• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಚೇತನಾ ಶಾಲೆಯಲ್ಲಿ ಯೂತ್ ಆಫ್ ಜಿಎಸ್ ಬಿ ಹೋಳಿ ಸಂಭ್ರಮ!

Tulunadu News Posted On March 14, 2025
0


0
Shares
  • Share On Facebook
  • Tweet It

ಬಣ್ಣಗಳನ್ನು ಮುಖಕ್ಕೆ ಹಚ್ಚಿಕೊಂಡು, ನೀರು ತುಂಬಿದ ಬೆಲೂನುಗಳನ್ನು ಸಿಡಿಸಿ, ಹಾಡಿಗೆ ಹೆಜ್ಜೆ ಹಾಕುತ್ತಾ ಚೇತನಾ ಶಾಲೆಯ ವಿಶೇಷ ಚೇತನ ಮಕ್ಕಳು ಈ ಬಾರಿಯ ಹೋಳಿ ಸಂಭ್ರಮವನ್ನು ಆಚರಿಸಿದರು.

ಪ್ರಾರಂಭದಲ್ಲಿ ಪ್ರತಿ ಮಗು ಕೂಡ ತನ್ನ ಕೈಗಳನ್ನು ಬಣ್ಣದ ನೀರಿನಲ್ಲಿ ಅದ್ದಿ ಬಿಳಿ ಹಾಳೆಯ ಮೇಲೆ ಅಚ್ಚನ್ನು ಒತ್ತುತ್ತಾ ಮುಖದಲ್ಲಿ ಅರಳುತ್ತಿದ್ದ ನಗೆಯನ್ನು ಸಂಭ್ರಮಿಸುತ್ತಾ ಕಾರ್ಯಕ್ರಮ ಆರಂಭವಾಯಿತು.

ನಂತರ ಮಕ್ಕಳ ಕೈಗಳಲ್ಲಿ ರಾಸಾಯನಿಕ ರಹಿತ, ಪರಿಸರ ಸ್ನೇಹಿ ಬಣ್ಣಗಳನ್ನು ನೀಡುತ್ತಿದ್ದಂತೆ ಪರಸ್ಪರ ಹಚ್ಚಿ ಖುಷಿಪಟ್ಟರು. ನಂತರ ಹಾಡುಗಳಿಗೆ ಮಕ್ಕಳು ಹೆಜ್ಜೆ ಹಾಕುತ್ತಾ, ನೀರಿನ ಬೆಲೂನುಗಳನ್ನು ಎಸೆದು ಅದು ಸಿಡಿಯುತ್ತಿದ್ದಂತೆ ಚಪ್ಪಾಳೆ, ಕೇಕೆಗಳೊಂದಿಗೆ ಹರುಷಪಟ್ಟರು.

ವಯಸ್ಸು, ಜಾತಿ, ಭಾಷೆ, ಧರ್ಮದ ಭೇದವಿಲ್ಲದೆ, ಶಿಕ್ಷಕರ ಪ್ರೀತಿ ವಾತ್ಸಲ್ಯದೊಂದಿಗೆ, ಆರೈಕೆ, ಆರೋಗ್ಯದ ಕಾಳಜಿಯೊಂದಿಗೆ ಮಕ್ಕಳಲ್ಲಿ ನೈತಿಕ ಸ್ಥೈರ್ಯ, ಹುಮ್ಮಸ್ಸನ್ನು ನೀಡುತ್ತಾ ಬರುತ್ತಿರುವ ಮಂಗಳೂರಿನ ವಿ.ಟಿ.ರಸ್ತೆಯಲ್ಲಿರುವ ಚೇತನಾ ಮಕ್ಕಳ ಅಭಿವೃದ್ಧಿ ಕೇಂದ್ರದಲ್ಲಿ ಕಲಿಯುತ್ತಿರುವ ನೂರಕ್ಕೂ ಮಿಕ್ಕಿದ ವಿಶೇಷ ಮಕ್ಕಳಲ್ಲಿ ಹೋಳಿಯ ಸಂಭ್ರಮವನ್ನು ಹೆಚ್ಚಿಸಲು ಯೂತ್ ಆಫ್ ಜಿಎಸ್ ಬಿ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು. ಈ ಸಂದರ್ಭದಲ್ಲಿ ಯೂತ್ ಆಫ್ ಜಿಎಸ್ ಬಿಯ ಪ್ರಮುಖರು, ಹಿತೈಷಿಗಳು, ಶಾಲೆಯ ಶಿಕ್ಷಕರು, ಆಡಳಿತ ಮಂಡಳಿಯ ಪ್ರಮುಖರು ಉಪಸ್ಥಿತರಿದ್ದರು.

0
Shares
  • Share On Facebook
  • Tweet It




Trending Now
ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
Tulunadu News April 27, 2026
ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
Tulunadu News April 14, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
    • ಸುಳ್ಯದ ಹಿಂದೂ ಬಾಂಧವರಿಗೆ ಗೋಪ್ರೇಮಿಗಳ ಬಹಿರಂಗ ಪತ್ರ!
    • ಮೂಡಬಿದ್ರೆ ಇನ್ ಸ್ಪೆಕ್ಟ‌ರ್ ಸಂದೇಶ್ ವಿರುದ್ಧದ ಆರೋಪ ಸುಳ್ಳು: ಕಮಿಷನ‌ರ್ ರೆಡ್ಡಿ ಸ್ಪಷ್ಟನೆ
    • ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ : ಮೂಡಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಬಿ.ಜಿ ಅಮಾನತು.
    • ಕಾಣೆಯಾಗಿದ್ದ ವಿವೇಕ್ ಶೆಟ್ಟಿಗಾರ್ ಮೃತದೇಹ ಪತ್ತೆ
    • ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆ ಸಲ್ಲಿಸಿದ ನಟ!
  • Popular Posts

    • 1
      ಮಹಾನಗರ ಪಾಲಿಕೆ ಮೇ 1ರಿಂದ ನೀರಿನ ರೇಷನಿಂಗ್ ಘೋಷಣೆ!

  • Privacy Policy
  • Contact
© Tulunadu Infomedia.

Press enter/return to begin your search