ಹಿಜ್ಬುಲ್ ಮುಜಾಹಿದ್ದೀನ್ ಉಗ್ರರ ಹತ್ಯೆ
Posted On September 4, 2017

ಶ್ರೀನಗರ: ಜಮ್ಮು-ಕಾಶ್ಮೀರದ ಸಪೋರ್ ಜಿಲ್ಲೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಭದ್ರತಾ ಸಿಬ್ಬಂದಿ ಸೋಮವಾರ ಹತ್ಯೆ ಮಾಡಿದೆ. ಉಗ್ರರ ವಿರುದ್ಧದ ಕಾರ್ಯಾಚರಣೆ ಇನ್ನೂ ಮುಂದುವರಿದಿದ್ದು, ಮೃತ ಉಗ್ರರ ಗುರುತು ಸಿಕ್ಕಿಲ್ಲ. ಅವರ ಬಳಿಯಿದ್ದ ಎಕೆ 47 ಗನ್ ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಉಗ್ರರು ಅಡಗಿರುವ ಕುರಿತು ಬೆಳಗ್ಗೆಯೇ ಗುಪ್ತಚರ ಇಲಾಖೆ ಅಧಿಕಾರಿಗಳಿಂದ ಮಾಹಿತಿ ರವಾನೆಯಾದ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದಾರೆ. ಭಾನುವಾರ ಪಾಕಿಸ್ತಾನ ಕುಪ್ವಾರ ಜಿಲ್ಲೆಯಲ್ಲಿ ಮೂರು ಬಾರಿ ಕದನ ವಿರಾಮ ಉಲ್ಲಂಸಿ ಅಪ್ರಚೋದಿತ ದಾಳಿ ಮಾಡಿತ್ತು.
- Advertisement -
Leave A Reply