• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚಳಿಗಾಲದಲ್ಲಿ ಬಾಲರಾಮನನ್ನು ಬೆಚ್ಚಗಿಡಲು ಏನಿದೆ ವ್ಯವಸ್ಥೆ!

Tulunadu News Posted On November 11, 2024
0


0
Shares
  • Share On Facebook
  • Tweet It

ಅಯೋಧ್ಯೆಯ ಬಾಲರಾಮನಿಗೆ ಈ ಬಾರಿ ಭವ್ಯ ರಾಮಮಂದಿರದಲ್ಲಿ ಪ್ರತಿಷ್ಠಾಪಿಸಿದ ನಂತರ ಮೊದಲ ಅಧಿಕೃತ ಚಳಿಗಾಲದ ದಿನಗಳು ಆರಂಭಗೊಳ್ಳಲಿವೆ. ಈ ದಿನಗಳಲ್ಲಿ ರಾಮ ಮಂದಿರದಲ್ಲಿ ಬಾಲರಾಮನನ್ನು ಬೆಚ್ಚಗಿಡಲು ತಯಾರಿ ನಡೆಸಲಾಗಿದೆ. ನವೆಂಬರ್ 20 ರಿಂದ ಬರುವ “ಅಘರ್ ಕಿ ಪಂಚಮಿ”ಯಿಂದ ರಾಮಲಲ್ಲಾನಿಗೆ ಚಾದರ, ಪಶ್ಮಿನಾ ಶಾಲು ಹೊದಿಸಿ ಅಲಂಕಾರ ಮಾಡಲಾಗುವುದು, ಹೀಟರ್ ಅಳವಡಿಕೆ ಮಾಡಿ ಮೂರ್ತಿಗೆ ಬಿಸಿ ನೀರಿನ ಅಭಿಷೇಕ ಮಾಡಲಾಗುವುದು. ಬಾಲರಾಮನಿಗೆ ಮೊಸರು ನೈವೇದ್ಯದ ಬದಲು ಹವಾಮಾನ ಬದಲಾವಣೆಯನ್ನು ಗಮನದಲ್ಲಿಟ್ಟುಕೊಂಡು ಒಣಹಣ್ಣುಗಳ ನೈವೇದ್ಯ ಇರುತ್ತದೆ.

ಚಳಿಗಾಲದ ವಿಶೇಷ ಉಡುಗೆಯನ್ನು ಬಾಲರಾಮನಿಗೆ ತೊಡಿಸಲಿದ್ದು, ದೆಹಲಿ ಮೂಲದ ವಿನ್ಯಾಸಕಾರರು ಹೊಲಿಯುತ್ತಿದ್ದಾರೆ. ಅದನ್ನೇ ನವೆಂಬರ್ 20 ರ ಬಳಿಕ ರಾಮಲಲ್ಲಾನಿಗೆ ತೊಡಿಸಲಾಗುವುದು. ರಾಮಲಲ್ಲಾ ಮೂರ್ತಿಗೆ ಉಗುರು ಬೆಚ್ಚನೆಯ ನೀರಿನಿಂದ ಸ್ನಾನ ಮಾಡಲಾಗುವುದು ಮತ್ತು ಗರ್ಬಗುಡಿಯಲ್ಲಿ ಹೀಟರ್ ಗಳನ್ನು ಅಳವಡಿಸಿ ಅದನ್ನು ಬೆಚ್ಚಗಿಡಲಾಗುತ್ತದೆ. ಹವಾಮಾನ ವೈಪರೀತ್ಯದ ಸಮಯದಲ್ಲಿ ಗರ್ಭಗುಡಿಯಲ್ಲಿ ಬ್ಲೋವರ್ ನಿಂದ ಬೆಚ್ಚಗಿನ ಗಾಳಿಯನ್ನು ಸಹ ಒದಗಿಸಲಾಗುವುದು.

ದೇವಾಲಯದ ಟ್ರಸ್ಟ್ ನ ವಕ್ತಾರ ಓಂಕಾರ್ ಸಿಂಗ್, ರಾಮಲಲ್ಲಾ ರಾಮಮಂದಿರದಲ್ಲಿ ರಾಜಕುಮಾರನಾಗಿ ಕುಳಿತಿದ್ದಾನೆ. ಆದ್ದರಿಂದ ಅವನ ಬಟ್ಟೆಗಳು ಅವನ ರಾಜಪ್ರಭುತ್ವಕ್ಕೆ ಹೊಂದಿಕೆಯಾಗಬೇಕು ಎಂದು ಸಿಂಗ್ ತಿಳಿಸಿದರು.
ಒಟ್ಟಿನಲ್ಲಿ ಬಾಲರಾಮನ ಆರೈಕೆಗೆ ಚಳಿಗಾಲದ ಅಯೋಧ್ಯೆ ಸರ್ವಸನ್ನದ್ಧವಾಗಿದೆ.

0
Shares
  • Share On Facebook
  • Tweet It




Trending Now
ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
Tulunadu News March 27, 2026
ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
Tulunadu News March 20, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
    • ಅಕ್ರಮ 4 ಸಾವಿರ ಲೀಟರ್ ಡೀಸಿಲ್ ಬೆಳ್ತಂಗಡಿಯಲ್ಲಿ ಪತ್ತೆ!
    • ಕಳ್ಳತನ ನಡೆದ ಅರಣ್ಯಾಧಿಕಾರಿ ಮನೆ ಹಾಗೂ ನೆರೆಮನೆಗಳಲ್ಲಿ ಸಿಸಿಟಿವಿಗಳೂ ಇಲ್ಲ!
    • ಸಾಲ ಕೊಡಿಸುವ ಭರವಸೆ: ಕೋಟ್ಯಾಂತರ ರೂ ವಂಚನೆಯ ರೋಶನ್ ಸಲ್ದಾನ Case Update:
    • ಅಲಿ ಖಮೇನಿ ಹತ್ಯೆ: ಕರ್ನಾಟಕದ 'ಮಿನಿ ಇರಾನ್' ನಲ್ಲಿ 3 ದಿನ ಶೋಕಾಚಾರಣೆ!
    • ಇರಾನ್ ನಾಯಕ‌ ಅಲಿ ಖಮೇನಿ ಆತ್ಮಕ್ಕೆ ಶಾಂತಿ ಕೋರಿದ ಸಿಎಂ ಸಿದ್ದರಾಮಯ್ಯ
  • Popular Posts

    • 1
      ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!

  • Privacy Policy
  • Contact
© Tulunadu Infomedia.

Press enter/return to begin your search