶುಭ ಹಾರೈಕೆ ಇರಲಿ!
    • 5
      ಬಸ್ ನಲ್ಲಿ 200 ಕೆಜಿ ಸ್ಫೋಟಕ ಪತ್ತೆ! ತಪ್ಪಿದ ದೊಡ್ಡ ಸಂಚು..

  • Privacy Policy
  • Contact
© Tulunadu Infomedia.

Press enter/return to begin your search