• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಪೆನ್ ಡ್ರೈವ್ ಹೊರಗೆ ಬರಲು ಕಾರಣನಾದ ಡ್ರೈವರ್ ಹೇಳಿದ್ದೇನು?

Tulunadu News Posted On April 30, 2024
0


0
Shares
  • Share On Facebook
  • Tweet It

ಪ್ರಜ್ವಲ್ ರೇವಣ್ಣ ಅವರಿಗೆ ಹದಿನೈದು ವರ್ಷಗಳಿಂದ ಕಾರು ಚಾಲಕನಾಗಿದ್ದ ಕಾರ್ತಿಕ್ ಎನ್ನುವ ವ್ಯಕ್ತಿ ಅಜ್ಞಾತ ಸ್ಥಳದಿಂದ ಒಂದು ವಿಡಿಯೋ ಮಾಡಿ ಅದನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಅವರು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮೊಗ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಬಗ್ಗೆ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಆರೋಪದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇವರ ಹೇಳಿಕೆ ಆ ವಿಡಿಯೋ ಬಗ್ಗೆ ಇನ್ನಷ್ಟು ಕುತೂಹಲವನ್ನು ಹೆಚ್ಚು ಮಾಡಿದೆ.
ಆ ವಿಡಿಯೋದಲ್ಲಿ ಕಾಂಗ್ರೆಸ್ಸಿನವರಿಗೆ ತಾನು ವಿಡಿಯೋ ಕೊಟ್ಟಿಲ್ಲ ಎಂದು ಅವರು ಹೇಳಿದ್ದಾರೆ. ಕಾಂಗ್ರೆಸ್ ಅವರ ಮೇಲೆ ನಂಬಿಕೆ ಇಲ್ಲದೆ ದೇವರಾಜೇಗೌಡರ ಹತ್ತಿರ ಕೊಟ್ಟಿದೆ. ನಾನು 15 ವರ್ಷಗಳಿಂದ ಪ್ರಜ್ವಲ್ ರೇವಣ್ಣ ಹಾಗೂ ಅವರ ಕುಟುಂಬಕ್ಕೆ ಕಾರು ಚಾಲಕನಾಗಿ ಕೆಲಸ ಮಾಡಿದ್ದೇನೆ. ಒಂದು ವರ್ಷದ ಹಿಂದೆ ಕೆಲಸ ಬಿಟ್ಟಿದ್ದೇನೆ. ನನ್ನ ಜಮೀನು ಬರೆಸಿಕೊಂಡು ನನ್ನ ಪತ್ನಿಗೆ ಹಿಂಸೆ ಕೊಟ್ಟು ಹಲ್ಲೆ ಮಾಡಿದ್ರು. ಆದ್ದರಿಂದ ಕೆಲಸ ಬಿಟ್ಟು ಅವರ ಮನೆಯಿಂದ ಹೊರಬಂದೆ ಎಂದು ಮಾಜಿ ಚಾಲಕ ಹೇಳಿದ್ದಾರೆ.
ಯಾವುದೇ ಅಶ್ಲೀಲ ವಿಡಿಯೋ ರಿಲೀಸ್ ಮಾಡಬಾರದು ಎಂದು ನನ್ನ ವಿರುದ್ಧ ಪ್ರಜ್ವಲ್ ರೇವಣ್ಣ ಸ್ಟೇ ತಂದಿದ್ದರು. ಅದಕ್ಕೆ ನಾನು ಬಿಜೆಪಿ ಮುಖಂಡ ದೇವರಾಜೇಗೌಡರ ಬಳಿ ಹೋಗಿ ಪೆನ್ ಡ್ರೈವ್ ಕೊಟ್ಟೆ. ಆಗ ನಿನ್ನ ಬಳಿ ಇರುವ ವಿಡಿಯೋ, ಫೋಟೋಸ್ ನಾನು ಯಾರಿಗೂ ಕೊಡಲ್ಲ ಎಂದು ದೇವರಾಜೇಗೌಡರು ಹೇಳಿದ್ರು. ನಾನು ನನ್ನ ಬಳಿ ಇದ್ದ ವಿಡಿಯೋದ ಒಂದು ಕಾಪಿ ಮಾಡಿ ಕೊಟ್ಟೆ. ಅವರು ಅದನ್ನು ತಮ್ಮ ಸ್ವಾರ್ಥಕ್ಕೆ ಉಪಯೋಗಿಸಿಕೊಂಡರೋ ಬಿಟ್ಟರೋ ಗೊತ್ತಿಲ್ಲ. ಅವರನ್ನು ಬಿಟ್ಟರೆ ಬೇರೆ ಯಾರಿಗೂ ನಾನು ಕೊಟ್ಟಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್ ನವರ ಮೇಲೆ ನಂಬಿಕೆ ಇಲ್ಲದೆ ಇವರಿಗೆ ಕೊಟ್ಟಿದ್ದೆ. ನಂತರ ಪೆನ್ ಡ್ರೈವ್ ಯಾರು ಹಂಚಿದರೋ ಗೊತ್ತಿಲ್ಲ. ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಕಾಂಗ್ರೆಸ್ ಅವರಿಗೆ ಕೊಡುವುದಿದ್ದರೆ ಬಿಜೆಪಿಯ ದೇವರಾಜೇಗೌಡರ ಬಳಿ ಏಕೆ ಹೋಗುತ್ತಿದ್ದೆ. ಎಸ್ ಐಟಿ ಮುಂದೆ ಹಾಜರಾಗಿ ಎಲ್ಲಾ ಹೇಳಿಕೊಳ್ಳುತ್ತೇನೆ. ನಂತರ ಮಾಧ್ಯಮದ ಮುಂದೆ ಎಲ್ಲವನ್ನು ವಿವರವಾಗಿ ಹೇಳುತ್ತೇನೆ ಎಂದಿದ್ದಾರೆ.
ರೇವಣ್ಣ ಮನೆಯಲ್ಲಿ ಏನೆಲ್ಲಾ ನಡೆದಿದೆ ಎಂದು ಎಲ್ಲವನ್ನೂ ನೋಡಿದ್ದೇನೆ. ಎಲ್ಲವನ್ನು ಎಸ್ ಐಟಿ ಮುಂದೆ ಹೇಳುತ್ತೇನೆ. ಯಾರಿಗೆ ಅನ್ಯಾಯವಾಗಿದೆಯೋ ಅವರು ಧೈರ್ಯವಾಗಿ ಮುಂದೆ ಬನ್ನಿ ಎಂದು ಕಾರ್ತಿಕ್ ವಿಡಿಯೋ ಮೂಲಕ ಮನವಿ ಮಾಡಿದ್ದಾರೆ. ಹಾಸನದಲ್ಲಿ ಸಂತ್ರಸ್ತರನ್ನು ಪತ್ತೆ ಹಚ್ಚಿ ಮಾಹಿತಿ ಸಂಗ್ರಹಿಸಲು ಎಸ್ ಐಟಿಯ ಪ್ರತ್ಯೇಕ ತಂಡ ಕಾರ್ಯಾಚರಿಸುತ್ತಿದೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
Najlepsze bonusy i sloty w polskim kasynie online
Tulunadu News May 29, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search