• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಜಪಾನನ್ನು ಹಿಂದಿಕ್ಕಿ ಜಗತ್ತಿನ ಆರ್ಥಿಕತೆಯಲ್ಲಿ ನಾಲ್ಕನೇ ಸ್ಥಾನಕ್ಕೆ ಏರಿದ ಭಾರತ!

Tulunadu News Posted On May 26, 2025
0


0
Shares
  • Share On Facebook
  • Tweet It

ಕೊನೆಗೂ ಅಧಿಕೃತವಾಗಿ ಭಾರತ ಜಗತ್ತಿನ ಆರ್ಥಿಕತೆಯಲ್ಲಿ ನಾಲ್ಕನೇ ಸ್ಥಾನಕ್ಕೆ ಏರಿದೆ. ಇದನ್ನು ಘೋಷಿಸಿದವರು ನೀತಿ ಆಯೋಗದ ಸಿಇಒ ಬಿ.ವಿ.ಆರ್.ಸುಬ್ರಹ್ಮಣ್ಯಂ. ನೀತಿ ಆಯೋಗದ 10 ನೇ ಆಡಳಿತ ಮಂಡಳಿಯ ಸಭೆಯ ನಂತರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸುಬ್ರಹ್ಮಣ್ಯಂ ಅವರು ಜಗತ್ತಿನ ಆರ್ಥಿಕತೆಯಲ್ಲಿ ಭಾರತದ ಸ್ಥಾನಮಾನಗಳ ಬಗ್ಗೆ ಮಾಹಿತಿ ನೀಡಿದರು.

” ನಾವು ಪ್ರಪಂಚದ ನಾಲ್ಕನೇ ಅತೀ ದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆದಿದ್ದೇವೆ. ನಮ್ಮದು ನಾಲ್ಕು ಟ್ರಿಲಿಯನ್ ಇಕಾನಮಿ ಆಗಿದೆ. ನಾವು ಈ ಮೂಲಕ ಜಪಾನ್ ದೇಶವನ್ನು ಕೂಡ ಹಿಂದಿಕ್ಕಿದ್ದೇವೆ, ಈಗ ನಮ್ಮ ಮುಂದೆ ಯುಎಸ್, ಚೀನಾ, ಜರ್ಮನಿ ರಾಷ್ಟ್ರಗಳ ಆರ್ಥಿಕತೆ ಮಾತ್ರ ದೊಡ್ಡದಿದೆ. ಇನ್ನು ನಾವು ಹಾಕಿಕೊಂಡಿರುವ ನಮ್ಮ ಯೋಜನೆಯನ್ನು ಸಮರ್ಪಕವಾಗಿ ಅನುಷ್ಟಾನಕ್ಕೆ ತರುವಲ್ಲಿ ಸಫಲರಾದರೆ ಮುಂದಿನ 2.5 ಅಥವಾ 3 ವರ್ಷಗಳ ಒಳಗೆ ನಾವು ಮೂರನೇ ಅತೀ ದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆಯಲಿದ್ದೇವೆ” ಎಂದು ಸುಬ್ರಹ್ಮಣ್ಯಂ ತಿಳಿಸಿದ್ದಾರೆ.

ಇನ್ನು ಅಮೇರಿಕಾದಲ್ಲಿ ಮಾರಲ್ಪಡುತ್ತಿರುವ ಎಪಲ್ ಕಂಪೆನಿಯ ಐಫೋನ್ ಗಳು ಭವಿಷ್ಯದಲ್ಲಿ ಅಮೇರಿಕಾದಲ್ಲಿಯೇ ತಯಾರಾಗಬೇಕೆ ವಿನ: ಭಾರತ ಅಥವಾ ವಿಶ್ವದ ಬೇರೆ ಕಡೆ ತಯಾರಾಗಲು ನಾವು ಬಯಸುವುದಿಲ್ಲ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ” ಯಾವುದೇ ರೀತಿಯ ಸುಂಕ ಏರಿಕೆಯ ವಿಷಯವೇ ಇರಲಿ, ಅದು ಇನ್ನು ಅನಿಶ್ಚಿತತೆಯಾಗಿಯೇ ಇದೆ. ಬದಲಾಗುತ್ತಿರುವ ಕಾಲಘಟ್ಟದಲ್ಲಿ ಭಾರತದಷ್ಟು ಕಡಿಮೆ ದರದಲ್ಲಿ ವಸ್ತುಗಳನ್ನು ಉತ್ಪಾದಿಸುವ ಬೇರೆ ರಾಷ್ಟ್ರ ಇಲ್ಲ” ಎಂದು ಅವರು ಹೇಳಿದರು.

ಇನ್ನು ರಾಷ್ಟ್ರದ ಆಸ್ತಿಯ ಮೌಲ್ಯ ಅಂದಾಜನ್ನು ಮಾಡುವ ಪ್ರಕ್ರಿಯೆ ಆರಂಭವಾಗಿದ್ದು ಈ ಬಗ್ಗೆ ಅಗಸ್ಟ್ ನಲ್ಲಿ ಘೋಷಿಸಲಾಗುವುದು ಎಂದು ತಿಳಿಸಿದರು. ಇನ್ನು ಅಂತರಾಷ್ಟ್ರೀಯ ಹಣಕಾಸು ಸಂಸ್ಥೆಯೇ ಭಾರತದ ಆರ್ಥಿಕತೆ ಜಪಾನಿಗಿಂತ ಹೆಚ್ಚಿದೆ ಎಂದು ಹೇಳಿದ್ದು, 2024 ರಲ್ಲಿ ಭಾರತ ಐದನೇ ಸ್ಥಾನದಲ್ಲಿದ್ದು, 2025 ರಲ್ಲಿ ನಾಲ್ಕನೇ ಸ್ಥಾನಕ್ಕೆ ಬಂದಿರುವುದು ನಿಜಕ್ಕೂ ಅಭಿಮಾನದ ವಿಷಯವಾಗಿದೆ.

2025 ರ ಭಾರತದ ಸಾಮಾನ್ಯ ಜಿಡಿಪಿ ಡಾಲರ್ 4.187 ಟ್ರಿಲಿಯನ್ ಆಗಿದ್ದು, ಜಪಾನಿಗಿಂತ ಒಂದಿಷ್ಟು ಪ್ರಮಾಣ ಹೆಚ್ಚಿದೆ. ಇನ್ನು ಐಎಂಎಫ್ ಪ್ರಕಾರ ಭಾರತದ ನಾಗರಿಕರ ತಲಾ ಆದಾಯ 2013 – 14 ರಲ್ಲಿ ಡಾಲರ್ 1,438 ಆಗಿದ್ದರೆ ಈಗ 2025 ರಲ್ಲಿ ಡಾಲರ್ 2880 ಆಗಿದೆ.

0
Shares
  • Share On Facebook
  • Tweet It




Trending Now
ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
Tulunadu News June 29, 2026
ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
Tulunadu News June 26, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!
    • ಕರ್ನಾಟಕದ ಪ್ರತಿಭೆ ದೀಕ್ಷಿತ್ ಅಮೀನ್‌ಗೆ ವಿಶ್ವ ಶಾಲಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುವ ಗೌರವ
    • Najlepsze bonusy i sloty w polskim kasynie online
    • ರಾಜ್ಯದಲ್ಲಿ ಕಳೆದ 3 ತಿಂಗಳಿಂದ ಪಿಂಚಣಿ ಸಿಗದೇ ಜನಸಾಮಾನ್ಯರ ಪರದಾಟ :- ಶಾಸಕ ವೇದವ್ಯಾಸ ಕಾಮತ್
    • ಆಟೋದಲ್ಲಿ ಮರೆತಿದ್ದ ₹25 ಲಕ್ಷ ಮೌಲ್ಯದ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ!
    • ತಾನು ಮಾಡದ ತಪ್ಪಿಗೆ ಮೋಹನ್ ಚಂದರ್ ಬಲಿ!
    • ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕ ಹಣ ಪಾವತಿಸಲು ನಿರಾಕರಿಸುವ ವಾಹನಗಳಿಗೆ ಇ-ನೋಟಿಸ್ ಜಾರಿ!
    • ಶಬರಿಮಲೆಗೆ ಮಹಿಳೆಯರ ಪ್ರವೇಶ ಸುಪ್ರೀಂಕೋರ್ಟ್ ವಿಚಾರಣೆ
    • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳ್ಳತನ ಪ್ರಕರಣ: ಶಂಕಿತ ವ್ಯಕ್ತಿಯ ಪತ್ತೆಗೆ ಸುಳ್ಯ ಪೊಲೀಸರಿಂದ ಸಾರ್ವಜನಿಕರಿಗೆ ಮನವಿ
  • Popular Posts

    • 1
      ವಿದ್ಯುತ್ ಕ್ಷೇತ್ರದ ಖಾಸಗೀಕರಣ ವಿರೋಧಿಸಿ ವೇದವ್ಯಾಸ ಕಾಮತರಿಗೆ ಮನವಿ ಸಲ್ಲಿಸಿದ ಒಕ್ಕೂಟ
    • 2
      ಉಡುಪಿ ಕಾಂಗ್ರೆಸ್ ಮುಖಂಡ ಅಮೃತ್ ಶೆಣೈಗೆ 3 ವರ್ಷ ಜೈಲು ಶಿಕ್ಷೆ!

  • Privacy Policy
  • Contact
© Tulunadu Infomedia.

Press enter/return to begin your search