• ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
  • ಸುದ್ದಿ 
  • ಸಿನಿಮಾ
  • ಆರೋಗ್ಯ
  • ಅಭಿಪ್ರಾಯ
  • ಮನೋರಂಜನೆ
Home » Featured ಸುದ್ದಿ 

ಕೋವಿಡ್ ಏರಿಕೆ: ಮಕ್ಕಳ, ವೃದ್ಧರ, ಗರ್ಭೀಣಿಯರ ಬಗ್ಗೆ ಸರಕಾರ ಹೇಳಿದ್ದೇನು?

Tulunadu News Posted On May 27, 2025
0


0
Shares
  • Share On Facebook
  • Tweet It

ಜ್ವರ, ಶೀತ ಇದ್ದರೆ ಮಕ್ಕಳನ್ನು ಶಾಲೆಗೆ ಕಳುಹಿಸಬೇಡಿ, ವೃದ್ಧರು, ಗರ್ಭಿಣಿಯರು ಮಾಸ್ಕ್ ಧರಿಸಿ – ಸರಕಾರ

ಮಕ್ಕಳಿಗೆ ಕೊರೋನಾ ಹರಡದಂತೆ ಮುನ್ನೆಚ್ಚರಿಕೆ ವಹಿಸುವ ಹಿನ್ನಲೆ ಜ್ವರ, ಶೀತವಿರುವ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸಬಾರದು. ಆಡಳಿತ ಮಂಡಳಿ ಅಂಥ ಮಕ್ಕಳಿಗೆ ರಜೆ ನೀಡಬೇಕು. ಸರಕಾರ ಈ ಬಗ್ಗೆ ಮಾರ್ಗಸೂಚಿ ಹೊರಡಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ರಾಜ್ಯದಲ್ಲಿ ಮತ್ತು ಬೆಂಗಳೂರಿನಲ್ಲಿ ಕೋವಿಡ್ ಏರಿಕೆ ಹಿನ್ನಲೆಯಲ್ಲಿ, ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಕೋವಿಡ್ ಎದುರಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದ್ದಾರೆ. ಮಕ್ಕಳ ಬಗ್ಗೆ ಮುನ್ನೆಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ತಿಳಿಸಿದರು.

ಈ ಬಗ್ಗೆ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ” ವಯಸ್ಸಾದವರು, ಗರ್ಭೀಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು. ಈ ಬಗ್ಗೆ ಅರಿವು ಮೂಡಿಸಬೇಕು. ಸಾಮಾಜಿಕ ಮಾಧ್ಯಮಗಳು ಕಾಲಕಾಲಕ್ಕೆ ಸಾರ್ವಜನಿಕರಿಗೆ ಮಾಹಿತಿ ನೀಡಿ. ಅನಗತ್ಯ ಗೊಂದಲ, ಆತಂಕ ಉಂಟಾಗದಂತೆ ಎಲ್ಲರೂ ಕೋವಿಡ್ ವಿರುದ್ಧ ಒಟ್ಟಾಗಿ ಹೋರಾಡಬೇಕಿದೆ ಎಂದು ಸಿಎಂ ತಿಳಿಸಿದರು.

ಗರ್ಭೀಣಿಯರು, ಬಾಣಂತಿಯರ, ಮಕ್ಕಳ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ವಿಶೇಷವಾಗಿ ಗರ್ಭೀಣಿಯರಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದರೆ ಅವರನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸುವುದನ್ನು ನಿಲ್ಲಿಸಬೇಕು. ಹೀಗಾಗಿ ಅವಶ್ಯಕ ಚಿಕಿತ್ಸೆ ಎಲ್ಲಾ ಆಸ್ಪತ್ರೆಗಳಲ್ಲೂ ಲಭ್ಯವಾಗುವಂತೆ ಅಗತ್ಯ ವ್ಯವಸ್ಥೆ ಮಾಡಿಕೊಂಡಿರಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಕೇಂದ್ರ ಸರಕಾರದ ಮಾರ್ಗಸೂಚಿಗಳನ್ನು ಪಾಲಿಸಬೇಕು. ಸದ್ಯಕ್ಕೆ ಅಂತಹ ತುರ್ತು ಇಲ್ಲದಿದ್ದರೂ ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಎಲ್ಲವನ್ನೂ ವ್ಯವಸ್ಥೆ ಮಾಡಬೇಕು. ಆಸ್ಪತ್ರೆಗಳಲ್ಲಿ ಅಗತ್ಯ ಮೂಲ ಸೌಕರ್ಯ ಕಡ್ಡಾಯವಾಗಿ ಇರುವಂತೆ ಕ್ರಮ ಕೈಗೊಳ್ಳಬೇಕು. ಪ್ರತಿ ವಾರ ಅಥವಾ ಮೂರು ದಿನಕ್ಕೆ ಒಮ್ಮೆ ಅಗತ್ಯ ಬಿದ್ದರೆ ಕೋವಿಡ್ ಸಭೆ ಸೇರಿ ಪರಿಸ್ಥಿತಿಯ ಪರಿಶೀಲನೆ ನಡೆಸಿ ತೀವ್ರ ನಿಗಾ ಇಡಬೇಕು ಎಂದು ತಿಳಿಸಿದರು. ಜೊತೆಗೆ ನಿರ್ಲಕ್ಷ್ಯ ತೋರದೇ ಎಲ್ಲಾ ಜಿಲ್ಲಾ ಆಸ್ಪತ್ರೆಗಳು ಸರ್ವಸನ್ನದ್ಧರಾಗಿರಬೇಕು. ಅದರೊಂದಿಗೆ ಯಾವುದೇ ಅಧಿಕಾರಿ, ಸಿಬ್ಬಂದಿ ವಿನಾಕಾರಣ ರಜೆ ಹಾಕದೇ ಕೇಂದ್ರ ಸ್ಥಾನದಲ್ಲಿಯೇ ಇದ್ದು ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.

ಈಗಾಗಲೇ ರಾಜ್ಯದಲ್ಲಿ ಬಹುತೇಕರು ಕೊರೋನಾ ಲಸಿಕೆ ಪಡೆದಿದ್ದಾರೆ. ಆ ಲಸಿಕೆ ರೂಪಾಂತರಿ ವೈರಾಣು ಸೋಂಕುವಿನಿಂದ ರಕ್ಷಣೆ ನೀಡುತ್ತದೆಯೇ ಎಂಬುದನ್ನು ಪರಿಶೀಲಿಸಬೇಕು. ಮುನ್ನೆಚ್ಚರಿಕೆಯಾಗಿ ಅಗತ್ಯಬಿದ್ದರೆ ರೂಪಾಂತರಿ ಕೊರೋನಾ ವೈರಾಣುವಿಗೆ ಸಂಬಂಧಿಸಿದಂತೆ ಲಸಿಕೆ ಸಿದ್ಧಪಡಿಸಿಕೊಳ್ಳಬೇಕು ಎಂದು ತಿಳಿಸಿದರು. ಮುಂದಿನ ದಿನಗಳಲ್ಲಿ ಅಗತ್ಯ ಕಂಡುಬಂದರೆ ವಿಮಾನ ನಿಲ್ದಾಣಗಳಲ್ಲಿ ಹೊರಗಡೆಯಿಂದ ಬರುವ ಪ್ರಯಾಣಿಕರಿಗೆ ಕೋವಿಡ್ ತಪಾಸಣಾ ಘಟಕಗಳನ್ನು ಪ್ರಾರಂಭಿಸಲು ಕ್ರಮ ವಹಿಸಬೇಕು. ಕೋವಿಡ್ ಪ್ರಕರಣಗಳು ಪ್ರವಾಸ ಹಿನ್ನಲೆ ಉಳ್ಳವರಿಂದ ಹೆಚ್ಚಾಗಿ ವರದಿಯಾಗುತ್ತಿದ್ದರೆ ಈ ಬಗ್ಗೆ ತಕ್ಷಣ ಕ್ರಮ ತೆಗೆದುಕೊಳ್ಳಬೇಕು ಎಂದು ಸಿದ್ಧರಾಮಯ್ಯ ಸಭೆಯಲ್ಲಿ ಸೂಚಿಸಿದ್ದಾರೆ ಎನ್ನಲಾಗಿದೆ.

0
Shares
  • Share On Facebook
  • Tweet It




Trending Now
ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
Tulunadu News January 30, 2026
ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
Tulunadu News January 28, 2026
Leave A Reply

Leave a Reply Cancel reply

Your email address will not be published. Required fields are marked *

  • Recent Posts

    • ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ
    • ಕ್ರಿಕೆಟ್ ಪಂದ್ಯಾಟದ ಮೇಲೆ ಗುಂಪು ದಾಳಿಯಿಂದ ಸಾವು: ಆರೋಪಿಗೆ ಜಾಮೀನು ಮಂಜೂರು
    • ನಾನು ಸಾಮಾನ್ಯ ಕಾರ್ಯಕರ್ತ, ಅವರು ನನ್ನ ಬಾಸ್ ಎಂದು ಮೋದಿ ಹೇಳಿದ್ದು ಯಾರನ್ನ!
    • ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ನಡೆದಿತ್ತೇ ಕಿರುಕುಳ? ವೈರಲ್ ವೀಡಿಯೋ ಬಳಿಕ ಆರೋಪಿತ ವ್ಯಕ್ತಿಯ ಆತ್ಮಹತ್ಯೆ
    • ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಈ ಬಾರಿ ಬ್ಯಾಲೆಟ್ ಪೇಪರ್ ಬಳಕೆ!
    • ಕೆಲಸ ಇದೆ ಎಂದು ನಂಬಿ ಬಂದ ಉದ್ಯೋಗಾಂಕ್ಷಿಗಳು! ಬೇಸ್ತುಬಿದ್ದು ವಾಪಾಸ್..
    • ಟೊಮೆಟೋ ತಿನ್ನಲು ಬಂದ ದನದ ಮುಖಕ್ಕೆ ಚೂರಿ ಇರಿತ!
    • ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಕೇರಳ ಸರಕಾರದ ಹೊಸ ನೀತಿಗೆ ಕರ್ನಾಟಕ ವಿರೋಧ!
    • ಸುಳ್ಯ ಶಾಸಕಿ ಪೋಟೋ ಬಳಸಿ ಶ್ರದ್ಧಾಂಜಲಿ ಪೋಸ್ಟ್! ಭಾರೀ ಆಕ್ರೋಶ..
  • Popular Posts

    • 1
      ಐಟಿ ದಾಳಿ- ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ!
    • 2
      ಓಡಿಲ್ನಾಳ ಸುಮಂತ್ ಅನುಮಾನಾಸ್ಪದ ಸಾವು – ಕೂಲಂಕುಷ ತನಿಖೆಗೆ ಗೃಹಸಚಿವರಿಗೆ ಮನವಿ

  • Privacy Policy
  • Contact
© Tulunadu Infomedia.

Press enter/return to begin your search