• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಮಂಗಳೂರು – ಬೆಂಗಳೂರು ರೈಲು ಸಂಚಾರ ಪುನರಾರಂಭ!

Tulunadu News Posted On August 8, 2024
0


0
Shares
  • Share On Facebook
  • Tweet It

ವಿಪರೀತ ಮಳೆಯಿಂದಾಗಿ ಸಂಭವಿಸಿದ ಗುಡ್ಡಕುಸಿತದ ಪರಿಣಾಮ ಮಂಗಳೂರು ಮತ್ತು ಬೆಂಗಳೂರು ನಡುವೆ ರೈಲು ಸಂಚಾರ ಬಂದ್ ಆಗಿತ್ತು. ಅದಕ್ಕೆ ಕಾರಣ ಸಕಲೇಶಪುರ – ಸುಬ್ರಹ್ಮಣ್ಯ ನಿಲ್ದಾಣಗಳ ನಡುವಿನ ಭೂಕುಸಿತ. ಸದ್ಯ ಅಲ್ಲಿ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಗುರುವಾರ ಯಶವಂತಪುರ – ಮಂಗಳೂರು ಜಂಕ್ಷನ್ ಗೊಮ್ಮಟೇಶ್ವರ ಎಕ್ಸಪ್ರೆಸ್ ರೈಲು ಆ ಮಾರ್ಗದಲ್ಲಿ ರೈಲಿನ ಸಂಚಾರ ಆರಂಭಿಸಿದೆ. ಈ ಮೂಲಕ ಮಂಗಳೂರು – ಬೆಂಗಳೂರು ನಡುವಿನ ರೈಲು ಸಂಚಾರ ಪುನರಾರಂಭವಾಗಿದೆ.
ಕಡಗರಹಳ್ಳಿ ಮತ್ತು ಯಡಕುಮೇರಿ ನಡುವಿನ ರೈಲು ಮಾರ್ಗದ ಕೆಳಬದಿಯಲ್ಲಿ ಭೂಕುಸಿತವಾಗಿದ್ದು, ರೈಲು ಸಂಚಾರ ಸ್ಥಗಿತವಾಗಿತ್ತು. ನಿರಂತರ ಮಳೆಯ ನಡುವೆಯೂ ಕ್ರಿಬ್ ಗೋಡೆ, ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲಾಗಿದೆ.

ಅಗಸ್ಟ್ 4 ರಂದು ಈ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಅನುಮತಿ ನೀಡಲಾಗಿತ್ತು. ರೈಲಿನ ಎಂಜಿನ ಓಡಿಸುವ ಮೂಲಕ ಸುರಕ್ಷತೆ ಪರಿಶೀಲಿಸಲಾಯಿತು. ಅಗಸ್ಟ್ 6 ರಂದು ಪೂರ್ಣ ಸಾಮಗ್ರಿ ಹೊತ್ತ ಗೂಡ್ಸ್ ರೈಲು ಈ ಮಾರ್ಗದಲ್ಲಿ ಯಶಸ್ವಿಯಾಗಿ ಸಂಚರಿಸಿದೆ. ಪ್ರಸ್ತುತ ಈ ಸ್ಥಳದಲ್ಲಿ ರೈಲಿನ ವೇಗದ ಮಿತಿಯನ್ನು 15 ಕಿ.ಮೀ ನಿಗದಿಗೊಳಿಸಲಾಗಿದೆ.

ಪ್ರಯಾಣಿಕರ ಸುರಕ್ಷತೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ರೈಲು ಮಾರ್ಗವನ್ನು ತ್ವರಿತಗತಿಯಲ್ಲಿ ದುರಸ್ತಿ ಮಾಡಿರುವುದಕ್ಕೆ ರೈಲ್ವೆ ಪ್ರಯಾಣಿಕರ ಪರವಾಗಿ ತುಳುನಾಡು ನ್ಯೂಸ್ ಆ ಎಲ್ಲಾ ಶ್ರಮಿಕ ಸಿಬ್ಬಂದಿಗಳಿಗೆ ಧನ್ಯವಾದ ಅರ್ಪಿಸುತ್ತದೆ.

0
Shares
  • Share On Facebook
  • Tweet It




Trending Now
ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
Tulunadu News July 1, 2025
ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
Tulunadu News July 1, 2025
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?
    • ಸಂವಿಧಾನದಿಂದ "ಜಾತ್ಯಾತೀತತೆ" ಮತ್ತು "ಸಮಾಜವಾದ" ಶಬ್ದಗಳನ್ನು ತೆಗೆಯುವ ಬಗ್ಗೆ ಚರ್ಚೆ ನಡೆಯಲಿ - ಆರ್ ಎಸ್ ಎಸ್
    • PFI ಟಾರ್ಗೆಟ್- 950 ಜನರ ಹಿಟ್ ಲಿಸ್ಟ್ ರೆಡಿ! NIA ಕೋರ್ಟ್ ನಲ್ಲಿ ವಕೀಲರಿಂದ ಮಾಹಿತಿ...
    • ಎಮರ್ಜೆನ್ಸಿ ದಿನಗಳಲ್ಲಿ ಮೋದಿಯವರ ಅನುಭವ ಕಥನ "ದಿ ಎಮರ್ಜೆನ್ಸಿ ಡೈರಿಸ್"!
    • ಬಾಹ್ಯಕಾಶಕ್ಕೆ ಜಿಗಿಯುವ ಮೊದಲು ಪತ್ನಿಗೆ ಭಾವನಾತ್ಮಕ ಸಂದೇಶ: "ನೀನಿಲ್ಲದೆ..... " ಶುಭಾಂಶು ಹೇಳಿದ್ದೇನು?
    • ಪಹಲ್ಗಾಮ್ ಉಗ್ರರಿಗೆ ಆಹಾರ, ಆಶ್ರಯ: ಸ್ಥಳೀಯರಿಬ್ಬರ ಬಂಧನ!
  • Popular Posts

    • 1
      ಜಾಂಡಿಸ್ ಬಂದ ಮಗುವಿಗೆ ಆಧುನಿಕ ಚಿಕಿತ್ಸೆ ನೀಡಲು ಹೆತ್ತವರ ನಕಾರ: ಪ್ರಾಣ ಬಿಟ್ಟ ಒಂದು ವರ್ಷದ ಹಸುಳೆ!
    • 2
      ಜನರು ರಸ್ತೆಬದಿ ಕಸ ಹಾಕುವುದನ್ನು ತಡೆಯಲು ಭಾರತ ಮಾತೆ, ದೇವರ ಫೋಟೋ! ಪುನೀತ್ ಕೆರೆಹಳ್ಳಿ ಆಕ್ರೋಶ!
    • 3
      ಉಡುಪಿ: ದನದ ಕಳೇಬರ ಪತ್ತೆ ಪ್ರಕರಣ: ಆರು ಮಂದಿಯನ್ನು ಬಂಧಿಸಿದ ಉಡುಪಿ ಪೊಲೀಸರು
    • 4
      ಫೈರ್ ಬ್ರಾಂಡ್ ನಾಯಕ, ಶಾಸಕ ಬಿಜೆಪಿಗೆ ರಾಜೀನಾಮೆ!
    • 5
      ಹೃದಯಾಘಾತ ಫೈನ್ ಅಂಡ್ ಫಿಟ್ ಇದ್ದ ತರುಣ, ತರುಣಿಯರಿಗೂ ಬರುತ್ತಿದೆ, ಹೇಗೆ?

  • Privacy Policy
  • Contact
© Tulunadu Infomedia.

Press enter/return to begin your search