ಪಾಕ್ ವಿರುದ್ಧ ಮೋದಿ, ಶಾ ಅವಕಾಶ ಕೊಟ್ರೆ ಸೂಸೈಡ್ ಬಾಂಬರ್ ಆಗಲು ಸಿದ್ಧ- ಜಮೀರ್
Posted On May 3, 2025
0

ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನನಗೆ ಅವಕಾಶ ನೀಡಿದರೆ ಪಾಕಿಸ್ತಾನದ ವಿರುದ್ಧ ಯುದ್ಧಕ್ಕೆ ಹೋಗುವೆ ಎಂದು ವಸತಿ ಸಚಿವ, ಕಾಂಗ್ರೆಸ್ ಮುಖಂಡ ಜಮೀರ್ ಅಹಮದ್ ಖಾನ್ ಹೇಳಿದರು.
ಮಾಧ್ಯಮದವರೊಂದಿಗೆ ಮಾತನಾಡುತ್ತಾ, ನಾವು ಹಿಂದೂಸ್ತಾನಿ, ನಮಗೂ ಪಾಕಿಸ್ತಾನಕ್ಕೂ ಸಂಬಂಧ ಇಲ್ಲ. ಪಾಕಿಸ್ತಾನ ಯಾವತ್ತಿಗೂ ನಮ್ಮ ಶತ್ರು. ಕೇಂದ್ರ ಸರಕಾರ ಪಾಕಿಸ್ತಾನದ ಮೇಲೆ ಯುದ್ಧ ಸಾರಲಿ. ಮೋದಿ, ಅಮಿತ್ ಶಾ ಮತ್ತು ಕೇಂದ್ರ ಸರಕಾರ ನನಗೆ ಅವಕಾಶ ಕೊಡಲಿ. ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧ. ಕೇವಲ ತಮಾಷೆಗೆ, ಜೋಶ್ ನಲ್ಲಿ ಹೇಳುತ್ತಿಲ್ಲ. ಅಲ್ಲಾ ಮೇಲೆ ಆಣೆ, ದೇವರ ಮೇಲೆ ಆಣೆ, ಸೂಸೈಡ್ ಬಾಂಬರ್ ಆಗಿ ಯುದ್ಧಕ್ಕೆ ಹೋಗುತ್ತೇನೆ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.
Trending Now
ಜಿಎಸ್ಟಿ ಇಳಿಕೆ ಪರಿಣಾಮ- ದೀಪಾವಳಿಗೆ 6.05 ಲಕ್ಷ ಕೋಟಿ ವಸ್ತು ಮಾರಾಟ!
October 22, 2025
ಪುತ್ತೂರು: ಅಕ್ರಮ ಗೋಸಾಗಾಟ, ಪೊಲೀಸರಿಂದ ಫೈರಿಂಗ್!
October 22, 2025