• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ನೇಹಾ ಹತ್ಯೆಯ ಚಾರ್ಜ್ ಶೀಟ್ ನಲ್ಲಿ ಲವ್ ಜಿಹಾದ್ ಉಲ್ಲೇಖವಿಲ್ಲ!

Tulunadu News Posted On July 10, 2024
0


0
Shares
  • Share On Facebook
  • Tweet It

ರಾಜ್ಯದಲ್ಲಿಯೇ ಸಂಚಲನ ಉಂಟು ಮಾಡಿದ್ದ ನೇಹಾ ಹಿರೇಮಠ ಹತ್ಯಾ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಕೊಲೆಯಾದ 81 ದಿನಗಳ ಬಳಿಕ ಚಾರ್ಜ್ ಶೀಟ್ ಸಲ್ಲಿಸಲಾಗಿದ್ದು, ಅದರಲ್ಲಿರುವ 483 ಪುಟಗಳ ವರದಿ ಸದ್ಯ ನ್ಯಾಯಾಲಯದ ಮುಂದಿದೆ. ಚಾರ್ಜ್ ಶೀಟ್ ನಲ್ಲಿ ನೇಹಾಳ ತಂದೆ, ತಾಯಿ, ಸಹೋದರ, ಸಹಪಾಠಿಗಳು, ಗೆಳತಿಯರು, ಬಿವಿಬಿ ಕಾಲೇಜಿನ ಉಪನ್ಯಾಸಕರು ಸೇರಿದಂತೆ 99 ಸಾಕ್ಷ್ಯಗಳನ್ನು ಉಲ್ಲೇಖಿಸಲಾಗಿದೆ.

ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಅವರ ಮಗಳು ನೇಹಾ ಹಿರೇಮಠ ಹತ್ಯೆಯ ಹಿಂದೆ ಲವ್ ಜಿಹಾದ್ ಕಾರಣವಿದೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿದ್ದವು. ನೇಹಾ ತಂದೆ ಕೂಡ ಇದನ್ನು ಬಲವಾಗಿ ಸಮರ್ಥಿಸಿದ್ದರು. ಆದರೆ ಸಿಐಡಿ ಸಲ್ಲಿಸಿದ ವರದಿಯಲ್ಲಿ ಲವ್ ಜಿಹಾದ್ ಉಲ್ಲೇಖವಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಕೊಲೆಗೆ ಮದುವೆ ನಿರಾಕರಣೆಯೇ ಕಾರಣ ಎಂದು ಸಿಐಡಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ನೇಹಾ ಹಿರೇಮಠ ಮತ್ತು ಆರೋಪಿ ಫಯಾಜ್ ಹುಬ್ಬಳ್ಳಿಯ ಪಿಸಿ ಜಾಬಿನ್ ಕಾಲೇಜಿನಲ್ಲಿ ಬಿಸಿಎ ಅಧ್ಯಯನ ಮಾಡುತ್ತಿದ್ದಾಗ ಸಹಪಾಠಿಗಳಾಗಿದ್ದರು. ಇಬ್ಬರೂ ಆರಂಭದಲ್ಲಿ ಸ್ನೇಹಿತರಾಗಿ ನಂತರ ಪ್ರೀತಿಸಲು ಶುರು ಮಾಡಿದ್ದರು. 2024 ರ ಮಾರ್ಚ್ ತಿಂಗಳಲ್ಲಿ ಇಬ್ಬರ ಮಧ್ಯೆ ಜಗಳವಾಗಿ, ಅದು ಮನಸ್ತಾಪಕ್ಕೆ ಬೆಳೆದು ನೇಹಾ ಕೊನೆಗೆ ಫಯಾಜ್ ಜೊತೆ ಮಾತನಾಡುವುದನ್ನು ಬಿಟ್ಟುಬಿಟ್ಟಿದ್ದಳು.
ಇದರಿಂದ ಫಯಾಜ್ ತೀವ್ರ ಹತಾಶೆಗೊಂಡು ನೇಹಾಳನ್ನು ಜೀವಂತ ಬಿಡಬಾರದು ಎಂದು ನಿರ್ಧರಿಸಿ ಏಪ್ರಿಲ್ 18 ರಂದು ಕೊಲೆ ಮಾಡುವ ಮೂರು ದಿನಗಳ ಮೊದಲು ಧಾರವಾಡದ ಆರ್ಯ ಸೂಪರ್ ಬಜಾರ್ ನಲ್ಲಿ ಚಾಕು ಖರೀದಿಸಿದ್ದಾನೆ. ಫಯಾಜ್ ಚಾಕು ಖರೀದಿಸಿದ ಸಿಸಿಟಿವಿ ದೃಶ್ಯ ಸಿಐಡಿ ಅಧಿಕಾರಿಗಳಿಗೆ ಲಭ್ಯವಾಗಿದೆ.
ಆರೋಪಿ ಫಯಾಜ್ ವಿರುದ್ಧ ಕಲಂ 302 (ಮರಣದಂಡನೆ ಇಲ್ಲವೇ ಜೀವಾವಧಿ ಶಿಕ್ಷೆ), 341 ( ಒಂದು ತಿಂಗಳು ಜೈಲು ಶಿಕ್ಷೆ) ಹಾಗೂ 506 ( ಜೀವ ಬೆದರಿಕೆಗಾಗಿ 7 ವರ್ಷಗಳ ಜೈಲು ಶಿಕ್ಷೆ ) ಅಡಿಯಲ್ಲಿ ದೋಷಾರೋಪ ಹೊರಿಸಲಾಗಿದೆ.

ಇಷ್ಟು ದಿನ ಪ್ರೀತಿ ಮಾಡಿ ಈಗ ಮೋಸ ಮಾಡುತ್ತಿದ್ದೀಯಾ? ನನ್ನನ್ನು ಮದುವೆ ಆಗುವುದಿಲ್ಲವೇ? ಈಗ ನಿನ್ನನ್ನು ಬಿಡುವುದಿಲ್ಲ ಎಂದು ಸಂಜೆ 4.40 ರ ಸುಮಾರಿಗೆ ಚಾಕುವಿನಿಂದ ಮನಬಂದಂತೆ ಚುಚ್ಚಿ ಕೊಲೆ ಮಾಡಿ, ಅಲ್ಲಿಯೇ ಚಾಕು ಬಿಟ್ಟು ಓಡಿ ಹೋಗಿದ್ದಾನೆ ಎಂದು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ.

0
Shares
  • Share On Facebook
  • Tweet It




Trending Now
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
Tulunadu News March 17, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
    • ಅಪ್ರಾಪ್ತ ವಯಸ್ಸಿನವರ ಮೇಲೆ ಅನೈತಿಕ ಪೊಲೀಸ್ ಗಿರಿ: ತಂದೆ, ಮಗನ ಬಂಧನ
  • Popular Posts

    • 1
      ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • 2
      ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.

  • Privacy Policy
  • Contact
© Tulunadu Infomedia.

Press enter/return to begin your search