• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಸಿಎಂ ಭೇಟಿಯಾದ ಬಿಜೆಪಿಯ ಇನ್ನೊಬ್ಬ ಶಾಸಕ!

Tulunadu News Posted On August 26, 2023
0


0
Shares
  • Share On Facebook
  • Tweet It

ಇತ್ತೀಚೆಗೆ ಭಾರತೀಯ ಜನತಾ ಪಾರ್ಟಿಯ ಒಬ್ಬೊಬ್ಬರೇ ಮುಖಂಡರು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗುತ್ತಿದ್ದಾರೆ. ಮೊದಲಿಗೆ ಎಸ್ ಟಿ ಸೋಮಶೇಖರ್ ಅವರು ಭೇಟಿಯಾಗಿ ಮಾತುಕತೆ ನಡೆಸಿದ್ದರು. ಮಾಧ್ಯಮಗಳು ಕೇಳಿದ್ದಕ್ಕೆ ಕ್ಷೇತ್ರದ ಪ್ರಗತಿಗಾಗಿ ಭೇಟಿಯಾಗಿದ್ದೆ ಎಂದು ಹೇಳಿದ್ದರು. ಅದಾಗಿ ಕೆಲವೇ ಗಂಟೆಗಳಲ್ಲಿ ಸೋಮಶೇಖರ್ ಪ್ರತಿನಿಧಿಸುವ ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೆ ಕೋಟ್ಯಾಂತರ ರೂಪಾಯಿ ಅನುದಾನವನ್ನು ಸಿಎಂ ಬಿಡುಗಡೆಗೊಳಿಸಿದರು.

 

ತಾವು ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ ಎಂದು ಸೋಮಶೇಖರ್ ಅವರು ಹೇಳುತ್ತಲೇ ಬರುತ್ತಿದ್ದರಾದರೂ ಅವರನ್ನು ಲೋಕಸಭೆಗೆ ಮತ್ತು ಅವರ ಮಗನನ್ನು ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಕಣಕ್ಕೆ ಇಳಿಸುವ ಮಾತುಕತೆ ನಡೆದಿದೆ ಎನ್ನುವ ಮಾಹಿತಿ ಹರಿದಾಡುತ್ತಿದೆ. ಆ ವಿಷಯ ಚರ್ಚೆಯಲ್ಲಿ ಇರುವಂತೆ ಮಾಜಿ ಶಾಸಕ, ಬಿ.ಎಸ್ ವೈ ಆಪ್ತ ಮತ್ತು ಅವರ ರಾಜಕೀಯ ಕಾರ್ಯದರ್ಶಿಯೂ ಆಗಿದ್ದ ಎಂಪಿ ರೇಣುಕಾಚಾರ್ಯ ಅವರು ಸಿಎಂ ಹಾಗೂ ಡಿಸಿಎಂ ಅವರನ್ನು ಭೇಟಿಯಾಗಿದ್ದಾರೆ. ಇತ್ತೀಚೆಗೆ ತಮ್ಮ ಕಠಿಣ ಮಾತುಗಳಿಂದ ಬಿಜೆಪಿಯನ್ನು ಅವರು ಟೀಕಿಸುತ್ತಾ ಬರುತ್ತಿದ್ದರು. ಹಾಗೆ ಬಹಿರಂಗವಾಗಿ ಅಸಮಾಧಾನ ಹೊರ ಹಾಕುತ್ತಿರುವುದು ಸರಿಯಲ್ಲ ಎಂದು ಬಿಜೆಪಿ ಮುಖಂಡರು ಹೇಳಿದರೂ ಅವರು ಸೊಪ್ಪು ಹಾಕಿರಲಿಲ್ಲ. ಸಭೆಗೆ ಕರೆದಾಗಲೂ ಗೈರು ಹಾಜರಾಗಿ ತಮ್ಮ ಕೋಪವನ್ನು ಪ್ರದರ್ಶಿಸಿದ್ದರು. ಅದರ ನಂತರ ಅವರು ಬಿಜೆಪಿಯಿಂದ ಒಂದು ಕಾಲು ಹೊರಗೆ ಇಟ್ಟಿದ್ದಾರೆ ಎಂದೇ ವಿಶ್ಲೇಷಿಸಲಾಗಿತ್ತು.

 

ಈಗ ಇದೆಲ್ಲವೂ ನಡೆಯುತ್ತಿರುವಾಗಲೇ ಬಿಜೆಪಿಯ ಮತ್ತೊಬ್ಬ ಶಾಸಕ, ಮಾಜಿ ಸಚಿವ ಶಿವರಾಮ್ ಹೆಬ್ಬಾರ್ ಅವರು ಸಿಎಂ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ತಾವು ತಮ್ಮ ಕ್ಷೇತ್ರ ಯಲ್ಲಾಪುರವನ್ನು ಬರಗಾಲ ಪೀಡಿತ ಪ್ರದೇಶವೆಂದು ಘೋಷಣೆ ಮಾಡಲು ಕೋರಲು ಹೋಗಿರುವುದಾಗಿ ಮಾಧ್ಯಮಗಳಿಗೆ ಪತ್ರವನ್ನು ಬಿಡುಗಡೆ ಮಾಡಿದ್ದಾರೆ. ಹೀಗೆ ಒಬ್ಬೊಬ್ಬರೇ ಬಿಜೆಪಿ ಶಾಸಕರು, ಮಾಜಿ ಶಾಸಕರು ಸಿದ್ಧರಾಮಯ್ಯನವರನ್ನು ಏನಾದರೊಂದು ನೆಪ ಇಟ್ಟುಕೊಂಡು ಭೇಟಿ ಮಾಡುತ್ತಿದ್ದಾರೆ. ಕೇಳಿದರೆ ರಾಜಕೀಯ ಮಾತನಾಡಲೇ ಇಲ್ಲ ಎನ್ನುತ್ತಿದ್ದಾರೆ.

0
Shares
  • Share On Facebook
  • Tweet It




Trending Now
‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
Tulunadu News February 9, 2026
ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
Tulunadu News February 4, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!
    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
  • Popular Posts

    • 1
      ‘ನಾನು ಆ ಸಮಿತಿಯಲ್ಲಿ ಇಲ್ಲ’ – ಸಾವರ್ಕರ್‌ಗೆ ಭಾರತ ರತ್ನ ವಿಳಂಬ ಕುರಿತು ಮೋಹನ್ ಭಾಗವತ್
    • 2
      ವೈಯಕ್ತಿಕ ಕಾರಣದಿಂದ ಪಕ್ಷ ನೀಡಿದ ಹೊಣೆಗಾರಿಕೆಯಿಂದ ಹಿಂದೆ ಸರಿದ ಅಣ್ಣಾಮಲೈ!

  • Privacy Policy
  • Contact
© Tulunadu Infomedia.

Press enter/return to begin your search