• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರಿನಲ್ಲಿ ಇಬ್ಬರಿಗೆ ನ್ಯಾಯಾಂಗ ಬಂಧನ

Tulunadu News Posted On August 8, 2023
0


0
Shares
  • Share On Facebook
  • Tweet It

ಮಂಗಳೂರು ನಗರದ ರಥಬೀದಿಯ ಅಂಗಡಿಗಳಿಂದ ವಶಪಡಿಸಿಕೊಳ್ಳಲಾಗಿದ್ದ ಚಾಕೋಲೆಟ್ ನಲ್ಲಿ ಗಾಂಜಾ ಅಂಶ ಪತ್ತೆಯಾಗಿರುವುದಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.

ರಥಬೀದಿಯ ಅಂಗಡಿಗೆ ದಾಳಿ ನಡೆಸಿದ್ದ ಬಂದರು ಪೊಲೀಸರು ತಲಾ 40 ಚಾಕೋಲೆಟ್ ನ 300 ಪ್ಯಾಕೆಟ್‌ಗಳನ್ನು ಮತ್ತು 592 ಬಿಡಿ ಚಾಕೋಲೆಟ್ ಗಳನ್ನು ವಶಪಡಿಸಿಕೊಂಡಿದ್ದರು. ಅಂಗಡಿಯ ಮಾಲಕ ಮನೋಹರ ಶೇಟ್ ವಿರುದ್ಧ ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅದೇ ದಿನ ಪಾಂಡೇಶ್ವರ ಪೊಲೀಸರು ಗೂಡಂಗಡಿಗೆ ದಾಳಿ ನಡೆಸಿ 5,500 ರೂ. ಅಂದಾಜು ಮೌಲ್ಯದ ಚಾಕೋಲೆಟ್ ವಶಪಡಿಸಿಕೊಂಡು ಉತ್ತರ ಪ್ರದೇಶ ಮೂಲದ ಬೆಚನ್ ಸೋನ್ಕರ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು. ಪೊಲೀಸರು ಈ ಚಾಕೋಲೆಟ್ ಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಇದೀಗ ಅಲ್ಲಿಂದ ಬಂದ ವರದಿಯಲ್ಲಿ ಈ ಚಾಕೋಲೆಟ್ ನಲ್ಲಿ ಮಾದಕ ದ್ರವ್ಯ ಗಾಂಜಾದ ಅಂಶ ಇರುವುದಾಗಿ ತಿಳಿಸಲಾಗಿದೆ. ಅದರಂತೆ ಇಬ್ಬರು ಆರೋಪಿಗಳ ವಿರುದ್ಧ ಕ್ರಮ ಜರುಗಿಸಲಾಗಿದೆ.
ಆರೋಪಿಗಳಿಗೆ ನ್ಯಾಯಾಂಗ ಬಂಧನವಾಗಿದೆ ಎಂದು ತಿಳಿಸಿದ್ದಾರೆ.

0
Shares
  • Share On Facebook
  • Tweet It




Trending Now
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
Tulunadu News April 7, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
  • Popular Posts

    • 1
      ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!

  • Privacy Policy
  • Contact
© Tulunadu Infomedia.

Press enter/return to begin your search