• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ದಿನೇಶ್ ಗುಂಡು ರಾವ್ ಎಲ್ಲಿ ನಿದ್ದೆ ಮಾಡುತ್ತಿದ್ದಾರೆ – ಕುಂಪಲ ಪ್ರಶ್ನೆ

Tulunadu News Posted On September 18, 2024
0


0
Shares
  • Share On Facebook
  • Tweet It

ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡು ರಾವ್ ಎಲ್ಲಿ ನಿದ್ದೆ ಮಾಡುತ್ತಿದ್ದಾರೆ, ಕಿಡಿಗೇಡಿ ಸವಾಲು ಹಾಕಿದ್ದನ್ನು ಪ್ರಶ್ನಿಸಿದರೆ ಎಫ್‌ಐಆ‌ರ್ ದಾಖಲಿಸುತ್ತಾರೆ, ಪ್ಯಾಲೆಸ್ತೀನ್ ಧ್ವಜ ಹಾರಿಸಿದ್ರೆ ಕೇಸು ಮಾಡಲ್ಪ, ಶರಣ್ ಪಂಪ್ ವೆಲ್ ಮಾತಾಡಿದ್ದರಲ್ಲಿ ತಪ್ಪೇನಿದೆ ? ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಪ್ರಶ್ನಿಸಿದ್ದಾರೆ.

ನಾಗಮಂಗಲದಲ್ಲಿ ಗಣಪತಿ ವಿಸರ್ಜನೆಯ ಮೆರವಣಿಗೆಯನ್ನು ಧಾರ್ಮಿಕ ಕ್ಷೇತ್ರ ಇದೆಯೆಂದು ಬರಬಾರದು ಅಂತ ಹೇಳುತ್ತಾರೆ. ಧಾರ್ಮಿಕ ಕ್ಷೇತ್ರ ಇದೆಯೆಂದು ಮೆರವಣಿಗೆ ಹೋಗಬಾರದು ಅಂತ ಹೇಳಿದರೆ, ಯಾವ ರಸ್ತೆಯಲ್ಲೂ ಯಾವುದೇ ಮೆರವಣಿಗೆ ನಡೆಸುವುದಕ್ಕೆ ಸಾಧ್ಯವಿಲ್ಲ. ಇದೇ ವಿಚಾರವನ್ನು ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಪ್ರಶ್ನಿಸಿದ್ದಾರೆ. ಈದ್ ಮೆರವಣಿಗೆಯನ್ನು ಪ್ರಶ್ನೆ ಮಾಡಿದರೆ ಏನಾದೀತು ಎಂದು ಪ್ರಶ್ನೆ ಮಾಡಿದ್ದಾರೆ. ಅದರಲ್ಲಿ ತಪ್ಪೇನಿದೆ. ಇದಕ್ಕಾಗಿ ಎಫ್‌ಐಆರ್ ದಾಖಲಿಸಿದ್ದನ್ನು ಬಿಜೆಪಿ ಖಂಡಿಸುತ್ತದೆ ಎಂದು ಸತೀಶ್ ಕುಂಪಲ ಹೇಳಿದ್ದಾರೆ.

ಸುದ್ದಿಗೋಷ್ಟಿ ಸಂದರ್ಭದಲ್ಲಿ ಈ ಕುರಿತು ಕೇಳಿದ ಪ್ರಶ್ನೆಗೆ, ಬಿಸಿ ರೋಡಿಗೆ ಬನ್ನಿ ನೋಡಿಕೊಳ್ಳುತ್ತೇವೆ ಎಂದು ಸವಾಲು ಹಾಕುವುದು ಉದ್ಧಟತನ. ಬಿಸಿ ರೋಡ್ ಏನು ಪಾಕಿಸ್ತಾನದಲ್ಲಿರುವ ಜಾಗ ಅಲ್ಲ, ಭಾರತದ್ದೇ ನೆಲ. ಅಂಥ ಸವಾಲು ಹಾಕಿದ ಸಂದರ್ಭದಲ್ಲಿ ಕಾರ್ಯಕರ್ತರು ಆಕ್ರೋಶದಿಂದ ಸೇರಿದ್ದು ಅಲ್ಲಿಗೆ ಮುಖಂಡರು ಹೋಗುವುದು ಸಹಜ ಪ್ರಕ್ರಿಯೆ. ಹಾಗೆಂದ ಮಾತ್ರಕ್ಕೆ ಹಿಂದು ಸಂಘಟನೆಯ ಮುಖಂಡರ ವಿರುದ್ಧ ಎಫ್‌ಐಆರ್ ದಾಖಲು ಮಾಡುತ್ತಾರಂದ್ರೆ ಕಾಂಗ್ರೆಸ್ ಮಾನಸಿಕ ಸ್ಥಿತಿಯೇನೆಂದು ಅರ್ಥವಾಗುತ್ತದೆ. ಬಂಟ್ವಾಳದಲ್ಲಿ ಒಬ್ಬ ಜನಪ್ರತಿನಿಧಿಯಾಗಿದ್ದ ವ್ಯಕ್ತಿಯೊಬ್ಬ ಕಿಡಿಗೇಡಿ ರೀತಿ ವರ್ತಿಸಿದ್ದಾನೆ.

ಪ್ರಜಾಪ್ರಭುತ್ವ ದೇಶದಲ್ಲಿ ಸವಾಲು ಹಾಕುವುದನ್ನು ಯಾರೂ ಒಪ್ಪಿಕೊಳ್ಳಲ್ಲ. ಇಷ್ಟೆಲ್ಲ ಆಗುತ್ತಿರುವಾಗ ಉಸ್ತುವಾರಿ ಸಚಿವರು ಎಲ್ಲಿ ನಿದ್ದೆ ಮಾಡುತ್ತಿದ್ದಾರೆ, ಕಾಂಗ್ರೆಸಿಗರು ಈಗ ಯಾಕೆ ಮಾತನಾಡುತ್ತಿಲ್ಲ. ರಾಜ್ಯದ ಹಲವು ಕಡೆಗಳಲ್ಲಿ ಪ್ಯಾಲೆಸ್ತೀನ್ ಧ್ವಜ ಹಾರಿಸಿ ದೇಶ ವಿರೋಧಿ ಕೃತ್ಯ ನಡೆಸಿದ್ದಾರೆ. ಕಾಂಗ್ರೆಸ್ ಸರಕಾರ ಯಾಕೆ ಅವರ ಮೇಲೆ ಕ್ರಮ ಕೈಗೊಳ್ತಿಲ್ಲ. ಇದನ್ನೆಲ್ಲ ನಾವು ಭಾರತದಲ್ಲಿ ಪ್ರಶ್ನೆ ಮಾಡದೆ, ಬೇರೆ ಕಡೆ ಮಾಡೋಕಾಗುತ್ತಾ ಎಂದು ಸತೀಶ್ ಕುಂಪಲ ಹೇಳಿದ್ದಾರೆ.

ದೇಶ ವಿರೋಧಿ ಹೇಳಿಕೆ ನೀಡಿರುವ ಎಂಎಲ್ಸಿ ಒಬ್ಬರ ಮೇಲೆ ಕೇಸು ದಾಖಲಿಸುವ ಧೈರ್ಯ ಇವರಿಗಿಲ್ಲ. ರಾಜ್ಯದಲ್ಲಿ ಕೋಮು ದ್ವೇಷ ಬೆಳೆಸಿ ಸಂಘರ್ಷಕ್ಕೆ ಎಡೆ ಮಾಡುತ್ತಿರುವುದೇ ರಾಜ್ಯ ಸರಕಾರ. ಇದರ ವಿರುದ್ಧ ಹಿಂದು ಸಂಘಟನೆ ಹೋರಾಟಕ್ಕೆ ಧುಮುಕಿದ್ದು, ಇದಕ್ಕೆ ಬಿಜೆಪಿ ಸಂಪೂರ್ಣ ಬೆಂಬಲಿಸುತ್ತದೆ ಎಂದು ಸತೀಶ್ ಕುಂಪಲ ಹೇಳಿದ್ದಾರೆ.

0
Shares
  • Share On Facebook
  • Tweet It




Trending Now
ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
Tulunadu News June 16, 2026
ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
Tulunadu News May 21, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
  • Popular Posts

    • 1
      ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ

  • Privacy Policy
  • Contact
© Tulunadu Infomedia.

Press enter/return to begin your search