ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಸಂಖ್ಯೆಗಿಂತ ಬೆಳಗಾವಿ ಕಥೆ ಇನ್ನೂ ಭಯಾನಕ!
ಬಳ್ಳಾರಿ ಜಿಲ್ಲೆಯಲ್ಲಿ ಜಿಲ್ಲಾಸ್ಪತ್ರೆಯಲ್ಲಿ ಈಗಾಗಲೇ ಐದು ಜನ ಬಾಣಂತಿಯರು ಸಾವನ್ನಪ್ಪಿರುವ ಘಟನೆ ಜನಮಾನಸದಲ್ಲಿ ಅಚ್ಚೊತ್ತಿರುವಾಗಲೇ ಬೆಳಗಾವಿಯಲ್ಲಿ ಇದಕ್ಕಿಂತ ಭಯಾನಕ ಘಟನೆಗಳು ನಡೆದಿರುವುದು ಇನ್ನು ಹೆದರಿಕೆಯ ವಾತಾವರಣವನ್ನು ಉಂಟು ಮಾಡುತ್ತಿವೆ. ಬೆಳಗಾವಿಯ ಬಿಮ್ಸ್ ಸೇರಿದಂತೆ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಆರು ತಿಂಗಳ ಅವಧಿಯಲ್ಲಿ 29 ಬಾಣಂತಿಯರು ಹಾಗೂ ಒಂದು ವರ್ಷದ ಅವಧಿಯಲ್ಲಿ 322 ನವಜಾತ ಶಿಶುಗಳು ಮೃತಪಟ್ಟಿರುವ ಆಘಾತಕಾರಿ ಮಾಹಿತಿ
ಹೊರಬಿದ್ದಿದೆ. ಇದರೊಂದಿಗೆ ಕಳೆದ ಒಂದು ವರ್ಷದ ಅವಧಿಯಲ್ಲಿ 322 ನವಜಾತ ಶಿಶುಗಳು ಮೃತಪಟ್ಟಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
2024 ರ ಎಪ್ರಿಲ್ ನಿಂದ ಅಕ್ಟೋಬರ್ ವರೆಗೆ ಜಿಲ್ಲೆಯಲ್ಲಿ 29 ಬಾಣಂತಿಯರ ಸಾವಾಗಿದೆ. ಸೂಕ್ತ ಚಿಕಿತ್ಸೆ ಸಿಗದಿರುವುದು, ರಕ್ತಸ್ರಾವ, ವೈದ್ಯರ ನಿರ್ಲಕ್ಷ್ಯ ಸೇರಿ ವಿವಿಧ ಕಾರಣದಿಂದಾಗಿ ಸಾವು ಸಂಭವಿಸಿದೆ ಎಂದು ಆರೋಗ್ಯ ಇಲಾಖೆ ಹೇಳಿಕೊಂಡಿದೆ. ಈ ಬಗ್ಗೆ ಸೂಕ್ತ ವಿಚಾರಣೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಹೇಳಿದ್ದಾರೆ. ಆದರೆ ಗುಣಮಟ್ಟದ ಔಷಧ ಖರೀದಿಸಲು ಸರಕಾರ ಬಳಿ ದುಡ್ಡಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ. ಸ್ಥಳೀಯವಾಗಿ ಔಷಧಗಳು ಲಭ್ಯ ಇಲ್ಲ ಎನ್ನುವುದು ಸ್ಪಷ್ಟವಾಗಿದ್ದು, ಯಾವ ಕಂಪೆನಿಯವರು ಪೂರೈಸಿದರೂ ಬಳಸಿಕೊಳ್ಳುತ್ತದೆ ಎನ್ನುವುದಕ್ಕೆ ಸರಕಾರ ದಿವಾಳಿಯಾಗಿದೆ ಎನ್ನುವುದನ್ನು ತೋರಿಸುತ್ತದೆ ಎಂದು ಪ್ರಹ್ಲಾದ್ ಜೋಷಿ ಹೇಳಿದ್ದಾರೆ.
Leave A Reply